2000 ಎಕರೆಯಲ್ಲಿ ಬಿಡದಿ ಎಐ ನಗರಕ್ಕೆ ವಿರೋಧ; ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ : ಬೃಹತ್ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 27: ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಹೋಬಳಿಯ 2000 ಎಕರೆಗೂ ಹೆಚ್ಚು ಜಾಗದಲ್ಲಿ ದೇಶದ ಮೊದಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧರಿತ ವಿಶ್ವದರ್ಜೆಯ ಎ.ಐ ನಗರ (ಎ.ಐ ಸಿಟಿ) ತಲೆ ಎತ್ತಲಿದೆ. ಎಐ ನಗರಕ್ಕೆ ಇದೀಗ ತೀವ್ರ ವಿರೋಧ ಕೇಳಿ ಬಂದಿದ್ದು, ಜೆಡಿಎಸ್ ರಾಜ್ಯ ಘಟಕ ಇದೀಗ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದೆ.
ಈ ಕುರಿತು ಇಂದು ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಪಕ್ಷದ ರಾಜ್ಯ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯಲ್ಲಿ ಮಾಡುತ್ತಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಯನ್ನು ಕೈ ಬಿಡುವಂತೆ ಆಗ್ರಹಿಸಿದರು. ಬಿಡದಿ ಟೌನ್ ಶಿಪ್ ವಿಚಾರವಾಗಿ ವಿಸ್ತೃತವಾಗಿ ಸರ್ಕಾರದ ರೈತ ವಿರೋಧಿ ನಿಲುವನ್ನು ತರಾಟೆಗೆ ತೆಗೆದುಕೊಂಡರು.

ನಾವು ನಾಳೆಯಿಂದ ಬೃಹತ್ ಹೋರಾಟ ಮಾಡುತ್ತೇವೆ. ಈ ಯೋಜನೆ ಕೈಬಿಡುವವರೆಗೂ, ರೈತರ ಬೆನ್ನೆಲುಬು ಆಗಿ ನಿಲ್ಲುತ್ತೇವೆ. ಇದು ಯಾವ ಹಂತಕ್ಕೆ ಹೋಗಲಿ. ನಾವು ಇರುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿಯವರು ಹೇಳಿದರು. ಯಾವ ಕಾರಣಕ್ಕೂ ಜೆಡಿಎಸ್ ಪಕ್ಷ ರೈತರ ವಿಚಾರದಲ್ಲಿ ಹಿಂದೆ ಸರಿಯುವುದಿಲ್ಲ. ಈ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.
ಕಳೆದ ಹಲವಾರು ತಿಂಗಳಿಂದ ಬಿಡದಿ ಭಾಗದ ರೈತರು ತಮ್ಮ ಜಮೀನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ವಿಶ್ವಾಸಕ್ಕೆ ತಕ್ಕಂತೆ ವರ್ತಿಸುತ್ತಿಲ್ಲ ಅವರಲ್ಲಿ ಆಕ್ರೋಶ ಹೆಚ್ಚು ಮಾಡೋ ಕೆಲಸ ಮಾಡುತ್ತಿದೆ. GBDA ಅಧಿಕಾರಿಗಳು, ಪೊಲೀಸರು ರೈತರ ಬಳಿ ಹೋಗುತ್ತೀದಾರೆ. ಈ ವಿಚಾರದಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಿಡಿಕಾರಿದರು. ಬಹಳ ದಿನಗಳಿಂದ ರೈತರ ಜಮೀನು ಕಸಿದುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಖಂಡಿಸಿ ರೈತರು ಹೋರಾಟ ಮಾಡ್ತಿದ್ದಾರೆ. ನಾಳೆ ಜೆಡಿಎಸ್ ಪಕ್ಷ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿ ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ನಡೆಸುತ್ತದೆ ಎಂದು ಗುಡುಗಿದರು.
ರೈತರ ವಿಚಾರದಲ್ಲಿ ದೇವನಹಳ್ಳಿಯಚನ್ನರಾಯಪಟ್ಟಣದಲ್ಲಿ ಸಹ ಇದೇ ರೀತಿ ಇತ್ತು. ಅಲ್ಲಿ ರೈತರು ಒಂದು ಸಾವಿರ ದಿನಗಳ ಕಾಲ ಹೋರಾಟ ಮಾಡಿದ್ದಾರೆ. ಅದೇ ರೀತಿ ಜೆಡಿಎಸ್ ಸರ್ಕಾರ ವಿರುದ್ಧ ಹೋರಾಟ ನಡೆಸಲಿದೆ. ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಜೆಡಿಎಸ್ ಹೋಗುತ್ತದೆ ಎಂದು ಇದೇ ವೇಳೆ ತಿಳಿಸಿದರು. ಇನ್ನು ಪ್ರತಿಭಟನೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ನಮ್ಮ ಜೊತೆ ರೈತ ಹೋರಾಟಗಾರು ಇರುತ್ತಾರೆ. ಸಾಕಷ್ಟು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಮೂಡಿದೆ. ಅದನ್ನ ನಿಮ್ಮ ಮುಂದೆ ಇಡುತ್ತೇವೆ ಎಂದರು.
