Bengaluru Property Tax: ಬೆಂಗಳೂರಿನ 25 ಲಕ್ಷ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್, ಮೇ 31ರ ವರೆಗೆ ಮಾತ್ರ ಲಭ್ಯ
Bengaluru Property Tax: ಬೆಂಗಳೂರಿನ ಆಸ್ತಿದಾರರಿಗೆ ಕರ್ನಾಟಕ ಸರ್ಕಾರವು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನ 25 ಲಕ್ಷಕ್ಕೂ ಹೆಚ್ಚು ಆಸ್ತಿದಾರರಿಗೆ ಆಸ್ತಿ ತೆರಿಗೆ ಪಾವತಿ ವಿಚಾರದಲ್ಲಿ ದೊಡ್ಡ ಗುಡ್‌ನ್ಯೂಸ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಆಸ್ತಿ ತೆರಿಗೆ ಪಾವತಿಯ ವಿಚಾರದಲ್ಲಿ ಭರ್ಜರಿ ರಿಯಾಯಿತಿ ಕೊಡಲಾಗಿದೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಆಸ್ತಿ ಮಾಲೀಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು, ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿನ ಆಸ್ತಿದಾರರಿಗೆ ಆಸ್ತಿ ತೆರಿಗೆ ಪಾವತಿಗಳ ಮೇಲಿನ ಶೇ.5 ರಷ್ಟು ರಿಯಾಯಿತಿ ಘೋಷಿಸಿದೆ. ಆಸ್ತಿ ತೆರಿಗೆ ಪಾವತಿಯ ಮೇಲಿನ ರಿಯಾಯಿತಿಯು ಮೇ 31, 2026 ರವರೆಗೆ ಇರಲಿದೆ. ಈ ನಿರ್ಧಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಗೆ ಒಳಪಡುವ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಆಸ್ತಿದಾರರಿಗೆ ಅನುಕೂಲವಾಗಲಿದೆ. ಮೇ ಮುಕ್ತಾಯದ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡಿದರೆ, ಆಸ್ತಿ ತೆರಿಗೆ ಪಾವತಿಯ ಮೇಲೆ ರಿಯಾಯಿತಿ ಸಿಗಲಿದೆ.

ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಸೇರಿದಂತೆ ಅಪಾರ್ಟ್‌ಮೆಂಟ್ ನಿವಾಸಿಗಳು ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿನ ಗೊಂದಲಗಳು ಎದುರಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನಲ್ಲಿ ಆಸ್ತಿಗಳ ಆಸ್ತಿ ತೆರಿಗೆ ಮೇಲೆ ರಿಯಾಯಿತಿ ಘೋಷಿಸಿದೆ. ವಿಶೇಷವಾಗಿ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ವಿಧಿಸುತ್ತಿರುವ ತೆರಿಗೆ ವಿಚಾರವು ಗೊಂದಲಕ್ಕೆ ಕಾರಣವಾಗಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ತಮ್ಮ ವಿನಂತಿಯ ನಂತರ ರಾಜ್ಯ ಸರ್ಕಾರ ವಿಸ್ತರಣೆಯನ್ನು ಅನುಮೋದಿಸಿದೆ ಎಂದು ದೃಢಪಡಿಸಿದ್ದಾರೆ ಎಂದು DH ವರದಿ ಮಾಡಿದೆ. ರಿಯಾಯಿತಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಅಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.
ಬೆಂಗಳೂರನ ಆಸ್ತಿದಾರರಿಗೆ ಗುಡ್‌ನ್ಯೂಸ್
ಬೆಂಗಳೂರಿನ ಆಸ್ತಿದಾರರಿಗೆ ಎರಡು ವಿಚಾರದಲ್ಲಿ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ಮೊದಲನೆಯದಾಗಿ ಬೆಂಗಳೂರಿನ ಆಸ್ತಿದಾರರ ಆಸ್ತಿ ತೆರಿಗೆ ಪ್ರಮಾಣವನ್ನು ಹೊಸದಾಗಿ ಹೆಚ್ಚಿಸಲಾಗಿಲ್ಲ. ಅಲ್ಲದೆ ಆಸ್ತಿ ತೆರಿಗೆ ಪಾವತಿಯ ಮೇಲೆ ನೀಡಲಾಗಿದ್ದ ರಿಯಾಯಿತಿಯನ್ನೂ ವಿಸ್ತರಿಸಲಾಗಿದೆ. ಇದು ಬೆಂಗಳೂರಿನ ಆಸ್ತಿದಾರರಲ್ಲಿ ನಿರಾಳತೆ ಮೂಡಿಸಿದ್ದು, ಬೆಂಗಳೂರಿನ ಆಸ್ತಿದಾರರಿಗೆ ಸಂತೋಷವನ್ನುಂಟು ಮಾಡಿದೆ.
ಆದಾಗ್ಯೂ, ಈ ವರ್ಷ ಒಟ್ಟಾರೆ ಆದಾಯ ಸಂಗ್ರಹದಲ್ಲಿ ಹಿನ್ನಡೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿ ಅಂದಾಜು 500 ಕೋಟಿ ರೂ. ಮೊತ್ತದ ಆಸ್ತಿ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಕಳೆದ ವರ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 1,500 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಆದರೆ ಇದೀಗ ಈ ವರ್ಷ ಅದು ಕಡಿಮೆಯಾಗಿದೆ.
ಹೆಚ್ಚುವರಿ ಸಮಯ ನೀಡುವುದರಿಂದ ಆಸ್ತಿ ಮಾಲೀಕರು ತಮ್ಮ ತೆರಿಗೆಗಳನ್ನು ಪಾವತಿಸಲು ಸಮಯ ಸಿಗುತ್ತದೆ ಮತ್ತು ಇದರಿಂದ ಪಾಲಿಕೆಗಳ ಆದಾಯದ ಕೊರತೆಯ ಒಂದು ಭಾಗವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯವ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.













Click it and Unblock the Notifications