ಹಾಜರಾತಿ ಕೊರತೆಯಿಂದ SSLC ಪರೀಕ್ಷೆ-1 ಬರೆಯಲಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ಯಲ್ಲಿ ಅವಕಾಶ

ಬೆಂಗಳೂರು: ಶೇ. 75ಕ್ಕಿಂತ ಕಡಿಮೆ ಶಾಲಾ ಹಾಜರಾತಿ ಕೊರತೆಯಿಂದಾಗಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬರೆಯಲು ವಂಚಿತರಾಗಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಸಿಹಿ ಸುದ್ದಿಯೊಂದನ್ನು ನೀಡಿದೆ. ಹಾಜರಾತಿ ಕೊರತೆಯ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಇದೀಗ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ 'ಖಾಸಗಿ ಅಭ್ಯರ್ಥಿಗಳಾಗಿ' ನೋಂದಾಯಿಸಿಕೊಳ್ಳಲು ಅಧಿಕೃತವಾಗಿ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಹೊಸ ಪರೀಕ್ಷಾ ಪದ್ಧತಿಯನ್ವಯ ವಿದ್ಯಾರ್ಥಿಗಳಿಗೆ ವಾರ್ಷಿಕ ಮೂರು ಪರೀಕ್ಷೆಗಳನ್ನು (ಪರೀಕ್ಷೆ 1, 2 ಮತ್ತು 3) ನಡೆಸಲಾಗುತ್ತಿದೆ. ನಿಯಮಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಅಥವಾ ಪರೀಕ್ಷೆ-1 ಬರೆಯಲು ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇಕಡಾ 75 ರಷ್ಟು ತರಗತಿ ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ.

SSLC

ಅನಾರೋಗ್ಯ ಅಥವಾ ಇತರ ಅನಿವಾರ್ಯ ಕಾರಣಗಳಿಂದ ಶಾಲೆಗೆ ಗೈರಾಗಿ, ಹಾಜರಾತಿ ಕೊರತೆ ಎದುರಿಸಿದ್ದ ವಿದ್ಯಾರ್ಥಿಗಳಿಗೆ ಮೊದಲ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ಹಾಳಾಗುವ ಆತಂಕ ಎದುರಾಗಿತ್ತು. ಆದರೆ ಇದೀಗ ಮಂಡಳಿಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ವಯೋಮಿತಿ ಮತ್ತು ಪ್ರಮುಖ ನಿಯಮಗಳು

ಮಂಡಳಿಯು ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಸ್ಪಷ್ಟವಾದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾರ್ಚ್ 1, 2026 ರ ವೇಳೆಗೆ ಕಡ್ಡಾಯವಾಗಿ 15 ವರ್ಷ ವಯಸ್ಸು ಪೂರೈಸಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಖಾಸಗಿ ನೋಂದಣಿಗೆ ಅವಕಾಶವಿರುತ್ತದೆ. ಈ ವಯೋಮಿತಿಗಿಂತ ಕಡಿಮೆ ವಯಸ್ಸಿನವರು ಖಾಸಗಿಯಾಗಿ ಪರೀಕ್ಷೆ ಬರೆಯಲು ಅರ್ಹರಾಗಿರುವುದಿಲ್ಲ.

ಮುಂದೇನು ಮಾಡಬೇಕು?

ಹಾಜರಾತಿ ಕೊರತೆಯಿಂದ ಪರೀಕ್ಷೆ-1 ಕೈತಪ್ಪಿರುವ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ, ಏಪ್ರಿಲ್‌ 30ರೊಳಗೆ ಪರೀಕ್ಷೆ-2 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಆಯಾ ಶಾಲಾ ಆಡಳಿತ ಮಂಡಳಿಗಳು ಇಂತಹ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ, ಮಂಡಳಿಯ ಪೋರ್ಟಲ್‌ನಲ್ಲಿ ಶುಲ್ಕ ಪಾವತಿಸಿ ನೋಂದಣಿ ಮಾಡಿಸಲು ಸೂಚಿಸಲಾಗಿದೆ.

ಶಿಕ್ಷಣ ಇಲಾಖೆಯ ಈ ವಿದ್ಯಾರ್ಥಿ ಸ್ನೇಹಿ ನಿರ್ಧಾರದಿಂದಾಗಿ ಸಾವಿರಾರು ಮಕ್ಕಳಿಗೆ ತಮ್ಮ ಶೈಕ್ಷಣಿಕ ಭವಿಷ್ಯವನ್ನು ಉತ್ತಮಗೊಳಿಸಿಕೊಳ್ಳಲು ಸಹಕಾರಿಯಾಗಿದೆ . ಪರೀಕ್ಷೆ-1 ರ ಅವಕಾಶ ಕಳೆದುಕೊಂಡ ವಿದ್ಯಾರ್ಥಿಗಳು ಹೆದರದೆ, ಸಿಕ್ಕಿರುವ ಈ ಎರಡನೇ ಅವಕಾಶವಾದ ಪರೀಕ್ಷೆ-2ರನ್ನು ಸದುಪಯೋಗಪಡಿಸಿಕೊಂಡು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಲು ಈಗಿನಿಂದಲೇ ಸರಿಯಾಗಿ ಅಭ್ಯಾಸದಲ್ಲಿ ತೊಡಗಿಕೊಳ್ಳುವುದು ಒಳಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+