ಮೌಲ್ಯಮಾಪನ ಪ್ರಕ್ರಿಯೆ; ಖಡಕ್ ಎಚ್ಚರಿಕೆ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!


ಬೆಂಗಳೂರು, ಜ. 25: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಶಿಕ್ಷಣ ಇಲಾಖೆ ಸಿಬ್ಬಂದಿ ಮೇಲೆ ಕಠಿಣಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಂದಾಗಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ನಿರ್ಲಕ್ಷ ತೋರುವ ಇಲಾಖೆ ಸಿಬ್ಬಂದಿ ಮೇಲೆ ಇದೇ ಮೊದಲ ಬಾರಿ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಠಿಣ ಆದೇಶವನ್ನು ಹೊರಡಿಸಿದ್ದಾರೆ.

Advertisement

ಹೊಸನಗರ ತಾಲೂಕಿನ ಹನಿಯಾ ಗ್ರಾಮದ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬರ ಉತ್ತರ ಪತ್ರಿಕೆ ಮರು ಎಣಿಕೆಯಲ್ಲಿ ಕಡಿಮೆ ಅಂಕ ನೀಡಲಾಗಿತ್ತು. ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತಕ್ಷಣವೇ ವರದಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Advertisement

ತನಗೆ ಬರಬೇಕಾಗಿದ್ದ ಅಂಕಗಳನ್ನು ಪಡೆಯಲು ಆ ವಿದ್ಯಾರ್ಥಿನಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮರುಎಣಿಕೆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಮತ್ತೆ ಕಡಿಮೆ ಅಂಕಗಳು ಬಂದಿದ್ದವು. ಹೀಗಾಗಿ ಆ ವಿದ್ಯಾರ್ಥಿನಿ ಹೈಕೋರ್ಟ್‌ ಮೊರೆ ಹೊಗಿದ್ದರು. ಇದೀಗ ಆ ವಿದ್ಯಾರ್ಥಿನಿಗೆ ನೂರಕ್ಕೆ ನೂರು ಅಂಕಗಳು ಬಂದಿದ್ದು, ಶಿಕ್ಷಣ ಇಲಾಖೆಯ ಸಿಬ್ಬಂದಿ ಕಾರ್ಯವೈಖರಿಗೆ ಸಚಿವ ಸುರೇಶ್ ಕುಮಾರ್ ಅವರು ಗರಂ ಆಗಿದ್ದಾರೆ.

ಮರುಎಣಿಕೆಯಲ್ಲಿ ಕಡಿಮೆ ಅಂಕಗಳು

ಪಿಯು ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ 99 ಅಂಕ ಬಂದಾಗ ತನಗೆ 100 ಅಂಕ ಬರಬೇಕಿತ್ತೆಂಬ ಉತ್ತರಪತ್ರಿಕೆಯ ಫೊಟೊ ಕಾಪಿ ತರಿಸಿ ಪರಿಶೀಲನೆ ಮಾಡಿದ್ದ ವಿದ್ಯಾರ್ಥಿನಿಗೆ ಅಘಾತ ಕಾದಿತ್ತು. ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ವಿದ್ಯಾರ್ಥಿನಿ ಮರುಎಣಿಕೆಗೆ ಹಾಕಿದ್ದರು. ಆದರೆ ಮರುಎಣಿಕೆಗೆ ಅರ್ಜಿ ಸಲ್ಲಿಸಿದಾಗ 99 ಅಂಕಗಳು ಹೀಗಿ ಕೇವಲ 88 ಅಂಕಗಳನ್ನು ಕೊಡಲಾಗಿತ್ತು. ಅದು ವಿದ್ಯಾರ್ಥಿನಿ ಹಾಗೂ ಆಕೆಯ ಪಾಲಕರ ಆತಂಕಕ್ಕೆ ಕಾರಣವಾಗಿತ್ತು.

