Horoscope Today: ದಿನ ಭವಿಷ್ಯ ಫೆಬ್ರವರಿ 3- ಈ ರಾಶಿಗೆ ರಾಜವೈಭೋಗ, ಐಷಾರಾಮಿ ಜೀವನ
ಫೆಬ್ರವರಿ 3 ಮಾಘ ಮಾಸದ ಸೋಮವಾರ. ವಸಂತ ಪಂಚಮಿ ಒಂದು ವಿಶೇಷ ದಿನವಾಗಿದ್ದು, ಈ ಸಂದರ್ಭದಲ್ಲಿ ಸರಸ್ವತಿ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನಾಂಕದಂದು ಉತ್ತರ ಭಾದ್ರಪದ ನಕ್ಷತ್ರ ಮತ್ತು ಸರ್ವಾರ್ಥ ಸಿದ್ಧಿ ಯೋಗ ರೂಪುಗೊಳ್ಳುತ್ತದೆ. ರಾಹುಕಾಲದ ಸಮಯ ಬೆಳಗ್ಗೆ 8:11 ರಿಂದ ಬೆಳಗ್ಗೆ 9:38 ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಹಾಗಾದರೆ ಫೆಬ್ರವರಿ 3ರಂದು 12 ರಾಶಿಗಳ ಜಾತಕ ಮತ್ತು ಪರಿಹಾರವನ್ನು ತಿಳಿಯೋಣ.
ಮೇಷ ರಾಶಿ
ಫೆಬ್ರವರಿ 3 ಮೇಷ ರಾಶಿಯವರ ಮನಸ್ಸು ಚಂಚಲವಾಗಿರುತ್ತದೆ. ಕುಟುಂಬದ ಪ್ರತಿಷ್ಠೆ ಹೆಚ್ಚಾಗುತ್ತದೆ. ಪ್ರಯಾಣ ಆಹ್ಲಾದಕರವಾಗಿರಬಹುದು. ಕೌಟುಂಬಿಕ ಸಂತೋಷ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಸುಧಾರಣೆಯ ಸಾಧ್ಯತೆಗಳಿವೆ. ಕುಟುಂಬದ ಎಲ್ಲ ಸದಸ್ಯರಿಗೂ ನೀವು ಏನಾದರೂ ಒಳ್ಳೆಯದನ್ನು ಮಾಡುವಿರಿ. ಬೆಳಿಗ್ಗೆ ಶಿವನಿಗೆ ನೀರನ್ನು ಅರ್ಪಿಸಿ, ಮಂತ್ರವನ್ನು ಪಠಿಸಿ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಕುಟುಂಬದಲ್ಲಿ ಒತ್ತಡ ಇರುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕ ನಷ್ಟವಾಗುವ ಸಾಧ್ಯತೆ ಇರುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಬಡವರಿಗೆ ಈ ದಿನ ಆಹಾರ ನೀಡಿ. ಉತ್ತಮ ಕಾರ್ಯಗಳು ನಿಮ್ಮ ಕೈ ಹಿಡಿಯುತ್ತವೆ.
ಮಿಥುನ ರಾಶಿ
ಈ ದಿನ ನೀವು ಕೆಲವು ಶುಭ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಕೆಲಸದಲ್ಲಿ ಗೌರವ ಹೆಚ್ಚಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕುಟುಂಬ ಜೀವನ ಸಂತೋಷದಿಂದ ಕೂಡಿರುತ್ತದೆ. ಆರ್ಥಿಕ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸೃಜನಶೀಲ ಪ್ರಯತ್ನಗಳು ಫಲಪ್ರದವಾಗುತ್ತವೆ. ಬೆಳಿಗ್ಗೆ, ಹಸುವಿಗೆ ಹಸಿರು ಮೇವು ತಿನ್ನಿಸಿ ಮತ್ತು ಶಿವ ಮಂತ್ರವನ್ನು ಪಠಿಸಿ.
ಕರ್ಕಾಟಕ ರಾಶಿ
ಮನಸ್ಸು ಚಂಚಲದಿಂದ ಕೂಡಿರುತ್ತದೆ. ನೀವು ಸ್ನೇಹಿತ ಅಥವಾ ಸಂಬಂಧಿಕರಿಂದ ದ್ರೋಹಕ್ಕೊಳಗಾಗಬಹುದು. ಕೌಟುಂಬಿಕ ಒತ್ತಡ ಉಂಟಾಗಬಹುದು. ಸಂಗಾತಿಯ ಬೆಂಬಲ ಪಡೆಯುವಲ್ಲಿ ನೀವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಬೆಳಿಗ್ಗೆ ದಾನ ಕಾರ್ಯಗಳನ್ನು ಮಾಡಿ. ಶಿವ ದೇವನಿಗೆ ಪೂಜೆ ಮಾಡಿ.
ಸಿಂಹ ರಾಶಿ
ಆರ್ಥಿಕ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮಗೆ ಕೆಲವು ಒಳ್ಳೆಯ ಸುದ್ದಿಗಳು ಬರಬಹುದು. ದೀರ್ಘ ಪ್ರಯಾಣದ ಸಾಧ್ಯತೆಗಳು ಕಂಡುಬರುತ್ತವೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮಗೆ ಸರ್ಕಾರದಿಂದ ಬೆಂಬಲ ಸಿಗುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆರ್ಥಿಕ ಪ್ರಯತ್ನಗಳು ಫಲ ನೀಡುತ್ತವೆ. ಇಂದು ಶಿವ ಮಂತ್ರವನ್ನು ಪಠಿಸಿ.
