ಕರ್ನಾಟಕದಲ್ಲಿ AI ನಗರ ಸ್ಥಾಪನೆ: ಎಲ್ಲಿ ಗೊತ್ತಾ?
ಕರ್ನಾಟಕ ಸರ್ಕಾರವು ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಮೂಲಕ ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. 9,000 ಎಕರೆಯಷ್ಟು ಪ್ರದೇಶದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಭವಿಷ್ಯದಲ್ಲಿ ಇದು ಬೆಂಗಳೂರಿನ ಕೇಂದ್ರ ವ್ಯವಹಾರ ಜಿಲ್ಲೆಯಾಗಲಿದೆ . ಈ ನಗರವನ್ನು ಕೆಲಸ-ವಾಸ-ಉಲ್ಲಾಸ (Work-Live-Play) ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಿಂದ ಕೇವಲ 30 ಕಿ.ಮೀ ದೂರದಲ್ಲಿರುವ ಈ ಪಟ್ಟಣವು ರಾಜ್ಯದ ಎರಡನೇ ಕೇಂದ್ರ ವ್ಯಾಪಾರ ಜಿಲ್ಲೆಯಾಗಿ ಕಾರ್ಯನಿರ್ವಹಿಸಲಿದ್ದು, 2,000 ಎಕರೆಗಳಿಗೂ ಹೆಚ್ಚು ಭೂಮಿಯನ್ನು AI ಆಧಾರಿತ ಕೈಗಾರಿಕೆಗಳು ಮತ್ತು ಪೂರಕ ಘಟಕಗಳಿಗೆ ಮೀಸಲಿಡಲಾಗಿದೆ. ಈ ನಗರ ನಿರ್ಮಾಣದಿಂದ ವ್ಯಾಪಾರ ಹಾಗೂ ಆರ್ಥಿಕತೆಗೆ ಉತ್ತೇಜನ ನೀಡಲಾಗುವುದು. ಈ ನಗರದ 2 ಸಾವಿರ ಎಕರೆಗೂ ಹೆಚ್ಚಿನ ಪ್ರದೇಶವನ್ನು ಎಐ ಆಧಾರಿತ ಉದ್ದಿಮೆಯ ಜಾಗತಿಕ ಹೂಡಿಕೆದಾರರಿಗಾಗಿ ಮೀಸಲಿಡಲಾಗುವುದು.

ಈ ಪಟ್ಟಣವನ್ನು ಶೂನ್ಯ ಟ್ರಾಫಿಕ್ ಜಾಮ್ ಪಟ್ಟಣವಾಗಿ ನಿರ್ಮಿಸಲು ಅನೇಕ ಯೋಜನೆ ಕೈಗೊಳ್ಳಲಾಗಿದೆ. ಈ ನಗರವು 300 ಮೀ. ಅಗಲದ ಬಿಸಿನೆಸ್ ಕಾರಿಡಾರ್ ಮೂಲಕ ಎಲ್ಲಾ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಾಗುವುದು. ಈ ನಗರವನ್ನು 9 ಕಿ.ಮೀ ದೂರದಲ್ಲಿರುವ ಎಸ್ ಟಿಆರ್ ಆರ್ ರಸ್ತೆಗೆ, 11 ಕಿ.ಮೀ ದೂರದಲ್ಲಿರುವ ನೈಸ್ ರಸ್ತೆಗೆ, 5 ಕಿ.ಮೀ ದೂರದಲ್ಲಿರುವ ಮೈಸೂರು-ಬೆಂಗಳೂರು ಹೆದ್ದಾರಿಗೆ ಹಾಗೂ 2.2 ಕಿ.ಮೀ ದೂರದಲ್ಲಿರುವ ಬೆಂಗಳೂರು ದಿಂಡಗಲ್ ಹೆದ್ದಾರಿಗೆ ಸಂಪರ್ಕ ಸಾಧಿಸಲಾಗುವುದು. ಎಲ್ಲಾ ದಿಕ್ಕಿನಿಂದ 70 ಮೀಟರ್ ಅಗಲದ ಮುಖ್ಯರಸ್ತೆ, ವರ್ತುಲ ರಸ್ತೆ ಹಾಗೂ ಎಕ್ಸ್ ಪ್ರೆಸ್ ವೇ ಲಿಂಕ್ ಗಳೊಂದಿಗೆ ಸಂಪರ್ಕ ಸಾಧಿಸಲಾಗುವುದು. ಮುಂದಿನ ದಿನಗಳಲ್ಲಿ ಮೆಟ್ರೋ ಸಂಪರ್ಕವನ್ನು ವಿಸ್ತರಿಸುವ ಆಲೋಚನೆ ಇದೆ ಎಂದು ವಿವರಿಸಿದರು.
ಈ ನಗರ ನಿರ್ಮಾಣದಿಂದ ಎಐ, ಐಟಿ, ಸ್ಟಾರ್ಟ್ ಅಪ್ ಹಾಗೂ ಸೇವಾ ಕ್ಷೇತ್ರಗಳಲ್ಲಿ ಲಕ್ಷಾಂತರ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದ್ದು, ಸ್ಥಳೀಯ ಯುವಕರಿಗೆ ಆದ್ಯತೆ ನೀಡಲು 'ಸ್ಥಳೀಯ ಪ್ರಥಮ ಉದ್ಯೋಗ ನೀತಿ' ರೂಪಿಸಲಾಗುವುದು" ಎಂದು ವಿವರಿಸಿದರು. ಎಐ ಚಾಲಿತ ಮತ್ತು ಭವಿಷ್ಯಕ್ಕೆ ಸಿದ್ಧ ಉದ್ಯಮಗಳಿಗೆ ಸ್ಥಳೀಯರನ್ನು ಸಿದ್ಧಗೊಳಿಸಲು ಕೌಶಲ ಕೇಂದ್ರಗಳನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಸ್ಥಾಪಿಸಲಾಗುವುದು. ಈ ನೂತನ ನಗರದಿಂದ ವ್ಯಾಪಾರ ಮತ್ತು ಉದ್ಯೋಗ ಚಟುವಟಿಕೆಗಳ ದೊಡ್ಡ ಭಾಗವನ್ನು ಬೆಂಗಳೂರಿನ ಹೊರಗೆ ಸ್ಥಳಾಂತರಿಸಿದಂತಾಗುತ್ತದೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ರೈತರಿಗೂ ಸಹಭಾಗಿತ್ವ ವಹಿಸಬೇಕು ಎಂದು ತೀರ್ಮಾನಿಸಿದ್ದು, ರೈತರಿಗೆ ಉತ್ತಮ ಬೆಲೆ ಸಿಗಬೇಕು ಎಂಬುದು ನಮ್ಮ ಚಿಂತನೆ. ಈ ಅಧಿಸೂಚನೆಗೆ ಒಳಪಟ್ಟ ಪ್ರದೇಶದಲ್ಲಿರುವ ವಾಸಸ್ಥಳಗಳನ್ನು ಉಳಿಸಲಾಗುತ್ತದೆ. ಭೂಸ್ವಾಧೀನ ಮಾಡುವುದಿಲ್ಲ. ಈ 26 ಹಳ್ಳಿಗಳನ್ನು ನಗರ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತೇವೆ. ಅಲ್ಲಿ ಶಾಲೆಗಳು, ಹಳ್ಳಿಯ ಸುತ್ತ 50 ಮೀ. ರಿಂಗ್ ರಸ್ತೆ, ಕರ್ನಾಟಕ ಪಬ್ಲಿಕ್ ಶಾಲೆ, ಆಧುನಿಕ ಆಸ್ಪತ್ರೆ, ಭೂಗತ ವಿದ್ಯುತ್ ಕೇಬಲ್, ಒಳಚರಂಡಿ ವ್ಯವಸ್ಥೆ, ಆಟದ ಮೈದಾನ, ಧಾರ್ಮಿಕ ಸ್ಥಳಗಳ ಅಭಿವೃದ್ಧಿ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಲಾಗುವುದು. ಗೃಹನಿರ್ವಹಣೆ, ಆರೋಗ್ಯಸೇವೆ, ಶಿಕ್ಷಣ, ಸಂಸ್ಕೃತಿ ಮುಂತಾದವುಗಳನ್ನು ಒಳಗೊಂಡ ಮಾದರಿಯಲ್ಲಿ ಈ ನಗರ ರೂಪಿಸಲಾಗುತ್ತಿದ್ದು, 1,100 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಉದ್ಯಾನಗಳು ಮತ್ತು ಮೈದಾನಗಳನ್ನು ನಿರ್ಮಿಸಿ, ಹಸಿರು ಮತ್ತು ಸುಸ್ಥಿರ ನಗರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications