Artificial Intelligence: ವಿಪತ್ತು ನಿರ್ವಹಣೆಗಾಗಿ ಎಐ ತಂತ್ರಜ್ಞಾನ ಬಳಕೆ, ಎಲ್ಲಿ?
ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಇಂದು ಉದ್ಯೋಗಿಗಳಿಗೆ ಶಾಪ ಎಂದು ಹೇಳಲಾಗುತ್ತಿದೆ. ಆದರೆ ಸದ್ದಿಲ್ಲದೆ ಅನೇಕ ಒಳ್ಳೆಯ ಕೆಲಸಗಳಿಗೂ ಬಳಕೆಯಾಗುತ್ತಿದೆ. ಈಗಾಗಲೇ ವಿವಿಧ ಕ್ಷೇತ್ರಗಳಿಗೆ ಕಾಲಿಟ್ಟಿರುವ ಎಐ ತಂತ್ರಜ್ಞಾನವು ಇದೀಗ ವಿಪತ್ತು ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಹೌದು ಹಿಮಾಚಲ ಪ್ರದೇಶದಲ್ಲಿ ವಿಪತ್ತು ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆಯೊಂದಿಗೆ ಎಸ್‌ಡಿಆರ್‌ಎಫ್ ಅನ್ನು ಬಲಪಡಿಸಲು ಮುಂದಾಗಿದೆ.
ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವ ಕಾರಣ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯನ್ನು (SDRF) ಬಲಪಡಿಸುವ ಅಗತ್ಯವಿದೆ ಎಂದು ಮುಖ್ಯ ಕಾರ್ಯದರ್ಶಿ ಪ್ರಬೋಧ್ ಸಕ್ಸೇನಾ ಹೇಳಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ), ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ ಮತ್ತು ಎನ್‌ಎಚ್‌ಎಐ, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ.

ಈ ವಿಭಾಗಗಳಲ್ಲಿ ಕಾರ್ಯಾಚರಣೆಯ ಕೌಶಲ್ಯಗಳನ್ನು ಹೆಚ್ಚಿಸುವುದು, ಸುಧಾರಿತ ತಂತ್ರಜ್ಞಾನವನ್ನು ಸಂಯೋಜಿಸುವುದು ಮತ್ತು ಸುಸ್ಥಿರ ವಿಧಾನಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ ಒತ್ತು ನೀಡಬೇಕು ಎಂದಿದ್ದಾರೆ. ಹಿಮಾಚಲ ಪ್ರದೇಶದಲ್ಲಿನ ಪರ್ವತ ಮತ್ತು ಎತ್ತರದ ಪ್ರದೇಶಗಳಲ್ಲಿನ ವಿಪತ್ತುಗಳಿಂದ ಉಂಟಾಗುವ ಸವಾಲುಗಳ ನಿವಾರಣೆ ತಂತ್ರಜ್ಞಾನದ ಮೊರೆ ಹೋಗಬೇಕು ಎಂದಿದ್ದಾರೆ. ಇದಕ್ಕಾಗಿ ಎಸ್‌ಡಿಆರ್‌ಎಫ್ ತಂಡಗಳಿಗೆ ಮೀಸಲಾದ ತರಬೇತಿ ಮಾಡಲ್ ಹಾಗೂ ವೇಳಾಪಟ್ಟಿಯನ್ನು ಅಭಿವೃದ್ಧಿಪಡಿಸಬೇಕು ಎಂದಿದ್ದಾರೆ.
ಕಠಿಣ ಭೂಪ್ರದೇಶಗಳು ಮತ್ತು ತೀವ್ರ ಹವಾಮಾನ ಪರಿಸ್ಥಿತಿಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಅಗತ್ಯವಾದ ವಿಶೇಷ ಕೌಶಲ್ಯಗಳೊಂದಿಗೆ ತಂಡಗಳನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಉದಾಹರಣೆಗೆ ಈ ತರಬೇತಿಯು ವೈಮಾನಿಕ ತಪಾಸಣೆಗಾಗಿ ಡ್ರೋನ್‌ಗಳನ್ನು ನಿರ್ವಹಿಸುವುದು, ದುರ್ಗಮ ಪ್ರದೇಶಗಳಲ್ಲಿ ಬದುಕುಳಿದವರನ್ನು ಪತ್ತೆ ಮಾಡುವುದು ಹಾಗೂ ಹಾನಿ ಬಗ್ಗೆ ಮಾಹಿತಿ ಕಲೆ ಹಾಕುವುದು, ಔಷಧಿಗಳು ಮತ್ತು ಆಹಾರ ಪ್ಯಾಕೆಟ್‌ಗಳಂತಹ ಅಗತ್ಯ ಸಾಮಗ್ರಿಗಳನ್ನು ನಿಖರವಾದ ಸ್ಥಳಗಳಿಗೆ ರವಾನಿಸುವುದು ಸೇರಿ ಪ್ರಾಯೋಗಿಕ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಎಐ ಬಳಕೆಯಿಂದ ಏನೆಲ್ಲ ಅನುಕೂಲ?
ಪ್ರಮುವಾಗಿ ಎಐ ಬಳಕೆಯು ಮುನ್ಸೂಚನೆಯ ವಿಶ್ಲೇಷಣೆ, ತ್ವರಿತ ಹಾನಿ ಮೌಲ್ಯಮಾಪನ, ಸಂಪನ್ಮೂಲ ಹಂಚಿಕೆಯನ್ನು ಅತ್ಯುತ್ತಮವಾಗಿಸುವುದು ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಮೂಲಕ ವಿಪತ್ತು ನಿರ್ವಹಣೆಯಲ್ಲಿ ಕ್ರಾಂತಿಯನ್ನುಂಟು ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಐತಿಹಾಸಿಕ ಹವಾಮಾನ ಮಾದರಿಗಳ ದತ್ತಾಂಶ ವಿಶ್ಲೇಷಣೆ ಮೂಲಕ ಹೆಚ್ಚಿನ ನಿಖರತೆಯೊಂದಿಗೆ ಮುನ್ಸೂಚನೆ ನೀಡುವುದು, ಸಂಪನ್ಮೂಲ ನಿಯೋಜನೆಗೆ ಅನುಕೂಲವಾಗಲಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲು, ವಿಪತ್ತಿನ ನಂತರ ಸ್ವಯಂಚಾಲಿತವಾಗಿ ಡೇಟಾ ವಿಶ್ಲೇಷಿಸಲು, ನೈಜ-ಸಮಯದ ಆಧಾರದ ಮೇಲೆ ಮಾನವಶಕ್ತಿ, ಪರಿಹಾರ ಸಾಮಗ್ರಿಗಳು ಮತ್ತು ಸಲಕರಣೆಗಳ ರವಾನೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ವ್ಯವಸ್ಥೆಗಳ ನಿಖರತೆಯನ್ನು ಹೆಚ್ಚಿಸುವಲ್ಲಿ ಇದು ಸಹಾಯಕವಾಗುತ್ತದೆ ಎಂದು ಹೇಳಲಾಗಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications