ಚೈತ್ರ ಮಾಸದ ಪಂಚಾಂಗ : ಮಾ. 29ರಿಂದ ಏ. 4
ಚೈತ್ರ ಮಾಸದ ಮಾ.29ರಿಂದ ಏ.4ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮಾ.29. ರವಿವಾರ : ಪುನರ್ವಸು ನಕ್ಷತ್ರ. ಬಟ್ಟೆ-ಬರೆ, ಬಂಗಾರದ ದಾಗೀನು ಕೊಳ್ಳಲು ಮತ್ತು ಸೀರೆ ಕಾರ್ಯಕ್ಕೆ ಉತ್ತಮ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಮಾ.30. ಸೋಮವಾರ : ಪುಷ್ಯಾ. ಏಕಾದಶಿ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಮಾ.31. ಮಂಗಳವಾರ : ಆಶ್ಲೇಷಾ. ಏಕಾದಶಿ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಏ.1. ಬುಧವಾರ : ಮಘಾ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಏ.2. ಗುರುವಾರ : ಪೂರ್ವಾಫಾಲ್ಗುಣಿ. ಮಹಾವೀರ ಜಯಂತಿ. ದೂರ ಪ್ರಯಾಣದಿಂದ ತೊಂದರೆ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಏ.3. ಶುಕ್ರವಾರ : ಉತ್ತರಾಫಾಲ್ಗುಣಿ. ಕಚೇರಿಯ ಮುಖ್ಯವಾದ ಕೆಲಸಕ್ಕೆ ಮತ್ತು ಸೀರೆ ಕಾರ್ಯಕ್ಕೆ ಉತ್ತಮ. ಗುಡ್ ಫ್ರೈಡೇ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಏ.4. ಶನಿವಾರ : ಹಸ್ತಾ. ಹನುಮ ಜಯಂತಿ. ದವನದ ಹುಣ್ಣಿಮೆ. ರಾಹುಗ್ರಸ್ತ ಖಗ್ರಾಸ ಚಂದ್ರಗ್ರಹಣ. ಗ್ರಹಣ ಆರಂಭದ ಸಮಯ ಮಧ್ಯಾಹ್ನ 3-45 ಕ್ಕೆ . ಮುಕ್ತಾಯ ಸಂಜೆ 7-15 ಕ್ಕೆ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಮಂಗಳವಾರ, ಬುಧವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಎಲ್ಲ ಕೆಲಸ ಕಾರ್ಯ ಮಾಡಿಕೊಳ್ಳುವುದು ಉತ್ತಮ.
ಈ ವಾರದ ಗ್ರಹಗತಿ : ಮೇಷ: ಶುಕ್ರ+ಮಂಗಳ. ಕರ್ಕ: ಗುರು+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ) ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮೀನ: ಕೇತು+ರವಿ+ಬುಧ.












Click it and Unblock the Notifications