Budhaditya Rajayoga: ಸೂರ್ಯ ಮತ್ತು ಬುಧದಿಂದ ರೂಪುಗೊಂಡ ಬುಧಾದಿತ್ಯ ರಾಜಯೋಗ: ಈ 3 ರಾಶಿಯವರಿಗೆ ವ್ಯಾಪಾರದಲ್ಲಿ ಸಾಕಷ್ಟು ಲಾಭ

ಗ್ರಹಗಳು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲಿಸುತ್ತವೆ. ಈ ವೇಳೆ ಗ್ರಹಗಳ ಸಂಯೋಗಗಳು ಕಾಲಕಾಲಕ್ಕೆ ಸಂಭವಿಸುತ್ತವೆ. ಈ ಗ್ರಹಗಳು ಒಂದೇ ರಾಶಿಯಲ್ಲಿ ಒಟ್ಟಿಗೆ ಪ್ರಯಾಣಿಸಿದಾಗ ಅದರಿಂದ ಕೆಲವೊಮ್ಮೆ ಶುಭ ಅಥವಾ ಅಶುಭ ಯೋಗಗಳು ಸೃಷ್ಟಿಯಾಗುತ್ತವೆ. ಈ ರೀತಿಯಾಗಿ ರೂಪುಗೊಂಡ ಯೋಗಗಳು ಮಾನವ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತವೆ.

ಅಂದಹಾಗೆ ನವಗ್ರಹಗಳ ಅಧಿಪತಿ ಬುಧ ಸೆಪ್ಟೆಂಬರ್ 17 ರಂದು ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಹೀಗೆ ಕನ್ಯಾ ರಾಶಿಯಲ್ಲಿ ಸೂರ್ಯ ಮತ್ತು ಬುಧ ಗ್ರಹಗಳ ಸಂಯೋಗದಿಂದ ಬುಧಾದಿತ್ಯ ರಾಜಯೋಗ ಉಂಟಾಗುವುದು. ಈ ಯೋಗದ ಪ್ರಭಾವ ಎಲ್ಲಾ ರಾಶಿಗಳಲ್ಲಿ ಕಂಡುಬಂದರೂ, 3 ರಾಶಿಯವರು ಸೂರ್ಯ ಮತ್ತು ಬುಧದ ವಿಶೇಷ ಅನುಗ್ರಹವನ್ನು ಪಡೆಯುತ್ತಾರೆ. ಹಾಗಾದರೆ ಆ ರಾಶಿಯವರು ಯಾರೆಂದು ನೋಡೋಣ.

Budhaditya rajyoga in virgo these zodiac signs will get success in career in kannada

ಕನ್ಯಾ ರಾಶಿ

ಕನ್ಯಾ ರಾಶಿಯ ಮೊದಲ ಮನೆಯಲ್ಲಿ ಸೂರ್ಯ ಮತ್ತು ಬುಧ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತದೆ. ಈ ರಾಶಿಯವರಿಗೆ ಇದು ತುಂಬಾ ಅದ್ಭುತವಾಗಿದೆ. ಈ ರಾಶಿಯವರು ವ್ಯಕ್ತಿತ್ವದಲ್ಲಿ ಸುಧಾರಣೆ ಕಾಣುವರು. ಇದು ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ನೌಕರರು ತಮ್ಮ ಕಾರ್ಯವೈಖರಿಯಿಂದ ಪ್ರಶಂಸೆಗೆ ಪಾತ್ರರಾಗುತ್ತಾರೆ. ಜಂಟಿ ಉದ್ಯಮಗಳನ್ನು ಮಾಡುವವರು ಉತ್ತಮ ಲಾಭವನ್ನು ಕಾಣುತ್ತಾರೆ.

Budhaditya rajyoga in virgo these zodiac signs will get success in career in kannada

ಸಿಂಹ ರಾಶಿ

ಸಿಂಹ ರಾಶಿಯ 2ನೇ ಮನೆಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗವು ರೂಪುಗೊಳ್ಳುತ್ತದೆ. ಹೀಗಾಗಿ ಈ ರಾಶಿಯವರು ಈ ಅವಧಿಯಲ್ಲಿ ಹಠಾತ್ ಹಣದ ಹರಿವನ್ನು ಪಡೆಯಬಹುದು. ಆದಾಯದಲ್ಲಿ ಹೆಚ್ಚಳದಿಂದಾಗಿ, ಸಂಗಾತಿಯೊಂದಿಗಿನ ಸಂಬಂಧವು ಆಹ್ಲಾದಕರವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯ ಕಳೆಯಲು ಅವಕಾಶ ಸಿಗುತ್ತದೆ. ಮಾತಿನ ಮೂಲಕ ನೀವು ಅನೇಕ ವಿಷಯಗಳನ್ನು ಸಾಧಿಸುವಿರಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆಸೆಗಳು ಈಡೇರುತ್ತವೆ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಉದ್ದೇಶಿಸಿದ್ದರೆ, ಈ ಸಮಯವು ಅದಕ್ಕೆ ಅನುಕೂಲಕರವಾಗಿರುತ್ತದೆ.

Budhaditya rajyoga in virgo these zodiac signs will get success in career in kannada

ಧನು ರಾಶಿ

ಧನು ರಾಶಿಯ 10ನೇ ಮನೆಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗವು ರೂಪುಗೊಳ್ಳುತ್ತದೆ. ಈ ಅವಧಿಯಲ್ಲಿ ಈ ರಾಶಿಯವರ ಆದಾಯದಲ್ಲಿ ಅನಿರೀಕ್ಷಿತ ಹೆಚ್ಚಳ ಕಂಡುಬರುತ್ತದೆ. ಹೊಸ ಆದಾಯದ ಮೂಲಗಳನ್ನು ಪಡೆಯಬಹುದು. ವ್ಯಾಪಾರಿಗಳು ತಮ್ಮ ಹೊಸ ಯೋಜನೆಗಳಿಂದ ಉತ್ತಮ ಲಾಭವನ್ನು ಪಡೆಯುತ್ತಾರೆ. ನೀವು ಮಕ್ಕಳಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ಷೇರುಪೇಟೆಯಲ್ಲಿರುವವರು ಉತ್ತಮ ಲಾಭವನ್ನು ಕಾಣುವರು.

(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+