ಅಫ್ಘಾನಿಸ್ತಾನದಲ್ಲಿ "ರಾಷ್ಟ್ರೀಯ ದಂಗೆ"; ಪಂಜ್ ಶೀರ್ ನಾಯಕನ ಆಡಿಯೋ ಸಂದೇಶ

ಕಾಬೂಲ್, ಸಪ್ಟೆಂಬರ್ 6: ಅಫ್ಘಾನಿಸ್ತಾನದ ಪಂಜ್ ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರುದ್ಧ ರಾಷ್ಟ್ರೀಯ ದಂಗೆ ನಡೆಸುವಂತೆ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಆಫ್ ಅಫ್ಘಾನಿಸ್ತಾನ ನಾಯಕ ಅಹ್ಮದ್ ಮಸೂದ್ ಸಂದೇಶ ರವಾನಿಸಿದ್ದಾರೆ.

ಸೋಮವಾರ ಮಾಧ್ಯಮಗಳಿಗೆ ಕಳುಹಿಸಿದ ಆಡಿಯೋ ಸಂದೇಶದಲ್ಲಿ ಅಫ್ಘಾನಿಸ್ತಾನದ ಪರವಾಗಿ ದಂಗೆ ಏಳುವಂತೆ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಆಫ್ ಅಫ್ಘಾನಿಸ್ತಾನ ಕಮಾಂಡರ್ ಅಹ್ಮದ್ ಮಸೂದ್ ದೇಶದ ಪ್ರಜೆಗಳಿಗೆ ಕರೆ ನೀಡಿದ್ದಾರೆ.

"ನೀವು ಎಲ್ಲಿದ್ದರೂ, ಒಳಗೆ ಅಥವಾ ಹೊರಗೆ, ನಮ್ಮ ದೇಶದ ಘನತೆ, ಸ್ವಾತಂತ್ರ್ಯ ಮತ್ತು ಸಮೃದ್ಧಿಗಾಗಿ ರಾಷ್ಟ್ರೀಯ ದಂಗೆಯನ್ನು ಆರಂಭಿಸಲು ನಾನು ನಿಮಗೆ ಕರೆ ನೀಡುತ್ತೇನೆ," ಎಂದು ಆಡಿಯೋ ಸಂದೇಶದಲ್ಲಿ ಹೇಳಲಾಗಿದೆ. ಇನ್ನೊಂದು ದಿಕ್ಕಿನಲ್ಲಿ ಇದೇ ಪಂಜ್ ಶೀರ್ ಪ್ರಾಂತ್ಯವನ್ನು ಹಿಡಿತಕ್ಕೆ ತೆಗೆದುಕೊಂಡು ಹೊಸ ಸರ್ಕಾರ ರಚನೆಗೆ ತಾಲಿಬಾನ್ ಯೋಜನೆ ರೂಪಿಸುತ್ತಿದೆ.

Afghanistan: Panjshir Leader Calls For National Uprising In Audio Message

ಸರ್ಕಾರ ರಚನೆಗೆ ತಾಲಿಬಾನ್ ಯೋಜನೆ:

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ ಪ್ರಕ್ರಿಯೆ ಯಾವಾಗ ಪೂರ್ಣಗೊಳ್ಳಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಆಫ್ ಅಫ್ಘಾನಿಸ್ತಾನ ಕಠಿಣ ಪೈಪೋಟಿ ನೀಡುತ್ತಿರುವ ಪಂಜ್ ಶೀರ್ ಪ್ರಾಂತ್ಯವನ್ನು ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ಹೊಸ ಸರ್ಕಾರ ರಚಿಸಲಾಗುವುದು ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ ಪ್ರಕ್ರಿಯೆಯು ಬಹುತೇಕ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ತಾಲಿಬಾನ್ ಸಂಘಟನೆಯಿಂದ ಚೀನಾ, ರಷ್ಯಾ, ಟರ್ಕಿ, ಕ್ವಾತಾರ, ಪಾಕಿಸ್ತಾನ ಮತ್ತು ಇರಾಕ್ ರಾಷ್ಟ್ರಗಳಿಗೆ ಅಹ್ವಾನ ನೀಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸುವ ಬಗ್ಗೆ ಸೋಮವಾರ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಕಾಬೂಲ್ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಯುದ್ಧ ಅಂತ್ಯಗೊಂಡಿದ್ದು, ಸ್ಥಿರ ಸರ್ಕಾರ ರಚಿಸುವ ಭರವಸೆಯಿದೆ ಎಂದರು. ಅಲ್ಲದೇ ಯಾರಾದರೂ ಆಯುಧಗಳನ್ನು ಮತ್ತೆ ತಮ್ಮ ಕೈಗಳಲ್ಲಿ ಹಿಡಿದರೆ ಅಂಥವರು ಜನವಿರೋಧಿ ಮತ್ತು ದೇಶವಿರೋಧಿಗಳಾಗುತ್ತಾರೆ," ಎಂದು ಹೇಳಿದರು.

ಪಂಜ್ ಶೀರ್ ಕಣಿವೆಯಲ್ಲಿ ಮುಂದುವರಿದೆ ಸಂಘರ್ಷ

ಕಳೆದ 1996 ರಿಂದ 2001ರ ಅವಧಿಯಲ್ಲಿ ಸರ್ಕಾರ ರಚಿಸಿ ಆಡಳಿತ ನಡೆಸಿದ ತಾಲಿಬಾನ್, ಪಂಜ್ ಶೀರ್ ಪ್ರಾಂತ್ಯವನ್ನು ಮಾತ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಇತ್ತೀಚಿಗೆ ಯುಎಸ್ ಸೇನೆಯು ಅಫ್ಘಾನಿಸ್ತಾನದಿಂದ ವಾಪಸ್ ಆದ ಬೆನ್ನಲ್ಲೇ ಕಾಬೂಲ್ ಸೇರಿದಂತೆ ಇಡೀ ದೇಶದ ಮೇಲೆ ತಾಲಿಬಾನ್ ನಿಯಂತ್ರಣ ಹೊಂದಿದೆ. ಅದಾಗ್ಯೂ, ಪಂಜ್ ಶೀರ್ ಪ್ರಾಂತ್ಯದಲ್ಲಿ ಮಾತ್ರ ತಾಲಿಬಾನ್ ಸಂಘಟನೆ ವಿರುದ್ಧ ನ್ಯಾಷನಲ್ ರೆಸಿಸ್ಟನ್ಸ್ ಫ್ರೆಂಟ್ ಆಫ್ ಅಫ್ಘಾನಿಸ್ತಾನ ಪ್ರಾಬಲ್ಯವನ್ನು ಸಾಧಿಸುತ್ತಲೇ ಬಂದಿದೆ. ಈ ಪ್ರದೇಶವನ್ನು ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದ 600ಕ್ಕೂ ಹೆಚ್ಚು ತಾಲಿಬಾನಿಗಳನ್ನು ನಾವೇ ಹೊಡೆದುರುಳಿಸಿದ್ದೇವೆ ಎಂದು ಎನ್ಆರ್ಎಫ್ ಹೇಳಿಕೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+