ಎಐ ಬಳಕೆಯಿಂದ ಮುಂದಿನ ದಿನಗಳಲ್ಲಿ ಮಹತ್ವದ ಬದಲಾವಣೆ: ಅಮೆಜಾನ್ ಸಿಇಒ ಆಂಡಿ ಜಾಸ್ಸಿ !
ಎಐ ಬಳಕೆಯ ಲಾಭ ನಷ್ಟಗಳ ಬಗ್ಗೆ ಲೆಕ್ಕಾಚಾರ ಜೋರಾಗಿದೆ. ಇದೀಗ ಎಐ ಬಳಕೆಯನ್ನು ನಾವು ಹೆಚ್ಚು ಮಾಡಿಕೊಳ್ಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಹಜವಾಗಿಯೇ ಉದ್ಯೋಗ ಕಡಿತವಾಗಲಿದೆ ಎಂದು ಇ-ಕಾಮರ್ಸ್ ದೈತ್ಯ ಕಂಪನಿಯು ಎಚ್ಚರಿಸಿದೆ. ಮುಂದಿನ ದಿನಗಳಲ್ಲಿ ಎಐ ತಂತ್ರಜ್ಞಾನ ಹಾಗೂ ಎಐ ಏಜೆಂಟ್‌ಗಳನ್ನು ಹೆಚ್ಚಾಗಿ ಬಳಸಲಿದ್ದೇವೆ. ಇದರಿಂದ ಭಾರತ ಸೇರಿದಂತೆ ವಿಶ್ವದಾದ್ಯಂತ ಉದ್ಯೋಗ ಕಡಿತವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದ್ದು. ಇದರೊಂದಿಗೆ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಎಐ ತಂದ ಹೊಸ ಆಪತ್ತು ಏನು ಎನ್ನುವ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಎಐ ತಂತ್ರಜ್ಞಾನ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ, ಇದರೊಂದಿಗೆ ಹೊಸ ಹೊಸ ಆತಂಕಗಳು ಸಹ ಶುರುವಾಗಿವೆ. ನಮ್ಮ ಕಂಪನಿಯಲ್ಲಿ ಎಐ ತಂತ್ರಜ್ಞಾನ ಬಳಕೆಯನ್ನು ಹೆಚ್ಚಿಸಿಕೊಳ್ಳಲಿದ್ದು ಇದರೊಂದಿಗೆ ಎಐ ಏಜೆಂಟ್‌ಗಳನ್ನೂ ನೇಮಕ ಮಾಡಿಕೊಳ್ಳಲಿದ್ದೇವೆ. ಇದರಿಂದ ಮುಂಬರುವ ವರ್ಷಗಳಲ್ಲಿ ಕಂಪನಿಯ ಕಾರ್ಪೊರೇಟ್ ನೇಮಕಾತಿಯು ಭಾರೀ ಸಂಖ್ಯೆಯಲ್ಲಿ ಇಳಿಕೆ ಆಗಲಿದೆ ಎಂದು ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಅವರು ಉದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಅಮೆಜಾನ್‌ನಂತಹ ದೊಡ್ಡ ಕಂಪನಿಗಳಲ್ಲೇ ಕೆಲಸ ಕಡಿತವಾಗಲಿದೆ ಎನ್ನುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಐ ಇನ್ನಷ್ಟು ಉದ್ಯೋಗ ಕಸಿಯಲಿದೆ ಎನ್ನುವುದು ಖಚಿತ ಎನ್ನುವಂತೆ ಆಗಿದೆ.

ಇನ್ನು ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಅವರು, ಎಐ ತಂತ್ರಜ್ಞಾನವು ಜೀವಮಾನದಲ್ಲಿ ಒಮ್ಮೆ ಮಾತ್ರ ಬಳಸಬಹುದಾದ ತಂತ್ರಜ್ಞಾನ. ಇದು ಕಂಪನಿಗಳು ಹೇಗೆ ಕೆಲಸ ಮಾಡಬಹುದು ಎನ್ನುವುದನ್ನು ಬದಲಾಯಿಸುತ್ತದೆ. ಇನ್ನು ವಿಶ್ವದ ಅತ್ಯಂತ ಶ್ರೀಮಂತ ತಂತ್ರಜ್ಞಾನ ಇರುವ ಕಂಪನಿಗಳು ಸಹ ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನವನ್ನು ಬಳಸುವಂತೆ ಉತ್ತೇಜನ ನೀಡುತ್ತಿದ್ದಾರೆ. ಎಲ್ಲಾ ಉದ್ಯೋಗಿಗಳು ಎಐ ತಂತ್ರಜ್ಞಾನವನ್ನು ಬಳಸಬೇಕು ಎಂದು ಸಲಹೆಗಳನ್ನು ನೀಡುತ್ತಿದ್ದಾರೆ.
ಇಂದು ಮಾಡುತ್ತಿರುವ ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡುವುದಕ್ಕೆ ನಮಗೆ ಕಡಿಮೆ ಜನರು ಇದ್ದರೆ ಸಾಕು. ಎಐ ಆಧಾರಿತ ಕೆಲಸಗಳನ್ನು ಮಾಡುವ ಜನರ ಸಂಖ್ಯೆ ಹೆಚ್ಚಾಗಿ ಅವಶ್ಯವಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಎಐ ಬಳಕೆಯು ಎಷ್ಟೆಲ್ಲಾ ಬದಲಾಗಲಿದೆ ಎಂದು ಹೇಳುವುದು ಕಷ್ಟವಾಗಬಹುದು. ಮುಂದಿನ ದಿನಗಳಲ್ಲಿ ಎಐ ತಂತ್ರಜ್ಞಾನವು ಸಾಕಷ್ಟು ಬದಲಾಗುವ ಸಾಧ್ಯತೆ ಇದೆ. ಆದರೆ ಮುಂದಿನ ದಿನಗಳಲ್ಲಿ ನಾವು ಹೆಚ್ಚು ಎಐ ಬಳಕೆ ಮಾಡುವುದರಿಂದ ಉದ್ಯೋಗಿಗಳ ಸಂಖ್ಯೆ ಇಳಿಕೆಯಾಗಲಿದೆ. ನಮ್ಮ ಒಟ್ಟು ಕಾರ್ಪೊರೇಟ್ ಉದ್ಯೋಗಿಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಅಮೆಜಾನ್ ಈಗಾಗಲೇ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಕಂಪನಿಯು ಈಚೆಗೆ 27,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದೆ. ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳಲ್ಲಿ ಕೋಡ್‌ನ ಶೇಕಡಾ 30 ರಷ್ಟು ಈಗ AI ಬಳಕೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications