ದೇಶದ ವಿವಿಧ ನಗರಗಳಲ್ಲಿ ಏಪ್ರಿಲ್ 18ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

ಬೆಂಗಳೂರು, ಏಪ್ರಿಲ್ 18: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿ, ಸತತ 15 ದಿನಗಳ ಕಾಲ ತಟಸ್ಥವಾಗಿದ್ದ ತೈಲ ದರವು ಕಳೆದ ಗುರುವಾರ ಕೊಂಚ ಇಳಿಕೆಗೊಂಡಿತ್ತು.

ಇಂದು( ಭಾನುವಾರ) ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 93.04 ರೂ. ಇದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರ (ಏ.18) ತೈಲ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

 Petrol And Diesel Prices On 18 April Check Rates In Your City

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ 80.73 ರೂ. ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.62 ರೂ. ಮತ್ತು ಡೀಸೆಲ್ ದರ 83.61 ರೂ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.83 ರೂ. ಮತ್ತು ಡೀಸೆಲ್ ದರ 87.81 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.43 ರೂ. ಮತ್ತು ಡೀಸೆಲ್ ದರ 85.60 ರೂ.

Recommended Video

      ಕೊರೊನಾ ವಿರುದ್ಧ ಹೋರಾಟಕ್ಕೆ ಸಾಥ್ ನೀಡಿದ ರೈಲ್ವೆ ಇಲಾಖೆ.. ಇಂದಿನಿಂದ Oxygen Express ಸಂಚಾರ | Oneindia Kannada

      ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.99 ರೂ. ಮತ್ತು ಡೀಸೆಲ್ ದರ 88.05 ರೂ. ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.43 ರೂ. ಮತ್ತು ಡೀಸೆಲ್ ದರ 85.75 ರೂ. ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+