ಗಲ್ಫ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ತುಂಬೆ ಲ್ಯಾಬ್ ಫಾರ್ ಎಐ ಇನ್ ಹೆಲ್ತ್‌ಕೇರ್ ಉದ್ಘಾಟನೆ: ಏನಿದರ ಉದ್ದೇಶ?
ದಿನದಿಂದ ದನಕ್ಕೆ ತಂತ್ರಜ್ಞಾನದಲ್ಲಿ ದೊಡ್ಡ ಮಟ್ಟದಲ್ಲಿ ಕ್ರಾಂತಿ ಆಗುತ್ತಿದೆ. ಅದರಲ್ಲೂ ಯಾವ ಕ್ಷೇತ್ರದಲ್ಲಿ ನೋಡಿದರೂ ಎಐನದ್ದೇ ಸದ್ದು ಜೋರಾಗಿದೆ. ಹಾಗೆಯೇ ಇದೀಗ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ತುಂಬೆ ಲ್ಯಾಬ್ ಫಾರ್ ಎಐ ಇನ್ ಹೆಲ್ತ್‌ಕೇರ್ ಅನ್ನು AIಗಾಗಿ ಉದ್ಘಾಟನೆ ಮಾಡಿದೆ. ಹಾಗಾದ್ರೆ ಇದರ ಉದ್ದೇ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆ ಮೂಲಕ ಶಿಕ್ಷಣ ಮತ್ತು ಸಂಶೋಧನೆಯನ್ನು ಮುನ್ನಡೆಸುವ ಗುರಿ ಇದರ ಉದ್ದೇಶವಾಗಿದೆ. ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಗ್ರಂಥಾಲಯದ ಮುಖ್ಯ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಭಾರತೀಯ ರಾಯಭಾರಿ ಸಂಜಯ್ ಸುಧೀರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಅಧ್ಯಕ್ಷತೆ ವಹಿಸಿದ್ದರು.

ಈ ಬಗ್ಗೆ ಮಾತನಾಡಿದ ಡಾ.ತುಂಬೆ ಮೊಯ್ದೀನ್, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಂಯೋಜಿಸುವ ನಮ್ಮ ಬದ್ಧತೆಯನ್ನು ಈ ಪ್ರಯೋಗಾಲಯ ಪ್ರತಿಬಿಂಬಿಸುತ್ತದೆ. ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಸಂಶೋಧನೆಯಲ್ಲಿ ಸಹಕರಿಸಲಿದೆ ಎಂದು ಹೇಳಿದರು.
ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ. ಮಂದಾ ವೆಂಕಟ್ರಮಣ ಅವರು ಮಾತನಾಡಿ, ಈ ಪ್ರಯೋಗಾಲಯ ನಮ್ಮ ವಿದ್ಯಾರ್ಥಿಗಳನ್ನು ಉದಯೋನ್ಮುಖ ತಂತ್ರಜ್ಞಾನಗಳಿಗೆ ಪ್ರಾಯೋಗಿಕವಾಗಿ ಹೊಂದಿಕೊಳ್ಳುವಂತೆ ಮಾಡಿ ಅವರ ಶೈಕ್ಷಣಿಕ ಅನುಭವವನ್ನು ಬಲಗೊಳಿಸುತ್ತದೆ. ಆರೋಗ್ಯ ರಕ್ಷಣೆಯಲ್ಲಿ ಸಂಶೋಧನೆ ಮತ್ತು ನೈಜ ಸಮಸ್ಯೆ ಪರಿಹಾರಕ್ಕೆ ಹೊಸ ಹಾದಿಯನ್ನು ತೋರಿಸಲಿದೆ ಎಂದು ಹೇಳಿದರು.
ಹೊಸದಾಗಿ ಪ್ರಾರಂಭಿಸಲಾದ ಪ್ರಯೋಗಾಲಯ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಅಸ್ತಿತ್ವದಲ್ಲಿರುವ ಎಐ ಸಂಬಂಧಿತ ಕಾರ್ಯಕ್ರಮಗಳನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ. ರೋಗ ನಿರ್ಣಯ, ರೋಗಿಗಳ ಆರೈಕೆ ಸೇರಿದಂತೆ ಆರೋಗ್ಯ ರಕ್ಷಣಾ ಕ್ಷೇತ್ರಗಳಲ್ಲಿ ಎಐ ಬಳಕೆಗೆ ಅನುವು ಮಾಡಿಕೊಡುತ್ತದೆ. ಇದು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಆರೋಗ್ಯ ವೃತ್ತಿಪರರಿಗೆ ಕ್ರಿಯಾತ್ಮಕ ಕಲಿಕೆ ಮತ್ತು ಸಂಶೋಧನೆಗೆ ಅವಕಾಶ ಮಾಡಿಕೊಡಲಿದೆ.
ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಕೃತಕ ಬುದ್ಧಿಮತ್ತೆ ಮತ್ತು ಆರೋಗ್ಯ ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಸರ್ಟಿಫಿಕೆಟ್ ಕೋರ್ಸ್, ಆರೋಗ್ಯ ರಕ್ಷಣೆಯಲ್ಲಿ ಜನರೇಟಿವ್ AI ಕುರಿತು ಸರ್ಟಿಫಿಕೆಟ್ ಕೋರ್ಸ್‌ಗಳು ಇವೆ. ಈ ಕೋರ್ಸ್‌ಗಳು ಪ್ರಸ್ತುತ ದಾಖಲಾತಿಗೆ ಮುಕ್ತ ಆಗಿವೆ. ಈ ಕುರಿತ ಹೆಚ್ಚಿನ ವಿವರಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://www.gmu.ac.aeನಲ್ಲಿ ಲಭ್ಯವಿದೆ.
1998ರಲ್ಲಿ ಯುಎಇಯ ಅಜ್ಮಾನ್‌ನಲ್ಲಿ ಸ್ಥಾಪನೆಯಾದ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯ ಯುಎಇಯ ಅತ್ಯಂತ ಕ್ರಿಯಾತ್ಮಕ ಮತ್ತು ದೊಡ್ಡ ಖಾಸಗಿ ವೈದ್ಯಕೀಯ ವಿಶ್ವ ವಿದ್ಯಾಲಯಗಳಲ್ಲಿ ಒಂದಾಗಿದೆ. ಇದು ವೈದ್ಯಕೀಯ, ದಂತವೈದ್ಯಕೀಯ, ಫಾರ್ಮಸಿ, ಆರೋಗ್ಯ ವಿಜ್ಞಾನ, ನರ್ಸಿಂಗ್, ಆರೋಗ್ಯ ನಿರ್ವಹಣೆ ಮತ್ತು ಆರೋಗ್ಯ ರಕ್ಷಣೆಯಲ್ಲಿ ಎಐ ಕುರಿತು ಶಿಕ್ಞಣವನ್ನ ನೀಡಲಿದೆ.
ಎಲ್ಲಾ ಕ್ಷೇತ್ರಗಳಿಗೂ ಎಐ ಎಂಟ್ರಿ ಕೊಟ್ಟಿದ್ದು, ಇದನ್ನು ಬರೀ ಕಂಪನಿಗಳಲ್ಲಿ ಮಾತ್ರವಲ್ಲದೆ, ಶಿಕ್ಷಣ, ಆರೋಗ್ಯ ಸಂಸ್ಥೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ಎಐ ತನ್ನ ಜಾಲವನ್ನು ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುವ ಮೂಲಕ ಕ್ರಾಂತಿ ಮಾಡುತ್ತಿದೆ.












Click it and Unblock the Notifications