Horoscope Today: ದಿನ ಭವಿಷ್ಯ ಫೆಬ್ರವರಿ 18- ಈ ರಾಶಿಯ ಸಮಸ್ಯೆಗೆಲ್ಲವೂ ಮಂಜಿನಂತೆ ಕರಗಲಿವೆ

ಫೆಬ್ರವರಿ 18 ಮಾಘ ಮಾಸದ ಕೃಷ್ಣ ಪಕ್ಷದ ಮಂಗಳವಾರ. ಈ ದಿನ ಶುಭ ಯೋಗ ಸೃಷ್ಟಿಯಾಗಲಿದೆ. ಇಂದು ಶಿವರಾಜ ಮಹಾರಾಜ ಜಯಂತಿ ಕೂಡ ಇದೆ. ಇದು ಹನುಮಂತನಿಗೆ ಸಮರ್ಪಿತವಾದ ದಿನ. ಭಕ್ತಿಯಿಂದ ಈ ದಿನ ಹನುಮಂತನನ್ನು ಪೂಜಿಸಿದರೆ ಇಷ್ಟಾರ್ಥಗಳೆಲ್ಲವೂ ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಅಂದಹಾಗೆ ಈ ದಿನ ಕೆಲ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಹಾಗಾದರೆ ಈ ದಿನ 12 ರಾಶಿಗಳ ಭವಿಷ್ಯ ಹೇಗಿದೆ ಅದೃಷ್ಟದ ರಾಶಿಗಳು ಯಾವುವು ಎಂದು ಈಗ ತಿಳಿಯೋಣ.

ಮೇಷ ರಾಶಿ

ಮೃಷ ರಾಶಿಯವರಿಗೆ ಈ ದಿನ ಉತ್ತಮವಾಗಿಲ್ಲ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ. ಯಾವುದೇ ವ್ಯಕ್ತಿಯನ್ನು ನಂಬಿ ಹಣ ನೀಡುವ ಮುನ್ನ ನೂರು ಬಾರಿ ಯೋಚಿಸಿ. ಈ ದಿನ ಮಾಡಿದ ಕಾರ್ಯಗಳು ಕೈ ಹಿಡಿಯುವುದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿನ ಪ್ರಯತ್ನಗಳು ಫಲಪ್ರದವಾಗುತ್ತವೆ. ಈ ದಿನ ಹನುಮಂತನನ್ನು ಪೂಜಿಸಿ. ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ.

astrology dina bhavishya february 18 12 zodiac signs today prediction

ವೃಷಭ ರಾಶಿ

ಆರ್ಥಿಕ ಅಪಾಯಗಳನ್ನು ತೆಗೆದುಕೊಳ್ಳಬೇಡಿ. ನೀವು ಕೆಲವು ಕೌಟುಂಬಿಕ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಮಾತಿನಲ್ಲಿ ಮಾಧುರ್ಯ ಇರುತ್ತದೆ. ನಿಮ್ಮ ಮಕ್ಕಳ ಕಾರಣದಿಂದಾಗಿ ನೀವು ಚಿಂತಿತರಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಈ ದಿನ ಯಾವುದೇ ಹೊಸ ವಸ್ತುಗಳನ್ನು ಖರೀದಿ ಮಾಡಬೇಡಿ. ಅಗತ್ಯ ಇರುವವರಿಗೆ ದಾನ ಮಾಡಿ.

ಮಿಥುನ ರಾಶಿ

ಸಂಬಂಧಗಳಲ್ಲಿ ಆತ್ಮೀಯತೆ ಇರುತ್ತದೆ. ಆಹ್ಲಾದಕರ ಪ್ರಯಾಣದ ಸಾಧ್ಯತೆಗಳಿವೆ. ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಹಣಕಾಸಿನ ವಿಷಯಗಳಲ್ಲಿ ಸುಧಾರಣೆ ಕಂಡುಬರಲಿದೆ. ವ್ಯವಹಾರದಲ್ಲಿ ಕಡಿಮೆ ಲಾಭ ಇರಬಹುದು. ಸ್ನೇಹಿತರಿಂದ ಬೆಂಬಲದಿಂದ ಎಲ್ಲಾ ಆಸೆಗಳು ಈಡೇರುತ್ತವೆ. ಬೆಳಿಗ್ಗೆ ಶನಿ ಮಂತ್ರವನ್ನು ಪಠಿಸಿ, ಆಂಜನೇಯ ದೇವಸ್ಥಾನಕ್ಕೆ ಹೋಗಿ ತುಪ್ಪದ ದೂಪ ಹಚ್ಚಿ.