ಮೊದಲ ಈ 900 ಎಕರೆಯಲ್ಲಿ ಪೈಲೆಟ್ ಪ್ರಾಜೆಕ್ಟ್ ಮಾಡಿ ತೋರಿಸಿ. ಕೆಐಡಿಬಿ ಲ್ಯಾಂಡ್ ನಲ್ಲಿ ತೋರಿಸಿ. ಅಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ.ಜಿಬಿಡಿಎಗೆ ಯಾವುದೇ ಅನುಭವ ಇಲ್ಲ. ನಿಮಗೆ ಸಿಬ್ಬಂದಿ ಇದ್ದಾರೆ,ಹಣಕಾಸು ಮೂಲ ಇದೀಯಾ.? ಇದೆಲ್ಲರ ಕೊರತೆ ಕಾಣಿಸುತ್ತಿದೆ. ಸರ್ಕಾರ ಇದಕ್ಕೆ ಉತ್ತರ ನೀಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಸರ್ಕಾರ ಪರಿಸರ ಕ್ಲೀಯರನ್ಸ್ ಇಲ್ಲಿಯವರೆಗೆ ಪಡೆದುಕೊಂಡಿಲ್ಲ. ಸಾಮಾಜಿಕ ಶೈಕ್ಷಣಿಕ ಸರ್ವೇ ಅಂತ ಎಲ್ಲರಿಗೂ ನ್ಯಾಯ ಕೋಡಬೇಕು ಅಂತ ಇದ್ದೀರಾ.! ಅಲ್ಲಿನ ಸುತ್ತಮುತ್ತ 10 ಹಳ್ಳಿಗಳ ಜನತೆ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಇದರ ಬಗ್ಗೆ ನೋಡಬೇಕು ಎಂದು ವಾಗ್ದಾಳಿ ನಡೆಸಿದರು.
ರೈತರಿಗೆ ಪರಿಹಾರದ ಬಗ್ಗೆ ಡಿಕೆ ಶಿವಕುಮಾರ್ ಅವರು ಇಲ್ಲಿಯವರೆಗೂ ಸಭೆ ಮಾಡಿಲ್ಲ. ನಾನು ಡಿಸಿಎಂ ಅವರನ್ನ ಪ್ರಶ್ನೆ ಮಾಡ್ತೀನಿ. ರೈತರ ಜೊತೆ ಸೌಜನ್ಯಕ್ಕಾದರು ಒಂದು ಸಭೆ ಮಾಡಿಲ್ಲ. ರೈತರ ಮುಂದೆ ತೊಡೆ ತಟ್ಟಿರೋದು ನೋಡಿದ್ದೀವಿ. ನನ್ನ ತಡೆಯಿರಿ ಎಂದು ಸವಾಲು ಹಾಕಿದ್ದೀರಾ ಎಂದು ಡಿಸಿಎಂ ಶಿವಕುಮಾರ್ ಗೆ ನಿಖಿಲ್ ಪ್ರಶ್ನೆಸಿದರು.
ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ.? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ.? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ.?ರೈತರ ಜೊತೆ ಮಾಡಿದ್ದೀರಾ.ಇದು ಪ್ರಜಾಪ್ರಭುತ್ವ ವಿರೋಧಿ ಎಂದು ವಾಗ್ದಾಳಿ ನಡೆಸಿದರು. ಸೌಜನ್ಯಕ್ಕಾದರು ಸ್ಥಳೀಯ ರೈತರ ಜತೆ ಸಭೆ ಮಾಡದೇ, ತರಾತುರಿಯಲ್ಲಿ ಟೌನ್ ಶಿಪ್ ಯೋಜನೆ ಜಾರಿ ಮಾಡುತ್ತಿರುವ ಹಿಂದಿನ ಉದ್ದೇಶವೇನು? ರೈತರಿಗೆ ಇದರಿಂದಾಗುತ್ತಿರುವ ನಷ್ಟ ಹಾಗೂ ರೈತರ ಮುಂದಿನ ಬದುಕಿನ ಬಗ್ಗೆ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.












Click it and Unblock the Notifications