Bengaluru Property Updates: ಬೆಂಗಳೂರಿನ 1 ಲಕ್ಷ ಆಸ್ತಿದಾರರಿಗೆ ಜಿಬಿಎ ಶಾಕ್: ಆಸ್ತಿ ಉಳಿಸಿಕೊಳ್ಳಲು ಇದೊಂದೇ ಮಾರ್ಗ

Bengaluru Property Updates: ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಹಲವು ಆಸ್ತಿಗಳು ಇನ್ನೂ ಬಿ ಖಾತಾ ವ್ಯಾಪ್ತಿಯಲ್ಲಿವೆ. ಅಲ್ಲದೆ ಸಾವಿರಾರು ಆಸ್ತಿಗಳು ಇನ್ನೂ ತೆರಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಅಲ್ಲದೆ ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳಿಗೂ ಆಸ್ತಿ ತೆರಿಗೆ ಸಂಗ್ರಹದಿಂದ ಬರುವ ಹಾಗೂ ಆಸ್ತಿಗಳಿಗೆ ಸಂಬಂಧಿಸಿದಂತೆ ವಿಧಿಸುವ ಆದಾಯದಿಂದಲೇ ಅತಿ ಹೆಚ್ಚು ಆದಾಯ ಬರುತ್ತಿದೆ. ಆದರೆ ಬೆಂಗಳೂರಿನಲ್ಲಿ ಅಂದಾಜು 1 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಈ ರೀತಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇದೀಗ ಚುರುಕು ಮುಟ್ಟಿಸುವುದಕ್ಕೆ ಮುಂದಾಗಿದೆ.

ಹೌದು, ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಸಿ ಮುಟ್ಟಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮುಂದಾಗಿವೆ. 1 ಲಕ್ಷಕ್ಕೂ ಹೆಚ್ಚು ಆಸ್ತಿಗಳು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ನೋಟಿಸ್ ಜಾರಿ ಮಾಡುವುದಕ್ಕೆ ಮುಂದಾಗಿರುವುದಾಗಿ ಹೇಳಲಾಗಿದೆ. ಬೆಂಗಳೂರು ನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಆಸ್ತಿಗಳು ತೆರಿಗೆ ಬಾಕಿ ಉಳಿಸಿಕೊಂಡಿವೆ, ಇದು ಒಟ್ಟು ಆಸ್ತಿಗಳಲ್ಲಿ ಸುಮಾರು ಶೇ 5% ರಷ್ಟಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಹೇಳಿದ್ದಾರೆ.

Bengaluru Property Update

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ದೀರ್ಘಕಾಲದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಸೇರಿದ ಆಸ್ತಿಗಳ ಹರಾಜನ್ನು ಪ್ರಾರಂಭಿಸಿದವು. ಇದೀಗ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮುಂದಾಗಿವೆ.

ಆಸ್ತಿ ತೆರಿಗೆ ಬಾಕಿ ಪಾವತಿ ಮಾಡದ ಆಸ್ತಿಗಳಿಗೆ ಸಂಕಷ್ಟ

ಇನ್ನು ಬೆಂಗಳೂರಿನಲ್ಲಿ ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿಗಳಿಗೆ ಶಾಕ್ ಕೊಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ನಿರ್ಧರಿಸಿದೆ. ಬಾಕಿ ಪಾವತಿ ಮಾಡದೆ ಇರುವ ಆಸ್ತಿದಾರರ ಆಸ್ತಿಗಳನ್ನು ಹರಾಜು ಹಾಕುವ ಸಾಧ್ಯತೆ ಇದೆ. ಆಸ್ತಿಗಳ ಹರಾಜು ಪ್ರಾರಂಭಿಸುವ ಮೊದಲೇ, ಬಾಕಿ ಪಾವತಿಸಲು ನಾವು ನೋಟಿಸ್‌ಗಳನ್ನು ಕಳುಹಿಸಿದ್ದೇವೆ.

ಆದರೆ ಹಲವು ಆಸ್ತಿದಾರರು ಈ ನೋಟಿಸ್‌ಗಳಿಗೆ ಪ್ರತಿಕ್ರಿಯಿಸಲಿಲ್ಲ, ಆದ್ದರಿಂದ ನಾವು ಆಸ್ತಿಗಳ ಹರಾಜು ಪ್ರಕ್ರಿಯೆಗೆ ಮುಂದಾಗುವುದು ಅನಿವಾರ್ಯವಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹರಾಜಾದ ಎಲ್ಲಾ ಆಸ್ತಿ ಮಾಲೀಕರಿಗೆ ಮುಟ್ಟುಗೋಲು ಹಾಕಿಕೊಳ್ಳುವ ಮೊದಲೇ ನೋಟಿಸ್‌ಗಳು ಮತ್ತು ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಆಸ್ತಿದಾರರು ಆಸ್ತಿ ಉಳಿಸಿಕೊಳ್ಳುವ ಕೊನೆಯ ಆಯ್ಕೆ

ಇನ್ನು ಬೆಂಗಳೂರಿನಲ್ಲಿರುವ ಆಸ್ತಿದಾರರು ತಮ್ಮ ಆಸ್ತಿ ಉಳಿಸಿಕೊಳ್ಳುವುದಕ್ಕೆ ಕೊನೆಯ ಆಯ್ಕೆಯಾಗಿ ಬಾಕಿ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿ ಮಾಡಬೇಕಾಗಿದೆ. ಆಸ್ತಿ ತೆರಿಗೆ ಪಾವತಿ ಮಾಡದೆ ದೀರ್ಘ ಅವಧಿಗೆ ಉಳಿಸಿಕೊಂಡಿದ್ದರೆ, ಆಸ್ತಿಯನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಆಸ್ತಿ ತೆರಿಗೆ ಪಾವತಿ ಮಾಡುವುದು ಉತ್ತಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+