Artificial Intelligence: 'ಎಐ ತಂತ್ರಜ್ಞಾನಕ್ಕೆ ತಕ್ಕಂತೆ ಕನ್ನಡ ಭಾಷೆ ಕೊಂಡೊಯ್ಯಲು ಸಿದ್ಧತೆ'
Artificial Intelligence: ಇದೀಗ ಯಾವ ಕ್ಷೇತ್ರದಲ್ಲಿ ನೋಡಿದರೂ ಎಐನದ್ದೇ ಸದ್ದು ಜೋರಾಗಿದೆ. ಇದು ಎಂಟ್ರಿ ಕೊಟ್ಟಾಗಿನಿಂದ ಕಂಪನಿಗಳಲ್ಲಿ ಇದೇ ನೆಪ ಹೇಳಿ ಉದ್ಯೋಗಿಗಳನ್ನು ವಜಾಗೊಳಿಸಿರುವ ಘಟನೆಗಳು ನಡೆಯುತ್ತಿವೆ. ಅದರಲ್ಲೂ ತುಂಬಾ ಜನ ಕನ್ನಡಿಗರು ಕೂಡ ಕೆಲಸ ಕಳೆದುಕೊಂಡಿರುವ ಉದಾಹರಣೆಗಳಿವೆ. ಆದ್ದರಿಂದ ಇದಕ್ಕೆ ಮೂಗುದಾರ ಹಾಕಿ ಕನ್ನಡಿಗರಿಗೆ ಉದ್ಯೋಗ ನಷ್ಟ ಆಗದಂತೆ ಮಹತ್ವದ ನಿರ್ಧಾರವೊಂದಕ್ಕೆ ಸಿಎಂ ಸಿದ್ದರಾಯಮಯ್ಯ ಕೈಹಾಕಿದ್ದಾರೆ.
ಯಾವ ಕಂಪನಿಗಳಲ್ಲಿ ನೋಡಿದರೂ ಎಐ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಉದ್ಯೋಗ ವಜಾಗೊಳಿಸುವ ಕಾರ್ಯ ಮುಂದುವರೆದಿದೆ. ಆದ್ದರಿಂದ ಎಐನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟ ಆಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಕೊಂಡೊಯ್ಯು ಸಿದ್ಧಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜನ ಮಾಡಿದದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಈ ಬಗ್ಗೆ ಮಾತನಾಡಿದರು. ಇಂಗ್ಲಿಷ್, ಹಿಂದಿ ಭಾಷೆಗಳು ಮಕ್ಕಳ ಪ್ರತಿಭೆಗೆ ಅಡ್ಡಿಯಾಗುತ್ತಿವೆ. ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಲು ಸೂಕ್ತ ಕಾನೂನು ತರಬೇಕಿದೆ. ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಇದೆ. ಆದ್ದರಿಂದ ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ನೂತನ ನೀತಿ ಜಾರಿ ಮಾಡಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಕರ್ನಾಟಕದಲ್ಲಿ ಬೇರೆ ಭಾಷೆಯವರ ದಬ್ಬಾಳಿಕೆ ಹೆಚ್ಚಾಗಿದ್ದು, ಅವರ ಕೊಬ್ಬು ಇಳಿಸುವ ಕಾರ್ಯಗಳು ಕೂಡ ನಡೆಯುತ್ತಿವೆ. ಹೊರ ರಾಜ್ಯಗಳಿಂದ ಬಂದು ಇಲ್ಲಿನ ಅನ್ನ, ನೀರು ಸೇವನೆ ಮಾಡಿ ಇಲ್ಲಿನ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಿರುವ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಅಷ್ಟೇ ಅಲ್ಲದೆ, ಕನ್ನಡಿಗರ ಮೇಲೆಯೇ ದಬ್ಬಾಳಿಕೆ ಮಾಡಿರುವ ಉದಾಹರಣೆಗಳಿವೆ. ಇಂತಹವರ ವಿರುದ್ಧ ಸೂಕ್ತ ತೆಗೆದುಕೊಳ್ಳಬೇಕು ಎನ್ನುವ ಕೂಗುಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಮತ್ತೊಂದೆಡೆ, ಹಿಂದಿ ಹೇರಿಕೆಯಂತಹ ಘಟನೆಗಳು ಕೂಡ ನಡೆದಿವೆ.
ಇದಕ್ಕೆ ತಕ್ಕ ತಿರುಗೇಟು ಕೊಡುವ ಕೆಲಸಗಳು ಕೂಡ ಆಗುತ್ತಿವೆ. ಇನ್ನೂ ಶಿಕ್ಷಣದಲ್ಲಿ ಕನ್ನಡ ನಿರ್ಲಕ್ಷ್ಯ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿದೆ. ಇತರ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಕನ್ನಡಕ್ಕೆ ಎದುರಾಗಿದೆ. ಬೇರೆ ದೇಶಗಳ ಮಕ್ಕಳು ತಾಯಿ ನುಡಿಯಲ್ಲೇ ಯೋಚಿಸುತ್ತಾರೆ, ಕಲಿಯುತ್ತಾರೆ, ಕನಸು ಕಾಣುತ್ತಾರೆ. ಆದರೆ, ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿ ಇದೆ. ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ತರಲು ಸೂಕ್ತ ಕಾನೂನು ತರಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದೆ. ಅದರೂ ಸಹ ಅನುದಾನ ನೀಡದೇ ಅನ್ಯಾಯ ಮಾಡುತ್ತಿದ್ದಾರೆ. ಕರ್ನಾಟಕ ವಿರೋಧಿಯಾದ ಎಲ್ಲವನ್ನೂ ನಾವು ವಿರೋಧಿಸಲೇಬೇಕಾಗಿದೆ ಎಂದು ಘರ್ಜಿಸಿದರು.












Click it and Unblock the Notifications