Artificial intelligence: ಶಿಕ್ಷಣ ಕ್ಷೇತ್ರದಲ್ಲಿ ಎಐ ಪಾತ್ರದ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
Artificial intelligence: ಯಾವ ಕ್ಷೇತ್ರದಲ್ಲಿ ನೋಡಿದರೂ ಎಐನದ್ದೇ ಸದ್ದು ಜೋರಾಗಿದೆ. ಇದೀಗ ಈ ತಂತ್ರಜ್ಞಾನದ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಹಾಗಾದ್ರೆ, ಈ ವಿಚಾರ ತೆಗೆದಿದ್ದು ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚನ್ನಗಿರಿಯ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜನೆ ಮಾಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಗುರುಭವನ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಭವಿಷ್ಯಕ್ಕಾಗಿ ಮುಂದಿನ ಪೀಳಿಗೆಗೆ ನಾವು ಏನಾದರೂ ಕೊಡುಗೆ ನೀಡಬೇಕಾಗಿದ್ದರೆ ಅದು ಶಿಕ್ಷಣಕ್ಕೆ ಆಗಿರಬೇಕೆಂದು ಹೇಳಿದರು.

ಇದೇ ವೇಳೆ ಸರ್ಕಾರದಿಂದ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ಅನುಕೂಲವಾಗಲೆಂದು ಉಚಿತ ಕೋಚಿಂಗ್ ತರಗತಿಗಳನ್ನು ನಡೆಸಲಾಗುತ್ತಿದ್ದು, ಇದರಿಂದ 25,000 ವಿದ್ಯಾರ್ಥಿಗಳಿಗೆ ಅನುಕೂಲ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಎಲ್ಲಾ ಮಕ್ಕಳಿಗೂ ಇದನ್ನು ತಲುಪುವಂತೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಇಂದು ತಂತ್ರಜ್ಞಾನ ಮುಂದುವರೆದಿದ್ದು, ಇದರ ಪ್ರಯೋಜನೆ ಪಡೆಯಲು ಎಐ (Artificial intelligence) ತಂತ್ರಜ್ಞಾನದಿಂದ ಶಿಕ್ಷಣ ನೀಡುವುದು, ಶಾಲೆಯಲ್ಲಿ ಕೌಶಲ್ಯಯುತ ಶಿಕ್ಷಣಕ್ಕೆ ಆದ್ಯತೆ ನೀಡಿ ಕಲಿಯುತ ಗಳಿಸುವ ಪರಿಕಲ್ಪನೆಯನ್ನು ಅನುಷ್ಟಾನ ಮಾಡಲು ಚಿಂತನೆ ಮಾಡಿದ್ದು ಎಲ್ಲರಿಗೂ ಸಮಾನತೆ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಶಾಲೆಗಳಲ್ಲಿ ಓದಿ ಉನ್ನತ ಸ್ಥಾನಕ್ಕೇರಿದ ಹಳೇ ವಿದ್ಯಾರ್ಥಿಗಳಿಂದ ಶಾಲಾಭಿವೃದ್ದಿ ಕೈಗೊಳ್ಳಲು ಯೋಜಿಸಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯನ್ನು ಜಾರಿಗೆ ತಂದು ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ಇದರಿಂದ ಸರ್ಕಾರದ ಯೋಜನೆಗಳ ಜೊತೆಗೆ ದಾನಿಗಳ ಸಹಾಯದಿಂದ ಶಾಲೆಗಳು ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿ ಆಗಿದೆ ಎಂದು ಹೇಳಿದರು.
ಇನ್ನು ಕಾಲ ಬದಲಾದಂತೆ ತಂತ್ರಜ್ಞಾನ ಕ್ಷೇತ್ರದಲ್ಲೂ ಹಲವು ಬದಲಾವಣೆಗಳಾಗುತ್ತುವೆ. ಹಾಗೆಯೇ ಶಿಕ್ಷಣ ವ್ಯವಸ್ಥೆಯಲ್ಲಿಯೂ ಆಧುನಿಕತೆ ಅನಿವಾರ್ಯ ಆಗಿಬಿಟ್ಟಿದೆ. ಇದು ಎಐ ಯುಗ ಆಗಿದ್ದು, ಶಿಕ್ಷಣ ಕ್ಷೇತ್ರದಲ್ಲೂ ಕೂಡ ಎಐ ತಂತ್ರಜ್ಞಾನ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯೂ ಸಹ ಮಕ್ಕಳ ಹಾಜರಾತಿಯನ್ನ ಫೇಷಿಯಲ್ ಅಟೆಂಡೆನ್ಸ್ ಮೂಲಕ ದಾಖಲು ಮಾಡಿಕೊಳ್ಳಲು ಮುಂದಾಗಿದ್ದು, ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ಕೃತಕ ಬುದ್ಧಿಮತ್ತೆ ಬಹುತೇಕ ಶಿಕ್ಷಣ ಸಂಸ್ಥೆಗಳಿಗೂ ವ್ಯಾಪಿಸಿದೆ.












Click it and Unblock the Notifications