IAS Officers sudden transfer: ಕರ್ನಾಟಕದಲ್ಲಿ ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ


IAS officers Sudden transfer: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲೇ ಬರುತ್ತಿದೆ. ಹಾಗೆಯೇ ಇದೀಗ ಇಬ್ಬರು ಐಪಿಎಸ್ ಹಾಗೂ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

Advertisement

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ವರ್ಗಾವಣೆಯ ಮಾಡಿ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಜುಲೈ 16ರಂದು ಈ ಅಧಿಕೃತ ಆದೇಶವನ್ನು ಹೊರಡಿಸಿದೆ.

Advertisement

ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ

ಇದರ ಪ್ರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ದಿವ್ಯಾ ಪ್ರಭು ಜಿ.ಆರ್.ಜೆ. ಅವರನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜೊತೆಗೆ ಅವರಿಗೆ ತಮ್ಮ ಹಿಂದಿನ ಗ್ರಾಮೀಣಾಭಿವೃದ್ಧಿ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಮುಂದುವರೆಸಲಾಗಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ.ಪಿ.ರುದ್ರಪ್ಪಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ತೆರವಾಗಿದ್ದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ.

ಜೂನ್‌ 18 ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ತಿದ್ದುಪಡಿ ಮಾಡಲಾಗಿದೆ. ಸಮೀರ್ ಶುಕ್ಲಾ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಡಿ ರಂದೀಪ್ ಅವರನ್ನು ಪಂಚಾಯತ್ ರಾಜ್ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

Advertisement

ವರ್ಗಾವಣೆಯಾದ ಐಎಎಸ್‌ ಅಧಿಕಾರಿಗಳು

* ದಿವ್ಯಾ ಪ್ರಭು ಜಿ.ಆರ್.ಜೆ.: ಬೆಂಗಳೂರು ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರ ಹುದ್ದೆ ಜೊತೆಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

* ರಂದೀಪ್‌ ಡಿ: ಪಂಚಾಯತ್ ರಾಜ್ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಲಾಗಿದೆ.

* ಸಮೀರ್ ಶುಕ್ಲಾ: ಕರ್ನಾಟಕ ಭವನ ದೆಹಲಿ ನಿವಾಸಿ ಆಯುಕ್ತ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

* ಕೆ.ಪಿ. ರುದ್ರಪ್ಪಯ್ಯ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.

Advertisement

ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ವಿವರ

* ಪ್ರಭಾವತಿ ಫಕೀರಪ್ಪಗೋಳ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯಿಂದ ಧಾರವಾಡ ಉಪ ವಿಭಾಗಾಧಿಕಾರಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದೆ.

* ಡಾ. ಸಂತೋಷ್ ಹಾನಗಲ್ಲ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿರುವ ಇವರಿಗೆ ಹೆಚ್ಚುವರಿಯಾಗಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಜವಾಬ್ದಾರಿ ನೀಡಲಾಗಿದೆ.

ಒಟ್ಟಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪರ್ವವೇ ಮೊಂದುವರೆದಿದೆ. ಇತ್ತೀಚೆಗಷ್ಟೇ 31 ತಹಶೀಲ್ದಾರರ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಇದೀಗ ಐಎಎಸ್, ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

English Summary

Karnataka Government has transferred IAS and KAS officers Sudden in a fresh administrative reshuffle. Check complete list of transferred officers, new postings and additional charge details.