lakshmi narayan yoga 2024: ತುಲಾ ರಾಶಿಯಲ್ಲಿ ರೂಪುಗೊಂಡ ಲಕ್ಷ್ಮೀ ನಾರಾಯಣ ಯೋಗ: ಈ ರಾಶಿಗೆ ಹಣದ ಮಳೆ...
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಶಿ ಬದಲಾವಣೆಗಳು ನಿಯಮಿತ ಸಮಯದಲ್ಲಿ ನಡೆಯುತ್ತದೆ. ಹೀಗಾಗಿ ಗ್ರಹಗಳು ರಾಶಿಯನ್ನು ಬದಲಾಯಿಸಿದಾಗ ಕೆಲವೊಮ್ಮೆ ಅವು ಇತರ ಗ್ರಹಗಳೊಂದಿಗೆ ಸೇರಿಕೊಂಡು ಶುಭ ಅಥವಾ ಅಶುಭ ಯೋಗಗಳನ್ನು ರೂಪಿಸುತ್ತವೆ. ಈ ಯೋಗಗಳು ಮಾನವ ಜೀವನದ ಮೇಲೆ ಪರಿಣಾಮ ಬೀರುತ್ತವೆ.
ಹೀಗೆ ಅಸುರರ ಗುರುವೆಂದು ಪರಿಗಣಿಸಲ್ಪಟ್ಟಿರುವ ಶುಕ್ರನು ಸೆಪ್ಟೆಂಬರ್ 18 ರಂದು ತನ್ನದೇ ಆದ ತುಲಾ ರಾಶಿಯನ್ನು ಪ್ರವೇಶಿಸಿದನು. ಅದರ ನಂತರ ಗ್ರಹಗಳ ರಾಜಕುಮಾರ ಎಂದು ಪರಿಗಣಿಸಲ್ಪಟ್ಟ ಬುಧ ಅಕ್ಟೋಬರ್ 10 ರಂದು ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ತುಲಾ ರಾಶಿಯಲ್ಲಿ ಶುಕ್ರ ಮತ್ತು ಬುಧ ಸಂಯೋಗವಾಗುವುದರಿಂದ ಅತ್ಯಂತ ಮಂಗಳಕರ ರಾಜಯೋಗವಾದ ಲಕ್ಷ್ಮೀ ನಾರಾಯಣ ರಾಜಯೋಗ ರೂಪುಗೊಳ್ಳುತ್ತದೆ.
ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳಲ್ಲಿ ಕಂಡುಬಂದರೂ 3 ರಾಶಿಯವರು ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆಯನ್ನು ಹೊಂದಿರುತ್ತಾರೆ. ಹಾಗಾದರೆ ಈಗ ತುಲಾ ರಾಶಿಯಲ್ಲಿ ಲಕ್ಷ್ಮೀ ನಾರಾಯಣ ರಾಜಯೋಗದಿಂದ ಯಾರಿಗೆ ಅದೃಷ್ಟ ಒಲಿಯಲಿದೆ ಎಂದು ನೋಡೋಣ.

ತುಲಾ ರಾಶಿ
ಲಕ್ಷ್ಮೀ ನಾರಾಯಣ ರಾಜಯೋಗ ತುಲಾ ರಾಶಿಯ ಮೊದಲ ಮನೆಯಲ್ಲಿ ರೂಪುಗೊಳ್ಳುತ್ತದೆ. ಇದು ತುಲಾ ರಾಶಿಯವರ ವ್ಯಕ್ತಿತ್ವವನ್ನು ಸುಧಾರಿಸುತ್ತದೆ. ಕಛೇರಿಯಲ್ಲಿ ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಕೊನೆಗೊಳ್ಳಲಿವೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಅಂದುಕೊಂಡ ಉದ್ಯೋಗ ದೊರೆಯಲಿದೆ. ಸಂಗಾತಿಯೊಂದಿಗೆ ಬಾಂಧವ್ಯ ಹೆಚ್ಚಾಗುವುದು. ಆರ್ಥಿಕ ಸ್ಥಿತಿಯಲ್ಲಿ ಏರಿಕೆ ಕಂಡುಬರಲಿದೆ. ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗುತ್ತದೆ.

ಮಕರ ರಾಶಿ
ಲಕ್ಷ್ಮೀ ನಾರಾಯಣ ರಾಜಯೋಗ ಮಕರ ರಾಶಿಯ 10 ನೇ ಮನೆಯಲ್ಲಿ ರೂಪುಗೊಳ್ಳುತ್ತದೆ. ಹೀಗಾಗಿ ಈ ರಾಶಿಚಕ್ರದವರು ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತಾರೆ. ನೀವು ಬಹಳ ದಿನಗಳಿಂದ ಯೋಚಿಸುತ್ತಿದ್ದ ಕೆಲಸವನ್ನು ನೀವು ಪ್ರಾರಂಭಿಸಿದರೆ, ನಿಮಗೆ ಯಶಸ್ಸು ಸಿಗುತ್ತದೆ.
ಬಹುಕಾಲದ ಆಸೆಗಳು ಈಡೇರುತ್ತವೆ. ವ್ಯಾಪಾರಸ್ಥರು ಹೊಸ ವ್ಯವಹಾರಗಳನ್ನು ಪಡೆಯುತ್ತಾರೆ. ಅದು ಹೆಚ್ಚು ಲಾಭವನ್ನು ತರುತ್ತದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಲಾಗುವುದು.ಇದೇ ಸಮಯದಲ್ಲಿ ಸಂಬಳ ಕೂಡ ಹೆಚ್ಚಾಗಲಿದೆ. ಜೀವನದಲ್ಲಿ ಸಮಸ್ಯೆಗಳು ದೂರವಾಗಿ ದಾಂಪತ್ಯದಲ್ಲಿ ನೆಮ್ಮದಿ ನೆಲೆಸಲಿದೆ.

ಕುಂಭ ರಾಶಿ
ಲಕ್ಷ್ಮೀ ನಾರಾಯಣ ಯೋಗ ಕುಂಭ ರಾಶಿಯ 9ನೇ ಮನೆಯಲ್ಲಿ ರೂಪುಗೊಳ್ಳಲಿದೆ. ಇದರಿಂದ ಆದಾಯದಲ್ಲಿ ಅಧಿಕ ಹೆಚ್ಚಳವಾಗುತ್ತದೆ. ಆಸ್ತಿಯಲ್ಲಿ ಹೂಡಿಕೆ ಮಾಡುವುದರಿಂದ ಅಂದುಕೊಂಡ ಆದಾಯ ಪಡೆಯಬಹುದು. ಅಲ್ಲದೆ ಈ ಅವಧಿಯಲ್ಲಿ ಮಾಡಿದ ಹೂಡಿಕೆಯಿಂದ ಅಧಿಕ ಲಾಭವನ್ನು ನೀವು ಪಡೆಯುತ್ತೀರಿ.
ಉದ್ಯಮಿಗಳು ಹೊಸ ವ್ಯವಹಾರಗಳನ್ನು ಪಡೆಯುತ್ತಾರೆ. ಅದು ಅವರಿಗೆ ಅಂದುಕೊಂಡ ಲಾಭವನ್ನು ನೀಡುತ್ತದೆ. ಷೇರು ಮಾರುಕಟ್ಟೆ, ಲಾಟರಿ ಇತ್ಯಾದಿಗಳಿಂದಲೂ ಲಾಭ ಸಿಗುವ ಸಾಧ್ಯತೆ ಇದೆ. ಅತ್ಯುತ್ತಮ ಕಾರ್ಯಕ್ಷಮತೆಯಿಂದಾಗಿ ಉದ್ಯೋಗಿಗಳು ವೇತನ ಹೆಚ್ಚಳದ ಜೊತೆಗೆ ಬಡ್ತಿ ಪಡೆಯಬಹುದು.
(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಕಾರ್ಯಗತಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ)












Click it and Unblock the Notifications