Kerala Assembly Elections 2026: ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಈ ಕಾರಣಕ್ಕೆ ಸಂಕಷ್ಟ

Kerala Assembly Elections 2026: ಕೇರಳಂ ವಿಧಾನಸಭೆ ಚುನಾವಣೆಯು ಈ ಬಾರಿ ಆಡಳಿತ ವಿರೋಧಿ ಅಲೆಯಿಂದ ಹೆಚ್ಚು ಚರ್ಚೆಯಲ್ಲಿದೆ. ಈ ಬಾರಿ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಒಂದೊಮ್ಮ ಕೇರಳಂನಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ, ಕರ್ನಾಟಕಕ್ಕೆ ಹೊಸ ತಲೆನೋವು ಶುರುವಾಗುವ ಸಾಧ್ಯತೆ ಇದೆ. ಹೌದು ಸಾಮಾನ್ಯವಾಗಿ ನೆರೆಹೊರೆಯ ರಾಜ್ಯಗಳಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ಸಮಸ್ಯೆಗಳು ಇರುವುದಿಲ್ಲ ಎನ್ನುವುದು ವಾಡಿಕೆ. ಆದರೆ ಈ ಬಾರಿ ಕೇರಳಂನಲ್ಲಿ ಕಾಂಗ್ರೆಸ್ ಪಕ್ಷವು ಒಂದೊಮ್ಮೆ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ನಿರ್ದಿಷ್ಟ ವಿಷಯದಲ್ಲಿ ಸವಾಲು ಎದುರಾಗುವ ಸಾಧ್ಯತೆ ಇದೆ. ಕರ್ನಾಟಕಕ್ಕೆ ಎದುರಾಗಲಿರುವ ಸವಾಲು ಏನು ಹಾಗೂ ಕೇರಳ ವಿಧಾನಸಭೆ ಚುನಾವಣೆ 2026ಕ್ಕೂ ಕರ್ನಾಟಕಕ್ಕೂ ಏನು ಸಂಬಂಧ ಎನ್ನುವ ವಿವರ ಇಲ್ಲಿದೆ.

ಕೇರಳಂ ವಿಧಾನಸಭೆಯ 140 ಸ್ಥಾನಗಳಿಗೆ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ಕೇರಳಂನಲ್ಲಿ ಮುಖ್ಯವಾಗಿ ಎಡ ಪ್ರಜಾಸತ್ತಾತ್ಮಕ ರಂಗ (LDF) ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಎಂಬ ಎರಡು ಪ್ರಮುಖ ಒಕ್ಕೂಟಗಳ ನಡುವೆ ಸದಾ ಸ್ಪರ್ಧೆ ನಡೆಯುತ್ತದೆ.

Kerala Assembly Elections 2026

ಈ ಬಾರಿಯೂ ಇದು ಭಿನ್ನವಾಗಿಲ್ಲ. ಕೇರಳಂನಲ್ಲಿ 140 ಸದಸ್ಯರ ವಿಧಾನಸಭಾ ಕ್ಷೇತ್ರಗಳಿವೆ. ಕೇರಳದ ವಿಧಾನಸಭೆ ಮ್ಯಾಜಿಕ್ ನಂಬರ್ 71 ಆಗಿದೆ. ಕೇರಳದಲ್ಲಿ 14 ಜಿಲ್ಲೆಗಳಿದ್ದು, ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ (LDF) ಮೈತ್ರಿಕೂಟವು ಅಧಿಕಾರದಲ್ಲಿದೆ. ಆದರೆ, ಎಲ್‌ಡಿಎಫ್‌ಗೆ ಈ ಬಾರಿ ಆಡಳಿತ ವಿರೋಧಿ ಅಲೆ ಎದುರಾಗಿದ್ದು, ಸಹಜವಾಗಿಯೇ ಕಾಂಗ್ರೆಸ್ - ಯುಡಿಎಫ್ ಪರ ಜನರ ಒಲವು ಇದೆ. ಆದರೆ ಕೇರಳಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಅದಕ್ಕೆ ಮುಖ್ಯ ಕಾರಣ ಬಂಡೀಪುರ ರಾತ್ರಿ ಸಂಚಾರ ವಿಚಾರ.

