ಡೆಲ್ಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ ಬೌಲರ್‌ ಲುಂಗಿ ಎನ್ಗಿಡಿ ಎಂಟ್ರಿ ಬಗ್ಗೆ ಬಿಗ್‌ ಅಪ್ಡೇಟ್‌; ಸಿಎಸ್‌ಕೆಗೆ ಶುರುವಾಯ್ತು ನಡುಕ

Lungi Ngidi: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಂಗಳವಾರ (ಮೇ 4) ನಡೆಯುವ ಹೈವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡಿಸಿ ಭರವಸೆಯ ಸ್ಟಾರ್ ಬೌಲರ್‌ ಲುಂಗಿ ಎನ್ಗಿಡಿ ಕಣಕ್ಕಿಯಲಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗಿ, ದಕ್ಷಿಣ ಆಫ್ರಿಕಾದ ಲುಂಗಿ ಎನ್ಗಿಡಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದು, ಡೆಲ್ಲಿ ಪರ ಇಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎನ್ನುವ ಮಾಹಿತಿಯಿದೆ.

Lungi Ngidi Fitness Update IPL 2026 Will Delhi Capitals Star Pacer Play vs CSK Today in Dehli

ಲುಂಗಿ ಎನ್ಗಿಡಿ ಕಣಕ್ಕಿಯಲಿದ್ದಾರಾ?

ಈಗಾಗಲೇ ಲುಂಗಿ ಎನ್ಗಿಡಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ತಂಡವನ್ನು ಸೇರಿಕೊಂಡಿದ್ದಾರೆ. ಆದರೂ ಕಳೆದ ಎರಡು ಪಂದ್ಯಗಳಲ್ಲಿ ಅವರು ಪ್ಲೇಯಿಂಗ್ 11 ಅಥವಾ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಯಲ್ಲಿ ಸ್ಥಾನ ಪಡೆದಿರಲಿಲ್ಲ. ಇನ್ನೂ ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ತಂಡಕ್ಕೆ ಅವರು ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಡೆಲ್ಲಿ ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ

ಇಂದು ನಡೆಯುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡೆಲ್ಲಿ ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್, "ವೇಗಿ ಲುಂಗಿ ಎನ್ಗಿಡಿ ಅವರು ಈಗ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ," ಎಂದು ಖಚಿತಪಡಿಸಿದ್ದಾರೆ. ಇದರಿಂದ ಲುಂಗಿ ಎನ್ಗಿಡಿ ಅವರ ಅಲಭ್ಯತೆಯ ಬಗ್ಗೆ ಈ ಹಿಂದೆ ಇದ್ದ ಆತಂಕಕ್ಕೆ ಈಗ ತೆರೆ ಬಿದ್ದಂತಾಗಿದೆ. ಅವರು ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೆ ಲಭ್ಯವಿರುವುದು ಡೆಲ್ಲಿ ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ ಬಂದಂತಾಗಿದೆ.

ಬೌಲಿಂಗ್ ಕೋಚ್ ಮುನಾಫ್ ಪಟೇಲ್ ಹೇಳಿದ್ದೇನು?

"ನಮ್ಮ ತಂಡದ ಎಲ್ಲಾ ಬೌಲರ್‌ಗಳು ಫಿಟ್ ಆಗಿದ್ದಾರೆ. ಅದರಲ್ಲೂ ಲುಂಗಿ ಎನ್ಗಿಡಿ ಅವರು ಈಗ ನೂರಕ್ಕೆ ನೂರರಷ್ಟು ಫಿಟ್ ಆಗಿದ್ದಾರೆ. ಆರು ದಿನಗಳ ಕಡ್ಡಾಯ ವಿಶ್ರಾಂತಿಯ ನಿಯಮದ ಕಾರಣದಿಂದಾಗಿ ಅವರು ಕಳೆದ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆಡಲು ಸಿದ್ಧರಾಗಿದ್ದಾರೆ," ಎಂದು ಮುನಾಫ್ ಪಟೇಲ್ ಹೇಳಿದ್ದಾರೆ. ಇದೇ ವೇಳೆ ತಲೆಗೆ ಪೆಟ್ಟು ಬಿದ್ದಾಗ ಆಟಗಾರರ ಆರೋಗ್ಯದ ದೃಷ್ಟಿಯಿಂದ ಐಪಿಎಲ್‌ನಲ್ಲಿ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವ ನಿಯಮ ಇರುತ್ತದೆ. ಅದೇ ಕಾರಣಕ್ಕಾಗಿ ಎನ್ಗಿಡಿ ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು ಎಂದು ಕೋಚ್ ಸ್ಪಷ್ಟಪಡಿಸಿದ್ದಾರೆ.

ಆಟಗಾರನಿಗೆ ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪುವಿಕೆ ಅಥವಾ ಗೊಂದಲಕ್ಕೀಡಾಗುವುದು ಸಂಭವಿಸಿದರೆ ಕಡ್ಡಾಯವಾಗಿ ಏಳು ದಿನಗಳ ವಿಶ್ರಾಂತಿ ನೀಡಲು ಸೂಚಿಸುತ್ತದೆ. ಆಟಗಾರನ ಆರೋಗ್ಯದ ಮೇಲೆ ಯಾವುದೇ ರೀತಿಯ ಕೆಟ್ಟ ಪರಿಣಾಮ ಬೀರಬಾರದು ಎಂಬ ದೃಷ್ಟಿಯಿಂದ ಈ ನಿಯಮ ಜಾರಿಯಲ್ಲಿದೆ.

ಎನ್ಗಿಡಿ ಅಲಭ್ಯತೆಯ ಸಮಯದಲ್ಲಿ ಅವರ ಜಾಗವನ್ನು ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ತುಂಬಿದ್ದರು. ಅವರು ಆಸ್ಟ್ರೇಲಿಯಾದ ಅನುಭವಿ ಆಟಗಾರ ಮಿಚೆಲ್ ಸ್ಟಾರ್ಕ್ ಅವರೊಂದಿಗೆ ಸೇರಿ ಮಾರಕ ಬೌಳಿ ದಾಳಿ ಮುಂದುವರೆಸಿದ್ದರು. ಮತ್ತೊಂದೆಡೆ ಸ್ಟಾರ್ಕ್ ಗಾಯದಿಂದ ಚೇತರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದ್ದರು.

ಲುಂಗಿ ಎನ್ಗಿಡಿ ಅವರು 100% ಫಿಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೂ ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹಣಾಹಣಿಯಲ್ಲಿ ಅವರು ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಲುಂಗಿ ಎನ್ಗಿಡಿ ಅವರು ಕಣಕ್ಕಿಳಿದರೆ ಡೆಲ್ಲಿ ಕ್ಯಾಪಿಟಲ್ಸ್‌ ಬೌಲಿಂಗ್ ವಿಭಾಗಕ್ಕೆ ಆನೆ ಬಲ ಬಂದಂತಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+