UT Khader: ಸ್ಪೀಕರ್ ಇನ್ನು ಡಾಕ್ಟರ್! ಬೆಂಗಳೂರು ವಿವಿಯಿಂದ ಯುಟಿ ಖಾದರ್‌ಗೆ ಡಾಕ್ಟರೇಟ್: AI ಇಮೇಜ್ ಇಲ್ಲಿದೆ ನೋಡಿ
ಬೆಂಗಳೂರು, ಅಕ್ಟೋಬರ್ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರು ಯು.ಟಿ ಖಾದರ್, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಮತ್ತು ಸಮಾಜ ಸೇವಕರು ಡಿ. ಮಾದೇಗೌಡ, ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಡಾ.ಜಯಕರ ಎಸ್ ಎಂ ತಿಳಿಸಿದರು.
ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ ಗಣರಾಜ್ಯವಾಗಿರುವ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 06 ರಿಂದ ಆರಂಭಗೊಂಡು ಅಕ್ಟೋಬರ್ 10ವರೆಗೆ ನಡೆಯಲಿರುವ "68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದಲ್ಲಿ ಲೋಕಸಭಾಧ್ಯಕ್ಷ ಒಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಮತ್ತಿತರರು ಪಾಲ್ಗೊಂಡಿದ್ದಾರೆ. ಯು.ಟಿ.ಖಾದರ್ ಅವರು ಈ ಸಮಾವೇಶದಲ್ಲಿ ಭಾಗಿಯಾದ ಹಿನ್ನಲೆ ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವಕ್ಕೆ ಗೈರಾಗಿದ್ದರು. ಆದರೆ, ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವದಲ್ಲಿ ಭಾಗಿಯಾಗಿ ಡಾಕ್ಟರೇಟ್ ಸ್ವೀಕರಿಸಿದಂತೆ AI ಇಮೇಜ್ ಕ್ರಿಯೇಟ್ ಮಾಡಿದೆ.

ಬೆಂಗಳೂರು ವಿಶ್ವವಿದ್ಯಾಲಯ 60ನೇ ಘಟಿಕೋತ್ಸವದ ಕುರಿತು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ.ಜಯಕರ ಎಸ್ ಎಂ ಅವರು, ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದು,ಡಿ.ಆರ್.ಡಿ.ಎಲ್.ನ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿಗಳು ಡಾ.ಎಂ.ಸಿ.ಸುಧಾಕರ್ ಅವರು ಸಹ ಉಪಸ್ಥಿತರಿರುವರು ಎಂದು ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವದಲ್ಲಿ 30,300 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದಾರೆ. 157 ವಿದ್ಯಾರ್ಥಿಗಳು 298 ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ. 61 ವಿದ್ಯಾರ್ಥಿಗಳು 132 ನಗದು ಪ್ರಶಸ್ತಿ ಪಡೆಯಲಿದ್ದಾರೆ. ಒಟ್ಟು 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಲಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದು 13,510 ಮಹಿಳಾ ವಿದ್ಯಾರ್ಥಿನಿಯರು ಹಾಗೂ 9,878 ಪುರುಷ ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ.
ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪ್ರೇಮ. ಎಸ್ ಒಟ್ಟು 11 ಚಿನ್ನದ ಪದಕ ಪಡೆಯುವ ಮೂಲಕ ಅತಿ ಹೆಚ್ಚು ಪದಕ ಚಿನ್ನದ ಗಳಿಸಿದ್ದಾರೆ. ಸ್ನಾತಕ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹೇಮಂತ. ಎಸ್ ಒಟ್ಟು 7 ಚಿನ್ನದ ಪದಕ ಗಳಿಸಿದ್ದಾರೆ.
ದಿವ್ಯ. ಎಸ್, ಮಾನಸ. ಕೆ. ಜಿ, ನಂದಿನಿ ಡಿ.ಹೆಚ್, ಚೇತನ. ಆರ್, ಭರತ್ ಕುಮಾರ್.ಎಸ್, ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಾಗಿದ್ದಾರೆ. ಸ್ವರೂಪ್.ಎನ್ ಮತ್ತು ರಂಜಿತ ಜಾದವ್ ವರ್ಷದ ಅತ್ಯುತ್ತಮ ಕ್ರೀಡಾಪಟು 2023-24 ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕುಲಸಚಿವರು ಶ್ರೀಮತಿ ಕೆ.ಟಿ. ಶಾಂತಲಾ ಕೆ.ಎ.ಎಸ್., ಕುಲಸಚಿವರು ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್ ಉಪಸ್ಥಿತರಿದ್ದರು.












Click it and Unblock the Notifications