ಬಂಡೀಪುರ ರಾತ್ರಿ ಸಂಚಾರಕ್ಕೆ ಅವಕಾಶ ಸಿಗುವ ಸಾಧ್ಯತೆ

ಇನ್ನು ಕೇರಳಂನಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ, ಬಂಡೀಪುರ ರಾತ್ರಿ ಸಂಚಾರಕ್ಕೆ ಅವಕಾಶ ಕೊಡುವ ಸಾಧ್ಯತೆ ಇದೆ. ಈ ಆತಂಕಕ್ಕೆ ಮುಖ್ಯ ಕಾರಣ ವಯನಾಡ್‌ನ ಲೋಕಸಭೆ ಸಂಸದರಾದ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರ ರಾತ್ರಿ ಸಂಚಾರಕ್ಕೆ ಅವಕಾಶ ಕೊಡುವ ಬಗ್ಗೆ ಪ್ರಸ್ತಾಪಿಸುತ್ತಿರುವುದು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ (NH 766) ರಾತ್ರಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ.

ಈ ವಿಚಾರದಲ್ಲಿ ಕೇರಳದ ರಾಜಕಾರಣಿಗಖ ಲಾಬಿಯೂ ನಿರಂತರವಾಗಿ ನಡೆಯುತ್ತಿದೆ. ಆದರೆ ಕರ್ನಾಟಕವು ಈ ವಿಚಾರದಲ್ಲಿ ರಾಜಿ ಆಗುತ್ತಿಲ್ಲ. ಆದರೆ, ಇದೀಗ ಕೇರಳಂನಲ್ಲೂ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ, ಬಂಡೀಪುರ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಲದೆ ಈ ಬಾರಿಯ ಕೇರಳಂ ವಿಧಾನಸಭೆ ಚುನಾವಣೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿರುವುದು ಕನ್ನಡಿಗರ ತಲೆನೋವಿಗೆ ಕಾರಣವಾಗಿದೆ. ಇತ್ತೀಚೆಗೆ ಕೇರಳದಿಂದ ಈ ನಿಷೇಧವನ್ನು ತೆರವುಗೊಳಿಸಲು ಒತ್ತಡವಿದ್ದರೂ, ಪರಿಸರವಾದಿಗಳು ಮತ್ತು ಸ್ಥಳೀಯರು 'ಬಂಡೀಪುರ ಉಳಿಸಿ' (Save Bandipur) ಎನ್ನುವ ವಿಶೇಷ ಅಭಿಯಾನ ನಡೆಸಿದ್ದರು.

ಬಂಡೀಪುರ ರಾತ್ರಿ ಸಂಚಾರದ ಬಗ್ಗೆ ಪ್ರಿಯಾಂಕಾ ಗಾಂಧಿ ಹೇಳಿದ್ದೇನು

ಕರ್ನಾಟಕ ಹಾಗೂ ಕೇರಳದ ನಡುವೆ ಮುಖ್ಯವಾಗಿ ಬಂಡೀಪುರದಲ್ಲಿ ರಾತ್ರಿ ಸಂಚಾರ ಅವಕಾಶವನ್ನು ನಿಲ್ಲಿಸಲಾಗಿದೆ. ವನ್ಯಜೀವಿಗಳ ಹಿತದೃಷ್ಟಿಯಿಂದ ಈ ರೀತಿ ಕ್ರಮವನ್ನು ಕರ್ನಾಟಕವು ತೆಗೆದುಕೊಂಡಿದೆ. ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕೊಡುವುದೇ ನನ್ನ ಮೊದಲ ಆದ್ಯತೆ ಎಂದು ಈ ಹಿಂದೆ ಕಾಂಗ್ರೆಸ್‌ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+