ಆಷಾಢ ಮಾಸದ ಪಂಚಾಂಗ: ಜುಲೈ 26ರಿಂದ ಆಗಸ್ಟ್ 1
ಆಷಾಢ ಮಾಸದ ಜು.26ರಿಂದ ಆ.01ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜು.26. ರವಿವಾರ : ವಿಶಾಖಾ ನಕ್ಷತ್ರ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜು.27. ಸೋಮವಾರ : ಅನುರಾಧಾ. ಏಕಾದಶಿ. ವೈದ್ಯಕೀಯ ಚಿಕಿತ್ಸೆ ಆರಂಭಿಸಲು ಮತ್ತು ಕೃಷಿಗೆ ಸಂಬಂಧಪಟ್ಟ ಕೆಲಸಕಾರ್ಯಗಳಿಗೆ ಸೂಕ್ತದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜು.28. ಮಂಗಳವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜುಲೈ.29. ಬುಧವಾರ : ಮೂಲಾ. ಪರಸ್ಥಳಕ್ಕೆ ಅಥವಾ ಪರದೇಶಕ್ಕೆ ಪ್ರಯಾಣಿಸಲು ಶುಭದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜು.30. ಗುರುವಾರ : ಪೂರ್ವಾಷಾಢಾ. ಪ್ಲಾಟ್ ಮತ್ತು ಭೂಮಿ ಖರೀದಿಗೆ ಅಥವಾ ಮಾರಲು ಸೂಕ್ತದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜು.31. ಶುಕ್ರವಾರ : ಉತ್ತರಾಷಾಢಾ. ಕಡ್ಲಿಗಡುಬ ಹುಣ್ಣಿಮೆ. ಗುರು ಪೂರ್ಣಿಮೆ. ತಾರಸಿ ಹಾಕಿಸಲು ಉತ್ತಮ. ದಿನ. ಹೊಲ, ಮನೆ ಅಥವಾ ಭೂಮಿ ಕೊಳ್ಳಲು ಶುಭದಿನ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಆಗಸ್ಟ್.1. ಶನಿವಾರ : ಶ್ರವಣಾ, ಧನಿಷ್ಠಾ. ದೂರ ಪ್ರಯಾಣದಿಂದ ಖುಷಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳಬಹುದು.
ಈ ವಾರದ ಗ್ರಹಗತಿ : ಕರ್ಕ: ಸೂರ್ಯ+ಮಂಗಳ+ಬುಧ. ಸಿಂಹ: ಶುಕ್ರ+ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.












Click it and Unblock the Notifications