Government Employees Transfer: ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಸಂಬಂಧ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾಗಾದ್ರೆ ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಿ ಹೊರಡಿಸಲಾಗಿದ್ದ ಆದೇಶವನ್ನು ಇದೀಗ ಅಧಿಕೃತವಾಗಿ ಹಿಂಪಡೆದುಕೊಂಡಿದೆ.
ಪ್ರಸಕ್ತ 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಜುಲೈ 31ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಈ ವಿಸ್ತರಣಾ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗುತ್ತಿದೆ ಎಂದು ತನ್ನ ಹೊಸ ಆದೇಶದಲ್ಲಿ ತಿಳಿಸಿದೆ. ಸರ್ಕಾರದ ಈ ನಡೆ ಭಾರಿ ಚರ್ಚೆ ಹುಟ್ಟುಹಾಕಿದೆ. ಆದರೆ ವಿವಿಧ ಇಲಾಖೆಗಳ ಬೇಡಿಕೆ ಹಾಗೂ ನೌಕರರ ಮನವಿಗಳನ್ನು ಪುರಸ್ಕರಿಸಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವಂತೆ ಜೂನ್ 1ರಂದು ಮತ್ತೊಂದು ಆದೇಶ ಹೊರಡಿಸಲಾಯಿತು. ಇದರಂತೆ ವರ್ಗಾವಣೆ ಅವಧಿಯನ್ನು ಜೂನ್ 30, 2026ರ ವರೆಗೆ ಮೊದಲ ಬಾರಿಗೆ ವಿಸ್ತರಿಸಲಾಗಿತ್ತು. ಬಳಿಕ ಆಡಳಿತಾತ್ಮಕ ಅಗತ್ಯತೆಗಳನ್ನು ಪರಿಗಣಿಸಿ ಈ ಅವಧಿಯನ್ನು ಜುಲೈ 15ರ ವರೆಗೆ ಮತ್ತೊಮ್ಮೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಜುಲೈ 15ರ ಗಡುವು ಮುಗಿಯುತ್ತಿದ್ದಂತೆ ಬುಧವಾರದಂದು ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಿರುವ ಷರತ್ತುಗಳು ಹಾಗೂ ನಿರ್ಬಂಧಗಳಿಗೆ ಒಳಪಟ್ಟು ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಈ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದ್ದು, ವಿಸ್ತರಣಾ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆದುಕೊಂಡಿದೆ. ಈ ದಿಢೀರ್ ಆದೇಶದ ಹಿನ್ನೆಲೆ ಜುಲೈ 31ರ ವರೆಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸದ್ಯಕ್ಕೆ ಹಿನ್ನಡೆ ಉಂಟದಂತಾಗಿದೆ. ಇದೀಗ ಆ ವಿಸ್ತರಣೆ ಆದೇಶವನ್ನು ಹಿಂಡೆಯಲಾಗಿದೆ.ವರ್ಗಾವಣೆ ವಿಸ್ತರಣಾ ಆದೇಶ ವಾಪಾಸ್