ಬೆಂಗಳೂರು, ಸೆಪ್ಟೆಂಬರ್ 06; ಸೌತ್ ಇಂಡಿಯನ್ ಬ್ಯಾಂಕ್ Probationary officers ಹುದ್ದೆಗಳ ಭರ್ತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8ರ ತನಕ ಅರ್ಜಿಗಳನ್ನು ಹಾಕಬಹುದು.
Probationary officers ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಎಷ್ಟು ಹುದ್ದೆಗಳಿಗೆ ಎಂದು ಸ್ಪಷ್ಟಪಡಿಸಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗೆ 36,000-63,840 ರೂ. ಮಾಸಿಕ ವೇತನವನ್ನು ನೀಡಲಾಗುತ್ತದೆ.
Advertisement
Advertisement
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ (31 ಜುಲೈ 2021ಕ್ಕೆ ಅನ್ವಯ). ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು 800 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್‌ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನೀಡಬೇಕು ಎಂದು ಸೂಚಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅಗತ್ಯವಿರುವ ದಾಖಲೆಗಳ ಪ್ರತಿಗಳನ್ನು ಸಹ ಅಪ್‌ಲೋಡ್ ಮಾಡಬೇಕು.
Advertisement ಅರ್ಜಿಗಳನ್ನು ಸಲ್ಲಿಕೆ ಮಾಡಿದ ಬಳಿಕ ಅಪ್ಲಿಕೇಶನ್ ನಂಬರ್‌ಗಳನ್ನು ಮುಂದಿನ ಪ್ರಕ್ರಿಯೆಗಾಗಿ ಗುರುತು ಮಾಡಿಕೊಳ್ಳಿ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಗೊಂದಲಗಳು ಉಂಟಾದರೆ 1800-425-1809/ 1800-102-9408 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಅಥವ careers@sib.co.in ವಿಳಾಸಕ್ಕೆ ಇ-ಮೇಲ್ ಕಳಿಸಬಹುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.