Artificial Intelligence: ಎಐ ಮೂಲಕ ಮಾನಹಾನಿಕರ ವಿಡಿಯೋ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ
Artificial Intelligence: ಎಲ್ಲಾ ಕ್ಷೇತ್ರಗಳಲ್ಲೂ ಎಐ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದು ಕೆಲಸದ ವೇಗವನ್ನು ಹೆಚ್ಚಿಸುವುದಲ್ಲದೆ, ಉದ್ಯೋಗಿಗಳ ಒತ್ತಡ ನಿವಾರಿಸಲು ಕೂಡ ತುಂಬಾ ಸಹಾಯಕವಾಗುತ್ತಿದೆ. ಇದೀಗ ಇದನ್ನು ಉಪಯೋಗಕ್ಕಿಂತ ದುರುಪಯೋಗ ಪಡಿಸಿಕೊಳ್ಳುವವರು ಹೆಚ್ಚಾಗಿದ್ದು, ವ್ಯಕ್ತಿಗಳ ಮಾನಹಾನಿ ಮಾಡುವ ಘಟನೆಗಳು ನಡೆಯುತ್ತಿವೆ. ಆದ್ದರಿಂದ ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದೀಯ ಸ್ಥಾಯಿ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಎಐ ಬಳಕೆ ಮಾಡಿಕೊಂಡು ಡೀಪ್‌ಫೇಕ್ ವಿಡಿಯೋ ಕ್ರಿಯೆಟ್ ಮೂಲಕ ಮಾನಹಾನಿಕರ ಮಾಡುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಅಲ್ಲದೆ, ಸುಳ್ಳು ಸುದ್ದಿಗಳನ್ನು ಸಹ ಹರಿಬಿಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಮಾನ ಮಾಡುವ ವಿಡಿಯೋವನ್ನು ಸಹ ಹರಿಬಿಡಲಾಗಿದ್ದು, ಇದರ ವಿರುದ್ಧ ಹೆಹಲಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕೃತಕ ಬುದ್ಧಿಮತ್ತೆ ಬಳಸಿಕೊಂಡು ಮಾನಹಾನಿಕರ ಹಾಗೂ ಸುಳ್ಳು ವಿಡಿಯೋ ಹರಿಬಿಡುವ ಘಟನೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಎಐ ಕಂಟೆಂಟ್ ಕ್ರಿಯೇಟರ್‌ಗಳಿಗೆ ನೋಂದಣಿ ಕಡ್ಡಾಯ, ಅವರು ರಚಿತ ವಿಷಯಗಳಿಗೆ ಕಡ್ಡಾಯ ಲೇಬಲ್ ಮಾಡುವಂತೆ ಹಾಗೂ ಡೀಪ್‌ಫೇಕ್ ವಿಡಿಯೋ ಕ್ರಿಯಟರ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಂಸದೀಯ ಸ್ಥಾಯಿ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಬಗ್ಗೆ ವಿಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಎಐ ರಚಿತ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣ ಆಗಿತ್ತು. ಅಲ್ಲದೆ, ದೆಹಲಿ ಪೊಲೀಸರು ಪ್ರಕರಣವನ್ನು ಕೂಡ ದಾಖಲಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಈ ಎಐ ಕಂಟೆಂಟ್ ಕ್ರಿಯೇಟರ್‌ಗಳಿಗೆ ಡೀಪ್‌ಫೇಕ್ ವಿಡಿಯೋಗ ಕ್ರಿಯೆಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಂದ್ರಕ್ಕೆ ಶಿಫಾರಸ್ಸು ಮಾಡಲಾಗಿದ ಎಂದು ತಿಳಿದುಬಂದಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ಸಮಿತಿಯು ಸುಳ್ಳು ಸುದ್ದಿಗಳನ್ನು ಹರಡುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ಮತ್ತು ತಾಂತ್ರಿಕ ಕ್ರಮಗಳನ್ನು ರೂಪಿಸಬೇಕು. ಎಐ ರಚಿತ ಚಿತ್ರ ಮತ್ತು ವಿಡಿಯೋಗಳು ಐತಿಹಾಸಿಕ ಘಟನೆಗಳು ಮತ್ತು ವ್ಯಕ್ತಿಗಳನ್ನು ತಪ್ಪಾಗಿ ಚಿತ್ರಿಸಬಹುದು. ಇದು ಸಾರ್ವಜನಿಕ ವ್ಯವಸ್ಥೆಗೆ ಭೀತಿ ಉಂಟುಮಾಡುವ ಸಾಧ್ಯತೆಯಿರುತ್ತದೆ ಎಂದು ಸಮಿತಿ ಎಚ್ಚರಿಕೆ ನೀಡಿದೆ.
ಅಷ್ಟೇ ಅಲ್ಲದೆ, ಅಂತಹ ಡೀಪ್‌ಫೇಕ್ ವಿಡಿಯೋ ರಚಿನೆ ಮಾಡಿದವರಿಗೆ ದಂಡ ಹೆಚ್ಚಳ, ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಕಡ್ಡಾಯ ಫ್ಯಾಕ್ಟ್ ಚೆಕಿಂಗ್ ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿದೆ. ಈ ಮನವಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗಿದೆ. ಅದನ್ನು ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದು ಜಾರಿಯಾದ್ರೆ ಸಮಾಜದಲ್ಲಿ ಎಐನಿಂದ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಬ್ರೇಕ್ ಬಿದ್ದಂತೆ ಆಗಲಿದೆ.
ಈಗಾಗಲೇ ಇಂತಹ ಡೀಪ್‌ಫೇಕ್ ವಿಡಿಯೋಗಳಿಂದ ತುಂಬಾ ಜನರ, ಅದರಲ್ಲೂ ಸೆಲೆಬ್ರೆಟಿಗಳಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ. ಈಗಲೂ ಎಐ ವಿಡಿಯೋಗಳ ಮೂಲಕ ಮಾನಹಾನಿಕರ ವಿಷಯಗಳನ್ನು ಹರಡುವುದು ಹೆಚ್ಚಾಗುತ್ತಿದೆ. ಜೊತೆಗೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಹಣ ಪೀಕುತ್ತಿರುವ ಘಟನೆಗಳು ಸಹ ನಡೆಯಿತ್ತಿವೆ. ಇದಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ಇದು ಯಾವ ಹಂತಕ್ಕೆ ಹೋಗಿ ತಲುಪುತ್ತದೆಯೋ ಅಂದಾಜು ಮಾಡಲಿಕ್ಕೂ ಆಗುವುದಿಲ್ಲ.












Click it and Unblock the Notifications