ಸಾಹಿತಿ, ಶಿಕ್ಷಣತಜ್ಞ ಕು.ಶಿ. ಹರಿದಾಸ ಭಟ್ಟ ಇನ್ನಿಲ್ಲ


ನಮ್ಮ ಪ್ರತಿ-ನಿ-ಧಿ-ಯಿಂ-ದ

ಉಡುಪಿ : ಶಿಕ್ಷಣತಜ್ಞ ಹಾಗೂ ಸಾಹಿತಿ ಪ್ರೊ. ಕು.ಶಿ. ಹರಿದಾಸ ಭಟ್ಟ ಭಾನುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

76 ವರ್ಷದ ಹರಿದಾಸ ಭಟ್ಟ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಿವಂಗತರಿಗೆ ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ವಿವಿಧ ಪ್ರಶಸ್ತಿಗಳು ಸಂದಿವೆ. 1982ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1985ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 86ರಲ್ಲಿ ಫಿನ್‌ಲ್ಯಾಂಡ್‌ಪ್ರಶಸ್ತಿ ಹಾಗೂ 1989ರಲ್ಲಿ ಪ್ರತಿಷ್ಠಿತ ವಿಶ್ವ ಮಾನವ ಪ್ರಶಸ್ತಿ ಇವರಿಗೆ ಲಭಿಸಿತ್ತು.

Advertisement
Advertisement

ಯಕ್ಷಗಾನ ಕಲೆಯನ್ನು ಕಡಲಾಚೆಯಲ್ಲೂ ಹರಡಲು ಇವರು ರಷ್ಯಾ, ಜರ್ಮನಿ, ಬ್ರಿಟನ್‌ ಹಾಗೂ ಅಮೆರಿಕೆಗಳಿಗೆ ಭಾರತದ ಸಾಂಸ್ಕೃತಿಕ ಪ್ರತಿನಿಧಿಯಾಗಿ ಪ್ರವಾಸ ಮಾಡಿದ್ದರು. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳೆರಡರಲ್ಲಿಯೂ ಇವರು ಕೃತಿಗಳನ್ನು ರಚಿಸಿದ್ದಾರೆ.

ಸಂತಾಪ : ಶಾಸಕ ಯು.ಆರ್‌.ಸಭಾಪತಿ, ವಿಧಾನ ಪರಿಷತ್‌ ಸದಸ್ಯ ಡಾ. ವಿ.ಎಸ್‌. ಆಚಾರ್ಯ, ಶಿಕ್ಷಣ ಅಕಾಡೆಮಿಯ ರಿಜಿಸ್ಟ್ರಾರ್‌ ಕೆ.ಕೆ.ಪೈ ಹಾಗೂ ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಗಣ್ಯರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Read more about:

Have a great day!
Read more...