CSK vs MI IPL 2026: ಎಂಎಸ್‌ ಧೋನಿ ಹಾಗೂ ರೋಹಿತ್ ಶರ್ಮಾ ಆಡ್ತಾರಾ? ಇಲ್ಲಿದೆ ಬಿಗ್ ಅಪ್ಡೇಟ್‌

CSK vs MI IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶನಿವಾರ (ಮೇ 2) ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗಾದ್ರೆ ಸಿಎಸ್‌ಕೆ ಪರ ಎಂಎಸ್‌ ಧೋನಿ ಹಾಗೂ ಎಂಐ ಪರ ರೋಹಿತ್ ಶರ್ಮಾ ಅವರು ಕಣಕ್ಕಿಯಲಿದ್ದಾರಾ ಎಂಬ ಬಿಗ್ ಅಪ್ಡೇಟ್‌ ಇಲ್ಲಿದೆ ನೋಡಿ.

ಶನಿವಾರ ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ 2026ರ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮತ್ತೊಂದು ಎಲ್ ಕ್ಲಾಸಿಕೋ ಸಮರಕ್ಕೆ ಸಜ್ಜಾಗಿವೆ. ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಎನಿಸಿಕೊಂಡಿರುವ ಈ ಎರಡೂ ತಂಡಗಳು ಈ ಬಾರಿ ಕಠಿಣ ಸವಾಲನ್ನು ಎದುರಿಸುತ್ತಿದ್ದು, ಪ್ಲೇ-ಆಫ್ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ನಿರ್ಣಾಯಕವಾಗಿದೆ.

CSK vs MI IPL 2026 Will MS Dhoni And Rohit Sharma Play Big Update Ahead of El Clasico Clash

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡ ಸದ್ಯ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಸೋತರೆ ಅವರ ಪ್ಲೇ-ಆಫ್ ಆಸೆ ಬಹುತೇಕ ಅಂತ್ಯಗೊಳ್ಳಲಿದೆ. ಮತ್ತೊಂದೆಡೆ ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ 7ನೇ ಸ್ಥಾನದಲ್ಲಿದ್ದು, ಒಂದು ವೇಳೆ ಇಂದು ಸೋತರೆ ಅವರ ಮುಂದಿನ ಹಾದಿ ಮತ್ತಷ್ಟು ಕಠಿಣವಾಗಲಿದೆ. ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ಪರ ಎಂ.ಎಸ್. ಧೋನಿ ಮತ್ತು ಎಂಐ ಪರ ರೋಹಿತ್ ಶರ್ಮಾ ಅವರು ಕಣಕ್ಕಿಳಿಯುವ ಬಗ್ಗೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರು.

ಹುಸಿಯಾಯ್ತು ಅಭಿಮಾನಿಗಳ ನಿರೀಕ್ಷೆ

ಆದರೆ ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಎರಡೂ ತಂಡಗಳಲ್ಲಿ ಬದಲಾವಣೆಗಳಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಪರ ಆಲ್ ರೌಂಡರ್ ರಾಮಕೃಷ್ಣ ಘೋಷ್ ಪದಾರ್ಪಣೆ ಮಾಡುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ತಂಡವು 33 ವರ್ಷದ ಅನ್‌ಕ್ಯಾಪ್ಡ್ ಸ್ಪಿನ್ನರ್ ರಘು ಶರ್ಮಾ ಅವರಿಗೆ ಅವಕಾಶ ನೀಡಿದೆ. ಸದ್ಯ ಅಂಕಪಟ್ಟಿಯಲ್ಲಿ ಸಿಎಸ್‌ಕೆ 7ನೇ ಸ್ಥಾನದಲ್ಲಿದ್ದರೆ, ಮುಂಬೈ 9ನೇ ಸ್ಥಾನದಲ್ಲಿದೆ. ಪ್ಲೇ-ಆಫ್ ರೇಸ್‌ನಲ್ಲಿ ಜೀವಂತವಾಗಿರಲು ಎರಡೂ ತಂಡಗಳಿಗೆ ಈ ಗೆಲುವು ಅನಿವಾರ್ಯವಾಗಿದೆ.

ಸಿಎಸ್‌ಕೆ ಹಾಗೂ ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಜೇಮೀ ಓವರ್ಟನ್, ರಾಮಕೃಷ್ಣ ಘೋಷ್, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮುಕೇಶ್ ಚೌಧರಿ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ವಿಲ್ ಜಾಕ್ಸ್, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ರಾಬಿನ್ ಮಿಂಜ್, ಟ್ರೆಂಟ್ ಬೋಲ್ಟ್, ಕ್ರಿಶ್ ಭಗತ್, ಜಸ್ಪ್ರೀತ್ ಬುಮ್ರಾ, ಎ ಎಮ್ ಗಜನ್‌ಫರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+