MI Vs LSG IPL 2026: ವಾಂಖೆಡೆಯಲ್ಲಿ ರೋಹಿತ್ ಶರ್ಮಾ, ರಿಕೆಲ್ಟನ್ ಅಬ್ಬರಕ್ಕೆ ನಲುಗಿದ ಎಲ್‌ಎಸ್‌ಜಿ

MI Vs LSG IPL 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2026ರ ರೋಚಕ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಮುಂಬೈಗೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಮತ್ತು ರಯಾನ್ ರಿಕೆಲ್ಟನ್ ಅವರ ಸ್ಫೋಟಕ ಬ್ಯಾಟಿಂಗ್ ವರದಾನವಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭದಿಂದಲೇ ಅಬ್ಬರಿಸಿತು. ನಿಕೋಲಸ್ ಪೂರನ್ ಕೇವಲ 21 ಎಸೆತಗಳಲ್ಲಿ 63 ರನ್ ಚಚ್ಚಿದರೆ, ಮಿಚೆಲ್ ಮಾರ್ಷ್ 44 ರನ್ ಗಳಿಸಿ ಉತ್ತಮ ಸಾಥ್ ನೀಡಿದರು. ಅಂತಿಮ ಹಂತದಲ್ಲಿ ಏಡನ್ ಮಾರ್ಕ್ರಾಮ್ ಅಜೇಯ 31 ಮತ್ತು ಹಿಮ್ಮತ್ ಸಿಂಗ್ (ಅಜೇಯ 40 ರನ್‌) ಅವರ ಉತ್ತಮ ಆಟದಿಂದಾಗಿ ಲಕ್ನೋ 20 ಓವರ್‌ಗಳಲ್ಲಿ 228/5 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

MI vs LSG IPL 2026 Rohit Sharma Ryan Rickelton Power Mumbai Indians to 6-Wicket Win in Wankhede

ರೋಹಿತ್ ಶರ್ಮಾ, ರಯಾನ್ ರಿಕೆಲ್ಟನ್ ಉತ್ತಮ ಜೊತೆಯಾಟ

ಎಲ್‌ಎಸ್‌ಜಿ ನೀಡಿದ 229 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈಗೆ ರಯಾನ್ ರಿಕೆಲ್ಟನ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. ಕೇವಲ 10.5 ಓವರ್‌ಗಳಲ್ಲಿ 143 ರನ್‌ಗಳ ವೇಗದ ಜೊತೆಯಾಟವಾಡಿದ ಈ ಜೋಡಿ ಲಕ್ನೋ ಬೌಲರ್‌ಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡಿತು. ರೋಹಿತ್ ಶರ್ಮಾ 44 ಎಸೆತಗಳಲ್ಲಿ 6 ಬೌಂಡರಿ, 7 ಸಿಕ್ಸರ್ ಸಹಿತ 84 ರನ್ ಗಳಿಸಿದರೆ, ರಯಾನ್ ರಿಕೆಲ್ಟನ್ 32 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 83 ರನ್ ಚಚ್ಚಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.

ಮಧ್ಯಮ ಕ್ರಮಾಂಕದಲ್ಲಿ ಬಂದ ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಸಣ್ಣ ಮತ್ತದ ಕೊಡುಗೆ ನೀಡಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಕಡೆಗೆ ನಡೆದರು. ಆದರೂ ಎದೆಗುಂದದ ನಮನ್ ಧೀರ್ ಅಜೇಯ 23 ರನ್ ಗಳಿಸಿ 18.5 ಓವರ್‌ಗಳಲ್ಲೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಪ್ಲೇ-ಆಫ್ ರೇಸ್‌ನಲ್ಲಿ ತನ್ನ ಆಸೆಯನ್ನು ಅಷ್ಟೋ ಇಷ್ಟೋ ಜೀವಂತವಾಗಿರಿಸಿಕೊಂಡಿದೆ. ಅದು ಮೇಲಿನ ತಂಡಗಳ ಸೋಲು, ಗೆಲುವಿನ ಆಧಾರದ ಮೇಲೆ ನಿರ್ಧಾರವಾಗಲಿದೆ. ಆದರೂ ಮುಂಬೈ ಈ ಹಂತ ತಲುಪಲು ಪವಾಡವೇ ನಡೆಯಬೇಕಿದೆ.

ಮುಂಬೈ ಪರ ಕಾರ್ಬಿನ್ ಬಾಷ್ ಒಂದೇ ಓವರ್‌ನಲ್ಲಿ ನಿಕೋಲಸ್‌ ಪೂರನ್ ಮತ್ತು ಮಿಚೆಲ್‌ ಮಾರ್ಷ್ ವಿಕೆಟ್ ಪಡೆದು ಗಮನ ಸೆಳೆದರು. ಇಲ್ಲದಿದ್ದರೆ ಅವರಿಬ್ಬರು ತಂಡದ ಮೊತ್ತವನ್ನು 250ರ ಗಡಿ ದಾಟಿಸಲು ಕೂಡ ರೆಡಿಯಾಗಿದ್ದರು. ಉಳಿದಂತೆ ಮುಂಬೈ ಪರ ಅಲ್ಲಾ ಘಜನ್ಫರ್, ವಿಲ್ ಜಾಕ್ಸ್ ಮತ್ತು ರಘು ಶರ್ಮಾ ತಲಾ ಒಂದು ವಿಕೆಟ್ ಹಂಚಿಕೊಂಡರು.

ಮುಂಬೈ, ಎಲ್‌ಎಸ್‌ಜಿ ಪ್ಲೇಯಿಂಗ್ 11

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ರಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ವಿಲ್ ಜಾಕ್ಸ್, ರಾಜ್ ಬಾವಾ, ಕಾರ್ಬಿನ್ ಬಾಷ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಅಲ್ಲಾ ಘಜನ್ಫರ್, ರಘು ಶರ್ಮಾ.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಮಿಚೆಲ್ ಮಾರ್ಷ್, ಏಡನ್ ಮಾರ್ಕ್ರಾಮ್, ರಿಷಬ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಮೊಹಮ್ಮದ್ ಶಮಿ, ಮೊಹ್ಸಿನ್ ಖಾನ್, ಆವೇಶ್ ಖಾನ್, ಪ್ರಿನ್ಸ್ ಯಾದವ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+