ಹೈಕೋರ್ಟ್‌ ಮೊರೆ ಹೋಗಿದ್ದ ವಿದ್ಯಾರ್ಥಿನಿ

ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಹೈಕೋರ್ಟ್ ಮರುಎಣಿಕೆಗೆ ಆದೇಶಿಸಿತ್ತು. ಆ ನಂತರ ವಿದ್ಯಾರ್ಥಿನಿಗೆ 100 ಅಂಕಗಳು ಬಂದಿದ್ದವು. ಈ ಕುರಿತು ಮರು ಎಣಿಕೆಯಲ್ಲಿ ಲೋಪ ಎಸಗಿದ ಅಧಿಕಾರಿ, ಉಪನ್ಯಾಸಕರು ಮತ್ತು ಸಂಬಂಧಿಸಿದ ಸಿಬ್ಬಂದಿಯ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಸಂಬಂಧಿಸಿದವರ ವಿವರಗಳೊಂದಿಗೆ ಎರಡು ದಿನಗಳೊಳಗೆ ವರದಿ ಸಲ್ಲಿಸಬೇಕೆಂದು ಸಚಿವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ನ್ಯಾಯ ದೊರೆತದ್ದು ಸಂತಸ, ಆದರೆ..

ವಿದ್ಯಾರ್ಥಿನಿಗೆ ಕೊನೆಗಾದರೂ ನ್ಯಾಯ ದೊರೆತದ್ದು ಸಂತಸ ಸಂಗತಿಯಾಗಿದ್ದರೂ ಸಹ ಇಲಾಖೆ ಅಧಿಕಾರಿಗಳ ಕರ್ತವ್ಯ ಚ್ಯುತಿಯಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯ ಆತ್ಮವಿಶ್ವಾಸಕ್ಕೆ ಧಕ್ಕೆಯಾಗುವಂತಾಗಿದ್ದು, ವ್ಯವಸ್ಥೆ ಕುರಿತು ಭರವಸೆ ಕಳೆದುಕೊಳ್ಳುವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯ ನೆರವಿಗೆ ಬರಬೇಕಾದ ಇಲಾಖೆ ಆಕೆಯ ಆತ್ಮ ವಿಶ್ವಾಸ ಕಸಿಯುವ ಕೆಲಸ ಮಾಡಿದ್ದು, ಇದಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದ್ದು, ತಕ್ಷಣವೇ ಈ ಕುರಿತು ವರದಿ ಸಲ್ಲಿಸಬೇಕೆಂದು ಸಚಿವರು ಟಿಪ್ಪಣಿಯಲ್ಲಿ ಪಿಯು ನಿರ್ದೇಶಕರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

Recommended Video

ಲೈಂಗಿಕ ದೌರ್ಜನ್ಯದ ನಿಜವಾದ ಅರ್ಥ ತಿಳಿಸಿದ ಸುಪ್ರೀಂ ಕೋರ್ಟ್ | Oneindia Kannada
ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿನಿ

ಕಳೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸನಗರ ತಾಲೂಕಿನ ಹನಿಯ ಗ್ರಾಮದ ಎಚ್.ಆರ್. ಧರಣಿ ಎಂಬ ವಿದ್ಯಾರ್ಥಿನಿ ಅಕೌಂಟೆನ್ಸಿ ವಿಷಯದಲ್ಲಿ 99 ಅಂಕ ಪಡೆದಿದ್ದಳು. ತನಗೆ 100 ಅಂಕಗಳು ಬರಬೇಕಿತ್ತೆಂಬ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಯ ಛಾಯಾಪ್ರತಿ ತರಿಸಿ ನೋಡಿದಾಗ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದ್ದು ಕಂಡು ಬಂದಿತ್ತು. ನಂತರ ಮರು ಎಣಿಕೆಗೆ ಅರ್ಜಿ ಹಾಕಿದ್ದರು. ಆದರೆ ಮರುಎಣಿಕೆಯಲ್ಲಿಯೂ ವಿದ್ಯಾರ್ಥಿನಿಗೆ 88 ಅಂಕಗಳನ್ನು ಮಾತ್ರ ಕೊಡಲಾಗಿತ್ತು. ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಮರುಎಣಿಕೆಗೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ 100 ಅಂಕಗಳು ಬಂದಿದ್ದವು.

English Summary

The Minister of Education S. Suresh Kumar has taken a hard step at the Education Department staff who flirt with the students future. This is the first time that the Department of Education has taken a hard step at department staff who appear to be negligent in the assessment process. Education Minister Suresh Kumar has issued a stern order.