ಕನ್ಯಾ ರಾಶಿ
ಈ ದಿನ ಮಾಡಿದ ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಇರಲಿದೆ. ಕೆಲಸದಲ್ಲಿ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಈ ಸಮಯದಲ್ಲಿ ಮಾಡಿದ ಯಾವುದೇ ಕೆಲಸ ನಿಮ್ಮ ಕೈ ಹಿಡಿಯಲಿದೆ. ಹಸುವಿಗೆ ಮೇವನ್ನು ತಿನ್ನಿಸಿ ಮತ್ತು ಶಿವನಿಗೆ ಪೂಜೆ ಸಲ್ಲಿಸಿ ತುಪ್ಪದ ದೀಪ ಹಚ್ಚಿ.
ತುಲಾ ರಾಶಿ
ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ಸಹೋದರ ಸಹೋದರಿಯರಿಂದ ಇಂದು ನಿಮಗೆ ಬೆಂಬಲ ಸಿಗುತ್ತದೆ. ಆರ್ಥಿಕ ವಿಷಯಗಳು ಸುಧಾರಿಸುತ್ತವೆ. ಅನಗತ್ಯ ವಿಷಯಗಳಿಗಾಗಿ ಓಡಾಡಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಶಾಂತಿ ಇರಲಿದೆ. ಬೆಳಿಗ್ಗೆ ಅಗತ್ಯ ಇರುವವರಿಗೆ ಆಹಾರ ನೀಡಿ ಮತ್ತು ಶಿವ ಮಂತ್ರವನ್ನು ಪಠಿಸಿ.
ವೃಶ್ಚಿಕ ರಾಶಿ
ಈ ದಿನ ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಸಾಮಾಜಿಕ ಕಾರ್ಯಗಳಿಂದಾಗಿ ಖ್ಯಾತಿಯೂ ಹೆಚ್ಚಾಗುತ್ತದೆ. ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಇರುತ್ತದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಬೆಳಿಗ್ಗೆ ಶಿವ ಚಾಲೀಸಾ ಪಠಿಸಿ. ಆಧ್ಯಾತ್ಮಿಕ ವಿಷಯಗಳಲ್ಲಿ ನೀವು ಹೆಚ್ಚು ಆಸಕ್ತಿಯನ್ನು ಹೊಂದಿರುವಿರಿ.
ಧನು ರಾಶಿ
ಈ ದಿನ ಮಾಡಿದ ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಅಲ್ಲದೆ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳು ಸುಧಾರಿಸುತ್ತವೆ. ಸಂಬಂಧಗಳಲ್ಲಿ ಆತ್ಮೀಯತೆ ಇರುತ್ತದೆ. ಕುಟುಂಬದ ಜವಾಬ್ದಾರಿಗಳನ್ನು ಪೂರೈಸಲಾಗುವುದು. ಬೆಳಿಗ್ಗೆ ಶಿವ ಮಂತ್ರವನ್ನು ಪಠಿಸಿ. ಶನಿ ಮಂತ್ರವನ್ನು ಪಠಿಸಿ.
ಮಕರ ರಾಶಿ
ಈ ದಿನ ಮಕರ ರಾಶಿಯವರಿಗೆ ಸಹೋದರ ಸಹೋದರಿಯರಿಂದಾಗಿ ಒತ್ತಡ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಅಪಾಯಗಳನ್ನು ತೆಗೆದುಕೊಳ್ಳಬೇಡಿ. ಸೃಜನಶೀಲ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನೀವು ದೀರ್ಘ ಪ್ರಯಾಣಕ್ಕೆ ಹೋಗಬಹುದು. ಹಸಿದ ಪ್ರಾಣಿಗಳಿಗೆ ಆಹಾರ ನೀಡಿ ಮತ್ತು ಶನಿ ಮಂತ್ರವನ್ನು ಪಠಿಸಿ.
ಕುಂಭ ರಾಶಿ
ಕುಂಭ ರಾಶೀಯವರಿಗೆ ಫೆಬ್ರವರಿ 3 ಉತ್ತಮವಾಗಿರುವುದಿಲ್ಲ. ಕುಟುಂಬ ಸಂಬಂಧಗಳು ಹದಗೆಡಬಹುದು. ಸರ್ಕಾರದಿಂದ ಬೆಂಬಲ ಸಿಗುವುದಿಲ್ಲ. ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಬಯಸಿದ ಉದ್ಯೋಗ ಸಿಗುತ್ತದೆ. ಯಾವುದೇ ಪ್ರಯಾಣ ಮಾಡುವಾಗ ಜಾಗರೂಕರಾಗಿರಿ. ಶನಿ ಮಂತ್ರವನ್ನು ಪಠಿಸಿ.
ಮೀನ ರಾಶಿ
ಯಾವುದೇ ಕೆಲಸವನ್ನು ಪೂರ್ಣಗೊಳಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯಿಂದ ನಿಮಗೆ ಕೆಲಸದಲ್ಲಿ ಬೆಂಬಲ ಸಿಗುತ್ತದೆ. ಜೀವನೋಪಾಯದ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಇಂದು ಹಸುವಿಗೆ ಆಹಾರ ನೀಡಿ, ಪೂಜಿಸಿ. ಶಿವಲಿಂಗವನ್ನು ಪೂಜಿಸಿ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಕಾರ್ಯ ರೂಪಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)












Click it and Unblock the Notifications