SIR: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆದಿದೆ. ಇನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲೂ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಹಂತದಲ್ಲಿ ಗೊಂದಲ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಮತದಾರರ ಸಹಾಯ ಕೇಂದ್ರಗಳನ್ನು (VFCs) ಸ್ಥಾಪಿಸಿಲಾಗಿದೆ ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ದಕ್ಷಿಣ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಕಾರ್ಯಕ್ರಮದ ಅಂಗವಾಗಿ, ಮತದಾರರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸಹಾಯವನ್ನು ಒದಗಿಸುವ ಉದ್ದೇಶದಿಂದ ಅಪರ ಜಿಲ್ಲಾ ಚುನಾವಣಾಧಿಕಾರಿಗಳ (ದಕ್ಷಿಣ) ವ್ಯಾಪ್ತಿಯಲ್ಲಿ ಒಟ್ಟು 98 ಮತದಾರರ ಸಹಾಯ ಕೇಂದ್ರಗಳನ್ನು (VFCs) ಸ್ಥಾಪಿಸಿಲಾಗಿದೆ ಎಂದು ಬೆಂಗಳೂರಿನ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ. ಎನ್. ರಮೇಶ್ ಅವರು ತಿಳಿಸಿದ್ದಾರೆ.
ವಿಶೇಷ ಪರಿಷ್ಕರಣೆಯ ಅಂಗವಾಗಿ ಸ್ಥಾಪಿಸಲಾಗಿರುವ ಈ ಮತದಾರರ ಸಹಾಯ ಕೇಂದ್ರಗಳು ಆಯಾ ವ್ಯಾಪ್ತಿಯ ಸಂಬಂಧಿತ ವಾರ್ಡ್ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ತಮ್ಮ ವ್ಯಾಪ್ತಿಯ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಮತದಾರರು ಈ ಸಹಾಯ ಕೇಂದ್ರಗಳಲ್ಲಿ ಪ್ರಮುಖವಾಗಿ 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಗುರುತಿಸಲು ನೆರವು ಪಡೆಯಬಹುದು. ಇದರೊಂದಿಗೆ ಗಣತಿ ನಮೂನೆಯನ್ನು (Enumeration Form) ಸರಿಯಾಗಿ ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ, ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಲ್ಲಿರುವ ಯಾವುದೇ ರೀತಿಯ ಸಂದೇಹಗಳಿಗೆ ಪರಿಹಾರ ಮತ್ತು ಒಟ್ಟಾರೆ ಚುನಾವಣಾ ಪ್ರಕ್ರಿಯೆಯ ಕುರಿತು ಸೂಕ್ತ ಸಲಹೆಯನ್ನು ಇಲ್ಲಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮತದಾರರ ಪಟ್ಟಿಯ ನಿಖರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕ್ಷೇತ್ರವಾರು ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ 09, ವಿಜಯನಗರ ಕ್ಷೇತ್ರದಲ್ಲಿ 08, ಬಸವನಗುಡಿ ಕ್ಷೇತ್ರದಲ್ಲಿ 07, ಪದ್ಮನಾಭನಗರ ಕ್ಷೇತ್ರದಲ್ಲಿ 16, ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ 25, ಜಯನಗರ ಕ್ಷೇತ್ರದಲ್ಲಿ 10 ಹಾಗೂ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ 23 ಕೇಂದ್ರಗಳು ಸೇರಿದಂತೆ ಒಟ್ಟು 98 ಸಹಾಯ ಕೇಂದ್ರಗಳು ಸಾರ್ವಜನಿಕರ ಸೇವೆಗೆ ಲಭ್ಯವಿವೆ ಎಂದು ವಿವರಿದರು. ಸಾರ್ವಜನಿಕರು ಈ ಮತದಾರರ ಸಹಾಯ ಕೇಂದ್ರಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಮತದಾರರ ಪಟ್ಟಿಯ ನಿಖರತೆ ಹಾಗೂ ಪಾರದರ್ಶಕತೆಯನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಕೋರಿದ್ದಾರೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಚುರುಕು ಪಡೆದುಕೊಂಡಿದೆ.SIR: ಸಂಬಂಧಿತ ವಾರ್ಡ್ ಕಚೇರಿಗಳಲ್ಲಿ ಸೇವೆ ಲಭ್ಯ
ಸಹಾಯ ಕೇಂದ್ರಗಳಲ್ಲಿ ಲಭ್ಯವಿರುವ ಪ್ರಮುಖ ಸೇವೆಗಳು
ವಿಧಾನಸಭಾ ಕ್ಷೇತ್ರವಾರು ಮತದಾರರ ಸಹಾಯ ಕೇಂದ್ರಗಳ ವಿವರ