Advertisement

116 ಅಡಿ ತಲುಪಿದ ಕೆಆರ್‌ಎಸ್; ವಿವಿಧ ಜಲಾಶಯಗಳ ನೀರಿನ ಮಟ್ಟ


ಬೆಂಗಳೂರು, ಸೆಪ್ಟೆಂಬರ್ 06; ಇನ್ನೂ ಎರಡು ದಿನಗಳ ಕಾಲ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 116 ಅಡಿಗೆ ತಲುಪಿದೆ.

ಒಡಿಶಾ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಸೋಮವಾರ ಸಂಜೆ ತಂಪಾದ ಗಾಳಿ ಸಹಿತ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳು ಜುಲೈ, ಆಗಸ್ಟ್‌ನಲ್ಲಿಯೇ ಭರ್ತಿಯಾಗಿವೆ.

ಮುಂದಿನ 2 ದಿನ ಈ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ

ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7ರ ತನಕ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಳೆಯ ಜೊತೆ ತಂಪಾದ ಗಾಳಿ ಬೀಸುತ್ತಿದ್ದು, ಉಷ್ಣಾಂಶ ಇಳಿಮುಖಗೊಂಡಿದೆ.

ಸೆಪ್ಟೆಂಬರ್ 7ರವರೆಗೂ ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ವಾಯುಭಾರ ಕುಸಿತದಿಂದ ಮುಂಗಾರು ಸ್ವಲ್ಪ ಚುರುಕಾದರೂ ಸೆಪ್ಟೆಂಬರ್ 9ರ ಬಳಿಕ ಪುನಃ ದುರ್ಬಲಗೊಳ್ಳಲಿದೆ. ರಾಜ್ಯದ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ..

ತಿಪ್ಪಗೊಂಡನಹಳ್ಳಿ ಡ್ಯಾಂ ನೀರು ಬೆಂಗಳೂರಿಗೆ ಬರುವುದು ಮತ್ತಷ್ಟು ವಿಳಂಬ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಸೋಮವಾರ ಜಲಾಶಯದಲ್ಲಿ 552.56 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 7050 ಕ್ಯುಸೆಕ್ ಆಗಿದೆ, ಹೊರ ಹರಿವು 4555 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರ ಡ್ಯಾಂನಲ್ಲಿ 870.99 ಮೀಟರ್ ನೀರಿನ ಸಂಗ್ರಹವಿದೆ. 4463 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಹಾಸನದಲ್ಲಿರುವ ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 888.53 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 233 ಕ್ಯುಸೆಕ್ ನೀರು ಹರಿದುಬರುತ್ತಿದೆ. ಹೊರ ಹರಿವು 5272 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಸೋಮವಾರದ ನೀರಿನ ಮಟ್ಟ 694.71 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 5225 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2488 ಕ್ಯುಸೆಕ್.

ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಸೋಮವಾರದ ಮಾಹಿತಿಯಂತೆ ಜಲಾಶಯದಲ್ಲಿ 35.38 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 7538 ಕ್ಯುಸೆಕ್ ಆಗಿದೆ, ಹೊರ ಹರಿವು 10885 ಕ್ಯುಸೆಕ್

Advertisement
Advertisement

ಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 657.53 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 3450 ಕ್ಯುಸೆಕ್ ಆಗಿದೆ.

Advertisement
ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. 14758 ಕ್ಯುಸೆಕ್ ನೀರು ಸೋಮವಾರ ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 497.70 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರ ಜಲಾಶಯದಲ್ಲಿ 519.57 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 2141 ಕ್ಯುಸೆಕ್ ಒಳಹರಿವು ಆಗಿದೆ.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 491.68 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 1930 ಕ್ಯುಸೆಕ್ ಆಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದ ಸೋಮವಾರದ ನೀರಿನ ಮಟ್ಟ 554.96 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 8869 ಆಗಿದೆ. ಹೊರ ಹರಿವು 2828 ಕ್ಯುಸೆಕ್.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರದ ನೀರಿನ ಮಟ್ಟ 662.91 ಮೀಟರ್ ಆಗಿದೆ. ಜಲಾಶಯದ ಒಳಹರಿವು 1426 ಕ್ಯುಸೆಕ್ ಇದೆ. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

ಮಲಪ್ರಭಾ ಜಲಾಶಯದ ಸೋಮವಾರದ ನೀರಿನ ಮಟ್ಟ 633.56 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 1394 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

English Summary

Karnataka's weather report and major Dams Water Level Today September 6: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
Read more...