ಕರ್ಕಾಟಕ ರಾಶಿ

ಕರ್ಕಾಟಕ ರಾಶಿಯ ಜನರಿಗೆ ಈ ದಿನ ಅದ್ಭುತವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಈ ದಿನ ಅದ್ಭುತವಾಗಿದೆ. ಕುಟುಂಬದಲ್ಲಿ ವಾತಾವರಣ ಆಹ್ಲಾದಕರವಾಗಿರುತ್ತದೆ. ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಿ. ನಿಮ್ಮ ಮಾತನ್ನು ನಿಯಂತ್ರಿಸಿ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಇದಕ್ಕಾಗಿ ನೀವು ಸಾಕಷ್ಟು ಶ್ರಮ ಪಟಬೇಕಾಗುತ್ತದೆ. ಬೆಳಿಗ್ಗೆ ಶನಿ ಮಂತ್ರವನ್ನು ಪಠಿಸಿ, ಶಿವಲಿಂಗದ ಮೇಲೆ ಬಿಲ್ವಪತ್ರೆಯನ್ನು ಇಟ್ಟು ಪೂಜೆ ಮಾಡಿ.

ಸಿಂಹ ರಾಶಿ

ಫೆಬ್ರವರಿ 18 ಸಿಂಹ ರಾಶಿಯವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ವ್ಯವಹಾರ ಸಾಕಷ್ಟು ಬೆಳೆಯುತ್ತದೆ. ಸರ್ಕಾರದಿಂದ ಬೆಂಬಲ ಪಡೆಯುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ರಾಜಕೀಯ ಮಹತ್ವಾಕಾಂಕ್ಷೆಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ಬೆಳಿಗ್ಗೆ ಶನಿ ಮಂತ್ರವನ್ನು ಪಠಿಸಿ.

ಕನ್ಯಾ ರಾಶಿ

ಕನ್ಯಾ ರಾಶಿಯವರು ಮಾಡಿದ ಪ್ರಯತ್ನಗಳು ಫಲಪ್ರದವಾಗುತ್ತವೆ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಶೈಕ್ಷಣಿಕ ಸ್ಪರ್ಧೆಯ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳು ಫಲಪ್ರದವಾಗುತ್ತವೆ. ಬೆಳಿಗ್ಗೆ ಹಸುವಿಗೆ ಹಸಿರು ಮೇವು ನೀಡಿ. ಶನಿ ದೇವನಿಗೆ ತುಪ್ಪದಿಂದ ಮಾಡಿದ ಸಿಹಿಯನ್ನು ಅರ್ಪಿಸಿ.

ತುಲಾ ರಾಶಿ

ತುಲಾ ರಾಶಿಯವರಿಗೆ ಎಲ್ಲಾ ಕೆಟ್ಟ ಚಟಗಳಿಂದ ದೂರವಿರಲು ಸುದಿನ. ರಾಜಕೀಯದಲ್ಲಿ ಮಾಡಬೇಕಾದ ಸಾಧನೆಗೆ ಉತ್ತಮ ಅವಕಾಶಗಳು ಸಿಗಲಿವೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಈ ದಿನ ನಿಮ್ಮ ಮನಸ್ಸು ಚಂಚಲವಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಾಗುತ್ತದೆ. ದಾಂಪತ್ಯದಲ್ಲಿ ನೆಮ್ಮದಿಗಾಗಿ ಶನಿ ದೇವನನ್ನು ಪೂಜಿಸುವುದು ಉತ್ತಮ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಈ ದಿನ ಅದ್ಭುತವಾಗಿದೆ. ದಾಂಪತ್ಯ ಸುಖ ಹೆಚ್ಚಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಬೆಳಿಗ್ಗೆ ಹನುಮಾನ್ ಚಾಲೀಸಾ ಪಠಿಸಿ. ಕೋತಿಗೆ ಆಹಾರ ನೀಡಿ. ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ.

ಧನು ರಾಶಿ

ಈ ದಿನ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುವ ದಿನವಾಗಿದೆ. ಸಂಪತ್ತು ವೃದ್ಧಿಯಾಗಲಿದೆ. ಸಮಾಜದಲ್ಲಿ ಗೌರವ ಹೆಚ್ಚಳವಾಗುತ್ತದೆ. ಆತ್ಮಗೌರವ ಹೆಚ್ಚಾಗುತ್ತದೆ. ನಿಮ್ಮ ಪ್ರಯತ್ನಗಳು ಫಲಪ್ರದವಾಗುತ್ತವೆ. ನೀವು ಆರ್ಥಿಕ ಯಶಸ್ಸನ್ನು ಸಾಧಿಸುವಿರಿ. ವ್ಯಾಪಾರ ಪ್ರಯತ್ನಗಳು ಫಲಪ್ರದವಾಗುತ್ತವೆ. ಹೆತ್ತವರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಡಿ.

ಮಕರ ರಾಶಿ

ಈ ದಿನ ಬೇಡದ ಪ್ರಯಾಣ ಮಾಡಬೇಕಾಗಬಹುದು. ಕೆಲಸದಲ್ಲಿ ಮುಖ್ಯಸ್ಥರಿಂದ ಒತ್ತಡವನ್ನು ಎದುರಿಸಬಹುದು. ಮನಸ್ಸು ಇನ್ನೂ ತೊಂದರೆಗೊಳಗಾಗಬಹುದು. ಹೆಚ್ಚಿನ ಕೆಲಸದ ಹೊರೆ ಇರುತ್ತದೆ. ದೀರ್ಘ ಪ್ರಯಾಣದ ಸಾಧ್ಯತೆಗಳಿವೆ. ಬೆಳಿಗ್ಗೆ ಸೂರ್ಯನಿಗೆ ನೀರನ್ನು ಅರ್ಪಿಸಿ ಮತ್ತು ಶನಿಯ ಮಂತ್ರವನ್ನು ಪಠಿಸಿ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಹೆಚ್ಚಿನ ಹಣ ಖರ್ಚಾಗುವ ಸಾಧ್ಯತೆಗಳಿವೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ನೀವು ಚಿಂತಿತರಾಗಬೇಕಿಲ್ಲ. ನಿಮ್ಮ ಆರೋಗ್ಯವೂ ಸುಧಾರಿಸಲಿದೆ. ದೀರ್ಘ ಪ್ರಯಾಣದ ಸಾಧ್ಯತೆಗಳಿವೆ. ಬೆಳಿಗ್ಗೆ ನಿಮ್ಮ ತಂದೆಯಿಂದ ಆಶೀರ್ವಾದ ಪಡೆದು ಶನಿ ದೇವನಿಗೆ ಪೂಜೆ ಸಲ್ಲಿಸಿ.

ಮೀನ ರಾಶಿ

ಫೆಬ್ರವರಿ 18 ಮೀನ ರಾಶಿಯವರಿಗೆ ಉತ್ತಮವಾಗಿದೆ. ಆರ್ಥಿಕ ಸ್ಥತಿ ಬಲಗೊಳ್ಳುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಉದ್ಯೋಗ ಮತ್ತು ಕೆಲಸದ ಕ್ಷೇತ್ರದಲ್ಲಿ ಬದಲಾವಣೆ ಕಂಡುಬರಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗುವುದು. ಬೆಳಿಗ್ಗೆ ನಿಮ್ಮ ಎಲ್ಲಾ ಸಮಸ್ಯೆಗಳಿಂದ ಪಾರಾಗಲು ಅಗತ್ಯ ಇರುವವರಿಗೆ ಆಹಾರ ನೀಡಿ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ನಮ್ಮ ಏಕೈಕ ಉದ್ದೇಶ. ಯಾಔಉದೇ ಮಾಹಿತಿ ಅನುಷ್ಠಾನಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+