ಕರ್ನಾಟಕ ಕ್ರೀಡಾಪಟುಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್


ಬೆಂಗಳೂರು, ಜುಲೈ 11: ರಾಜ್ಯ ಸರ್ಕಾರವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಲಿರುತ್ತದೆ. ಹಾಗೆಯೇ ಇದೀಗ ಕ್ರೀಡಾಪಟುಗಳಿಗೆ ಶುಭ ಸುದ್ದಿಯನ್ನು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

Advertisement

ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ಮತ್ತು ಒಲಿಂಪಿಕ್ಸ್‌ನಲ್ಲಿ ಹೆಚ್ಚಿನ ಸಾಧನೆ ಮಾಡಲು ನೆರವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 'ಗುರಿ ಒಲಿಂಪಿಕ್ಸ್ 2028' ಯೋಜನೆಯಡಿ ವಿವಿಧ ಪ್ರೋತ್ಸಾಹಧನ ಹಾಗೂ ಕ್ರೀಡಾ ಪ್ರಶಸ್ತಿಗಳಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Advertisement

ಹೊರರಾಜ್ಯದವರಿಗೆ ಇಲ್ಲಿ ಜಾಗವಿಲ್ಲ, ಕನ್ನಡಿಗರಿಗಷ್ಟೇ ಮೊದಲ ಆದ್ಯತೆ: ವಲಸಿಗರಿಗೆ ಶಾಕ್‌ ಕೊಟ್ಟ ಸಿಎಂ ಡಿ.ಕೆ.ಶಿವಕುಮಾರ್‌

ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಗುಡ್‌ ನ್ಯೂಸ್‌

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ಹಾಗೂ 2028ರ ಒಲಿಂಪಿಕ್ಸ್‌ನಲ್ಲಿ ಅವರು ಅತ್ಯುತ್ತಮ ಸಾಧನೆ ಮಾಡಲು ನೆರವಾಗುವ ನಿಟ್ಟಿನಲ್ಲಿ ಗುರಿ ಒಲಿಂಪಿಕ್ಸ್ 2028 ಸೇರಿದಂತೆ ವಿವಿಧ ಪ್ರೋತ್ಸಾಹಧನ ಮತ್ತು ಕ್ರೀಡಾ ಪ್ರಶಸ್ತಿಗಳಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರೋತ್ಸಾಹಧನ ಯೋಜನೆಯ ಸಂಪೂರ್ಣ ವಿವರ

ಒಲಿಂಪಿಕ್ಸ್‌ನಲ್ಲಿ ನಡೆಸುವ ಅಧಿಕೃತ ಕ್ರೀಡೆಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಉನ್ನತ ಸಾಧನೆ ಮಾಡಿರುವ ರಾಜ್ಯದ 60 ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುತ್ತದೆ. ಇವರಿಗೆ ಪ್ರತಿ ವರ್ಷ ತಲಾ 10,00,000 ರೂಪಾಯಿಯನ್ನು ಉನ್ನತ ತರಬೇತಿಗಾಗಿ ಧನಸಹಾಯ ನೀಡಲಾಗುವುದು.

Advertisement

ಶೈಕ್ಷಣಿಕ ಶುಲ್ಕ ಮರುಪಾವತಿಯ ವಿವರ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ ನಿರತರಾದ ಕ್ರೀಡಾಪಟುಗಳು ಇದರ ಸೌಲಭ್ಯ ಪಡೆಯಬಹುದು. 2025ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಅಥವಾ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಗುವುದು.

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಆಕಾಂಕ್ಷಿಗಳ ಗಮನಕ್ಕೆ: ಅರ್ಜಿ ತಿದ್ದುಪಡಿಗೆ ಲಿಂಕ್ ಓಪನ್, ಜುಲೈ 13 ಕೊನೆ ದಿನ

2025-26ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ/ ಪದಕ ವಿಜೇತರಾದ 6ನೇ ತರಗತಿಯಿಂದ 10ನೇ ತರಗತಿಯವರೆಗಿನ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.

Advertisement

ಯಾರಿಗೆ ಯಾವ ಪ್ರಶಸ್ತಿ?

* ಏಕಲವ್ಯ ಪ್ರಶಸ್ತಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ರಾಜ್ಯದ ಕ್ರೀಡಾಪಟುಗಳಿಗೆ.

* ಜೀವಮಾನ ಸಾಧನೆ ಪ್ರಶಸ್ತಿ: ಸಾಧಕ ಕ್ರೀಡಾಪಟುಗಳನ್ನು ರೂಪಿಸಿದ ರಾಜ್ಯದ ತರಬೇತುದಾರರಿಗೆ.

KS Chitra: ಲಕ್ಷಾಂತರ ಮಕ್ಕಳಿಗೆ ಕೆ.ಎಸ್ ಚಿತ್ರಾ ಲಾಲಿ ಲಾಲಿ ಹಾಡು.. ಸ್ವಂತ ಮಗುವಿಗೆ ಕೇಳಿಸುವ ಸೌಭಾಗ್ಯವಿಲ್ಲ!

* ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕ ಕ್ರೀಡಾಪಟುಗಳಿಗೆ.

* ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ: ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಕೊಡುಗೆ ನೀಡಿದ ಕ್ರೀಡಾ ಪೋಷಕ ಸಂಸ್ಥೆಗಳಿಗೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಕೊನೆಯ ದಿನಾಂಕದ ವಿವರ

* ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಕೆ ಮಾಡಬೇಕಾಗಿರುತ್ತದೆ.

Advertisement

* ವೆಬ್‌ಸೈಟ್‌: https://sevasindhu.karnataka.gov.in

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026 ಜುಲೈ 31

* ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 155265

ರಾಜ್ಯದ ಅರ್ಹ ಕ್ರೀಡಾಪಟುಗಳು ಮತ್ತು ಸಂಸ್ಥೆಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮನವಿ ಮಾಡಿದೆ. ಒಟ್ಟಿನಲ್ಲಿ ಹೇಳುವುದಾದರೆ ಇದರಿಂದ ಕ್ರೀಡಾಪಟುಗಳಿಗೆ ತುಂಬಾ ಅನುಕೂಲ ಆದಂತಾಗಲಿದೆ.

English Summary

Karnataka Government has invited online applications for Guri Olympics 2028 Scheme, sports scholarships, cash incentives and prestigious sports awards.