Gruha Jyothi Scheme: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಬೆಸ್ಕಾಂ ಗುಡ್‌ನ್ಯೂಸ್ ಕೊಟ್ಟಿದೆ. ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದ್ದು, ಇದಕ್ಕೆ ಹೇಗೆ ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಪರಿಷ್ಕರಣೆ ಪ್ರಕ್ರಿಯೆ ಹೇಗೆ ಎನ್ನುವ ಗೊಂದಲ ಸಾರ್ವಜನಿಕರಲ್ಲಿತ್ತು. ಇದೀಗ ಈ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಬೆಂಗಳೂರಿನಲ್ಲಿರುವ ಬಾಡಿಗೆ ಮನೆಯಲ್ಲಿ ಇರುವವರಿಗೆ ಹಾಗೂ ಆಸ್ತಿದಾರರಿಗೆ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇದೀಗ ಹೊಸದಾಗಿ ಅಪ್ಡೇಟ್ಸ್ ನೀಡಲಾಗಿದೆ. ಗೃಹ ಜ್ಯೋತಿ ಯೋಜನೆ - ಸ್ಥಳದಲ್ಲೇ ದಾಖಲೆ ಪರಿಶೀಲನೆ, ಸ್ಥಳದಲ್ಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎಂದು ಬೆಸ್ಕಾಂ ಹೇಳಿದೆ. ಬೆಸ್ಕಾಂ ಮೀಟರ್ ರೀಡರ್‌ಗಳು ನಿಮ್ಮ ಮನೆ ಬಾಗಿಲಿಗೆ ಬರಲಿದ್ದು, ಗ್ರಾಹಕರು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಹಕರಿಸಿ ಎಂದೂ ಹೇಳಲಾಗಿದೆ. ಇದು ಹೇಗೆ ನಡೆಯುತ್ತದೆ ಹಾಗೂ ಇದಕ್ಕೆ ಯಾವ ದಾಖಲೆಗಳನ್ನು ಸಲ್ಲಿಕೆ ಮಾಡಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
Gruha Jyothi Scheme: ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಪರಿಶೀಲನೆ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗುತ್ತಿದೆ. ಮೀಟರ್ ರೀಡರ್‌ಗಳು ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಹಕರಿಸಿ ಎಂದು ಬೆಸ್ಕಾಂ ಹೇಳಿದೆ. ಗೃಹಜ್ಯೋತಿಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಮುಂದುವರಿಸಲು ಬೆಸ್ಕಾಂ ಮೀಟರ್ ರೀಡರ್‌ಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ಅಗತ್ಯ ದಾಖಲೆಗಳನ್ನು ಪಡೆದು ಅರ್ಜಿ ತುಂಬಲು ಸಹಕರಿಸಲಿದ್ದಾರೆ. ಅದಕ್ಕೆ ಅಗತ್ಯವಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ ಎಂದು ಹೇಳಲಾಗಿದೆ.
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಮಾಡುವಾಗ ಬೇಕಾಗುವ ದಾಖಲೆಗಳು 1. ಆಧಾರ್ ಕಾರ್ಡ್ 2. ವೋಟರ್ ಐಡಿ 3. ರೇಷನ್ ಕಾರ್ಡ್ 4. ಪ್ಯಾನ್ ಕಾರ್ಡ್ 5. ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 6. ಬಾಡಿಗೆ ಒಪ್ಪಂದದ ಪತ್ರ (ಅನ್ವಯಿಸುವಲ್ಲಿ ಮಾತ್ರ) ಮೀಟರ್ ರೀಡಗಳೇ ನಿಮ್ಮ ದಾಖಲೆಗಳನ್ನು ಮೊಬೈಲ್ ಅಪ್ಲಿಕೇಷನ್‌ಗೆ ದಾಖಲಿಸಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ನೆರವಾಗಲಿದ್ದಾರೆ. ಇನ್ನು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಬೆಸ್ಕಾಂನಿಂದ ಸಹಾಯವಾಣಿ ಪರಿಚಯಿಸಲಾಗಿದೆ. ಗೃಹಜ್ಯೋತಿ ವಿಶೇಷ ಸಹಾಯವಾಣಿ ಸಂಖ್ಯೆಗಳಾದ 9480816111, 9480816112, 9480816113 ಮತ್ತು 9480816114 ಗಳಿಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಅಥವಾ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಇನ್ನು ಗೃಹಜ್ಯೋತಿ ಯೋಜನೆಯಲ್ಲಿ ನಿಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲನೆ ಮಾಡುವುದು ತುಂಬಾ ಸುಲಭವಾಗಿದೆ. ಸರ್ಕಾರದ ಅಧಿಕೃತ Seva Sindhu Status Tracker ಲಿಂಕ್‌ಗೆ ಭೇಟಿ ಕೊಡಿ. ನಂತರ ನಿಮ್ಮ ವಿದ್ಯುತ್ ಸರಬರಾಜು ಮಾಡುವ ಕಂಪನಿಯನ್ನು (ಉದಾಹರಣೆಗೆ: BESCOM) ಆಯ್ಕೆ ಮಾಡಿಕೊಳ್ಳಿ. ನಿಮ್ಮ ವಿದ್ಯುತ್ ಬಿಲ್‌ನಲ್ಲಿರುವ ಖಾತೆ ಐಡಿ (Account ID/Connection ID) ಯನ್ನು ನಮೂದಿಸಿ ಇದಾದ ನಂತರ 'Submit' ಅಥವಾ 'Check Status' ಬಟನ್ ಕ್ಲಿಕ್ ಮಾಡಿ. ನಿಮ್ಮ ಅರ್ಜಿಯ ಸ್ಥಿತಿ ಮತ್ತು ಫಲಾನುಭವಿಗಳ ವಿವರಗಳು ಪರದೆಯ ಮೇಲೆ ಬರಲಿದೆ. Gruha Jyothi Scheme: ಈ ದಾಖಲೆಗಳನ್ನು ಸಿದ್ಧವಾಗಿ ಇರಿಸಿಕೊಳ್ಳಿ ಎಂದ ಬೆಸ್ಕಾಂ
Gruha Jyothi Scheme: ಸಹಾಯವಾಣಿ ಪರಿಚಯ
Gruha Jyothi Scheme: ಉಚಿತ ವಿದ್ಯುತ್ ಯೋಜನೆ: ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವುದು ಹೇಗೆ, ಹೊಸ ದಾಖಲೆಗಳ ವಿವರ
ಗೃಹಜ್ಯೋತಿ ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಸುಲಭ