Horoscope Today: ದಿನ ಭವಿಷ್ಯ ಮಾರ್ಚ್ 8- ಈ ರಾಶಿಗೆ ಹನುಮನ ಆಶೀರ್ವಾದದಿಂದ ವಿಘ್ನಗಳೆಲ್ಲವೂ ದೂರ

ಮಾರ್ಚ್ 8 ಕೆಲವು ರಾಶಿಗಳಿಗೆ ತುಂಬಾ ಶುಭವಾಗಿದೆ. ಈ ದಿನ ಅದೃಷ್ಟ ಸಂಪೂರ್ಣವಾಗಿ ನಿಮ್ಮ ಕಡೆ ಇರುತ್ತದೆ. ನಿಮ್ಮ ಅದೃಷ್ಟ ಹೊಳೆಯಲಿದೆ. ವೃತ್ತಿ, ವ್ಯವಹಾರ, ವೈಯಕ್ತಿಕ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ಬಯಸುವವರಿಗೆ ಈ ದಿನ ವಿಶೇಷವಾಗಿದೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹೊಸ ಅವಕಾಶಗಳು ಸಹ ಸಿಗಲಿವೆ. ಕುಟುಂಬದಲ್ಲಿ ಸಂತೋಷ ಮನಸ್ಸಿನಲ್ಲಿ ಉತ್ಸಾಹ ಹೆಚ್ಚಾಗುವುದು. ಹಾಗಾದರೆ ಶನಿವಾರ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಈಗ ತಿಳಿಯೋಣ.

ಮೇಷ ರಾಶಿ

ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿರುವುದಿಲ್ಲ. ಮನೆಯಲ್ಲಿ ಒತ್ತಡ ಹೆಚ್ಚಾಗಲಿದೆ. ಹಣಕಾಸಿನ ವಿಷಯಗಳಲ್ಲಿ ನಿಮಗೆ ಯಶಸ್ಸು ಸಿಗುತ್ತದೆ. ಹಣಕಾಶಿನ ಏರಿಳಿತಗಳು ಇದ್ದೇ ಇರುತ್ತವೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ.

astrology dina bhavishya march 8 12 zodiac signs today prediction

ವೃಷಭ ರಾಶಿ

ಆರ್ಥಿಕ ವಿಷಯಗಳು ಸುಧಾರಿಸುತ್ತವೆ. ಮಾತಿನಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಸೃಜನಶೀಲ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಕುಟುಂಬದ ಪ್ರತಿಷ್ಠೆ ಹೆಚ್ಚಾಗುತ್ತದೆ. ಇಂದು ವ್ಯವಹಾರ ಮತ್ತು ವೈಯಕ್ತಿಕ ಕೆಲಸಕ್ಕೆ ಉತ್ತಮ ದಿನವಾಗಿದೆ. ಈ ದಿನ ಅನಾಥರಿಗೆ ಬಟ್ಟೆಗಳನ್ನು ದಾನ ಮಾಡಿ.

ಮಿಥುನ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡು ಬರಲಿದೆ. ತಾಳ್ಮೆ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ಆತ್ಮೀಯತೆ ಇರುವುದು. ಬಹುನಿರೀಕ್ಷಿತ ಕೆಲಸವನ್ನು ಪೂರ್ಣಗೊಳಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕುಟುಂಬದ ಜವಾಬ್ದಾರಿಗಳು ಪೂರ್ಣಗೊಳ್ಳುತ್ತವೆ. ಯಾವುದೇ ವ್ಯಕ್ತಿಗೆ ಸಹಾಯ ಮಾಡಲು ಹಿಂಜರಿಯಬೇಡಿ. ಈ ದಿನ ಒಳ್ಳೆಯದಾಗಿರುತ್ತದೆ.

ಕರ್ಕಾಟಕ ರಾಶಿ

ಈ ದಿನ ಅನಗತ್ಯ ಕೋಪವನ್ನು ತಪ್ಪಿಸಿ. ಬುದ್ಧಿವಂತಿಕೆ ಮತ್ತು ಕೌಶಲ್ಯದಿಂದ ಮಾಡಿದ ಕೆಲಸ ಯಶಸ್ವಿಯಾಗುತ್ತದೆ. ಕೆಲಸದ ಸ್ಥಳದಲ್ಲಿ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ಆರೋಗ್ಯದ ಬಗ್ಗೆ ನೀವು ಜಾಗೃತರಾಗಿರಬೇಕು. ಪ್ರಯಾಣ ಮತ್ತು ಪ್ರವಾಸೋದ್ಯಮದ ಪರಿಸ್ಥಿತಿ ಆಹ್ಲಾದಕರ ಮತ್ತು ಪ್ರೋತ್ಸಾಹದಾಯಕವಾಗಿರುತ್ತದೆ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಈ ದಿನ ಮಂಗಳಕರವಾಗಿದೆ. ಈ ದಿನ ನೀವು ಆರ್ಥಿಕ ಲಾಭವನ್ನು ಪಡೆಯುವಿರಿ. ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಯಶಸ್ಸು ಸಿಗಬಹುದು. ಕುಟುಂಬ ಜೀವನವೂ ಸಂತೋಷದಿಂದ ಕೂಡಿರುತ್ತದೆ. ಇದು ಮನಸ್ಸನ್ನು ಸಂತೋಷವಾಗಿರಿಸುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಕನ್ಯಾ ರಾಶಿ

ಸೃಜನಶೀಲ ಕಾರ್ಯಗಳಲ್ಲಿ ಮಾಡಿದ ಪ್ರಯತ್ನಗಳು ಉತ್ತಮ ಫಲ ನೀಡುತ್ತವೆ. ಕೌಟುಂಬಿಕ ವಿಷಯಗಳಲ್ಲಿ ಸಂಯಮ ಕಾಯ್ದುಕೊಳ್ಳಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ಆರ್ಥಿಕ ವಿಷಯಗಳಲ್ಲಿ ಬೆಳವಣಿಗೆ ಕಂಡು ಬರಲಿದೆ. ಅಂದುಕೊಂಡ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿವೆ.

ತುಲಾ ರಾಶಿ

ಈ ಸಮಯದಲ್ಲಿ ಬಹಳಷ್ಟು ಓಡಾಟ ಇರುತ್ತದೆ. ಆದರೆ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗುತ್ತದೆ. ಕುಟುಂಬದ ಜವಾಬ್ದಾರಿಗಳನ್ನು ಪೂರೈಸಲು ಹಿಂದೆ ಉಳಿಯುವಿದಿಲ್ಲ. ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಬಂಧಗಳಲ್ಲಿ ಆತ್ಮೀಯತೆ ಇರುತ್ತದೆ. ನೀವು ಬಡವರಿಗೆ ಅಕ್ಕಿಯನ್ನು ದಾನ ಮಾಡಿ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಈ ದಿನ ತುಂಬಾ ವಿಶೇಷವಾಗಿರುತ್ತದೆ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ನೀವಂದುಕೊಂಡಂತೆ ಪೂರ್ಣಗೊಳ್ಳಲಿವೆ. ಹೊಸ ಅವಕಾಶ ನಿಮ್ಮ ಜೀವನದಲ್ಲಿ ಸಂತೋಷವನ್ನು ತರುತ್ತದೆ. ಅದೃಷ್ಟ ಸಂಪೂರ್ಣವಾಗಿ ನಿಮ್ಮ ಕಡೆ ಇರುತ್ತದೆ ಮತ್ತು ನಿಮ್ಮ ಪ್ರಯತ್ನಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಸಹ ಪಡೆಯಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗಲಿದೆ.

ಧನು ರಾಶಿ

ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಾಕೆಮದರೆ ಈ ದಿನ ನಿಮ್ಮ ಆರೋಗ್ಯದಲ್ಲಿ ಏರುಪೇರಾಗಬಹುದು. ಕೆಲಸದಲ್ಲಿ ಆತ್ಮವಿಶ್ವಾಸದ ಕೊರತೆ ಇರಬಹುದು. ಬೆಳಿಗ್ಗೆ ನಿಮ್ಮ ಹೆತ್ತವರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಗೆ ಹೋಗಿ. ಇಂದು ನೀವು ಮಾಡಿದ ಪುಣ್ಯದ ಕಾರ್ಯಗಳು ನಿಮ್ಮ ಕೈ ಹಿಡಿಯುತ್ತವೆ.

ಮಕರ ರಾಶಿ

ಮಕರ ರಾಶಿಯಲ್ಲಿ ಜನಿಸಿದ ಜನರು ಈ ದಿನ ತಮ್ಮ ವ್ಯವಹಾರದಲ್ಲಿ ಭಾರಿ ಲಾಭ ಗಳಿಸುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ಸಂಬಳ ಹೆಚ್ಚಳವಾಗಬಹುದು. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಅದು ಮನಸ್ಸಿನಲ್ಲಿ ಶಾಂತಿ ಮತ್ತು ತೃಪ್ತಿಯನ್ನು ತರುತ್ತದೆ. ನೀವು ಕುಟುಂಬ ಮತ್ತು ಸ್ನೇಹಿತರಿಂದ ಸಂಪೂರ್ಣ ಹಣಕಾಸಿನ ಬೆಂಬಲವನ್ನು ಪಡೆಯುತ್ತೀರಿ. ಅದು ಈ ದಿನವನ್ನು ಇನ್ನಷ್ಟು ಆಹ್ಲಾದಕರವಾಗಿಸುತ್ತದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಮಾರ್ಚ್ 8 ಹೊಸ ಆರಂಭವನ್ನು ಸೂಚಿಸುತ್ತದೆ. ಪ್ರೀತಿಯಲ್ಲಿ ಯಶಸ್ವಿಯಾಗಲು ಬಯಸುವವರಿಗೆ ಈ ದಿನ ವಿಶೇಷವಾಗಬಹುದು. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ನಿಮ್ಮ ಗುರಿಗಳನ್ನು ಸುಲಭವಾಗಿ ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸುವವರಿಗೆ ಸಮಯ ಅನುಕೂಲಕರವಾಗಿರುತ್ತದೆ.

ಮೀನ ರಾಶಿ

ಮೀನ ರಾಶಿಯಲ್ಲಿ ಜನಿಸಿದವರಿಗೆ ಈ ದಿನ ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. ನಿಮ್ಮ ಆರೋಗ್ಯ ಸುಧಾರಿಸುತ್ತದೆ ಮತ್ತು ಮಾನಸಿಕ ಶಾಂತಿ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ ಮತ್ತು ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಪರವಾಗಿ ಬರಬಹುದು. ಈ ದಿನ ನಿಮಗೆ ಯಶಸ್ಸು ಮತ್ತು ಪ್ರಗತಿಯ ಹೊಸ ಬಾಗಿಲುಗಳನ್ನು ತೆರೆಯಲಿದೆ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶ. ಯಾವುದೇ ಮಾಹಿತಿ ಅನುಷ್ಠಾನಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+