Daily Horoscope July 20: ಈ ರಾಶಿಯವರ ಸಮಸ್ಯೆ ದೂರವಾಗಲಿದೆ, ನಿರೀಕ್ಷೆಯ ಉದ್ಯೋಗ ಸಿಗಲಿದೆ, ವ್ಯಾಪಾರದಲ್ಲಿ ಭಾರೀ ಲಾಭ!
Daily Horoscope July 20: ಇಂದಿನ ರಾಶಿ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದೆ. ಜುಲೈ 20ರಂದು ಹಲವರಿಗೆ ಅದೃಷ್ಟ ಒಲಿದು ಬರುವ ಸಾಧ್ಯತೆ ಇದೆ. ಯಾವ ರಾಶಿಯ ವರಿಗೆ ಈ ದಿನ ಹೇಗೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ (Aries)
ಇಂದು ಸಕಾರಾತ್ಮಕ ಬದಲಾವಣೆಯ ದಿನವಾಗಿರುತ್ತದೆ. ಇಂದು ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು. ಸರ್ಕಾರಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ. ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಗುವುದು. ಉತ್ತಮ ಕಂಪನಿಯಿಂದ ಉದ್ಯೋಗದ ಆಫರ್ ಸಿಗಬಹುದು.
ವೃಷಭ ರಾಶಿ (Taurus)
ಇಂದು ದಿನ ಉತ್ತಮವಾಗಿರುತ್ತದೆ. ವ್ಯಾಪಾರ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಬೆಳೆಸುವ ಅವಕಾಶವಿದೆ. ಬಹುರಾಷ್ಟ್ರೀಯ ಕಂಪನಿಗಳಿಂದ ಉದ್ಯೋಗಾವಕಾಶಗಳು ಸಿಗಬಹುದು. ಸ್ನೇಹಿತರನ್ನು ಭೇಟಿಯಾಗುವ ಅವಕಾಶ ಸಿಗುವುದು. ಉದ್ಯಮಿಗಳಿಗೆ ತಮ್ಮ ಕೆಲಸದಲ್ಲಿ ಲಾಭವಾಗುವುದು. ವೈವಾಹಿಕ ಜೀವನವು ಸಂತೋಷ ಮತ್ತು ಸಮೃದ್ದಿಯಿಂದ ಕೂಡಿರುವುದು.

ಮಿಥುನ ರಾಶಿ (Gemini)
ಇಂದು ಅದೃಷ್ಟ ನಿಮ್ಮ ಕಡೆಗಿರುವುದು. ವ್ಯಾಪಾರ ವ್ಯವಹಾರಗಳು ಸರಾಗವಾಗಿ ಮುಂದುವರಿಯುತ್ತವೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಮನೆಯಲ್ಲಿ ಸಂತೋಷಕರ ವಾತಾವರಣವಿರುವುದು. ವೈವಾಹಿಕ ಜೀವನ ಸಂತೋಷದಿಂದ ಕೂಡಿರುವುದು. ಆರೋಗ್ಯ ಸಮಸ್ಯೆಯಿಂದ ಮುಕ್ತಿ ಸಿಗುವುದು.
ಕರ್ಕಾಟಕ ರಾಶಿ (Cancer)
ವಿಶೇಷ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶ ಸಿಗುವುದು. ಇಂದು ವ್ಯಾಪಾರ ವ್ಯವಹಾರ ನಿಧಾನವಾಗಿರುತ್ತದೆ. ಮಕ್ಕಳು ಇಂದು ನಿಮ್ಮ ವ್ಯವಹಾರದಲ್ಲಿ ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ತಾಳ್ಮೆಯಿಂದ ಕೆಲಸ ಮಾಡಿ. ಪ್ರತಿ ಕೆಲಸದಲ್ಲಿಯೂ ಯಶಸ್ಸು ಸಿಗುವುದು. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ವಹಿಸಿ.
ಸಿಂಹ ರಾಶಿ (Leo)
ಇಂದು ನಿಮಗೆ ಸಂತೋಷದ ದಿನವಾಗಿರುತ್ತದೆ. ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗುವುದು. ಇಂದು ನಿಮಗೆ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಗುವ ಸಾಧ್ಯತೆಯಿದೆ. ಮಕ್ಕಳೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ಆರೋಗ್ಯ ಸ್ಥಿತಿ ಉತ್ತಮವಾಗಿರುವುದು.
ಕನ್ಯಾ ರಾಶಿ (Virgo)
ಇಂದು ದಿನ ಉತ್ತಮವಾಗಿರಲಿದೆ. ಆತ್ಮವಿಶ್ವಾಸ ಹೆಚ್ಚಾಗುವುದು. ಸಾಲ ನೀಡಿದ ಹಣವನ್ನು ಮರಳಿ ಪಡೆಯಲು ಇದು ಅನುಕೂಲಕರ ಸಮಯ. ಸಂಗೀತ ಮತ್ತು ಕಲೆಗಳಲ್ಲಿ ತೊಡಗಿರುವವರಿಗೆ ಒಳ್ಳೆಯ ದಿನವಾಗಿರುತ್ತದೆ. ಇಂದು ನಿಮ್ಮ ವ್ಯವಹಾರ ದ್ವಿಗುಣಗೊಳ್ಳುವ ಸಾಧ್ಯತೆ ಇದೆ.
ತುಲಾ ರಾಶಿ (Libra)
ಇಂದು ಬಿಡುವಿಲ್ಲದ ದಿನವಾಗಿರುತ್ತದೆ. ಮಕ್ಕಳ ಸಮಸ್ಯೆಯನ್ನು ಪರಿಹರಿಸುವಿರಿ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ರಾಜಕೀಯದಲ್ಲಿ ತೊಡಗಿರುವವರಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ಹಳೆಯ ಸ್ನೇಹಿತ ಅಥವಾ ಸ್ನೇಹಿತೆಯನ್ನು ಭೇಟಿಯಾಗಬಹುದು. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುವುದು.
ವೃಶ್ಚಿಕ ರಾಶಿ (Scorpio)
ಇಂದು ಅನುಕೂಲಕರ ದಿನವಾಗಲಿದೆ. ಹೊಸ ಕೆಲಸಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುವುದು. ಕಚೇರಿಯಲ್ಲಿ ಹೆಚ್ಚುವರಿ ಕೆಲಸ ಮಾಡುವುದರಿಂದ, ಬಾಕಿ ಇರುವ ಕೆಲಸಗಳು ಬೇಗನೆ ಪೂರ್ಣಗೊಳ್ಳುತ್ತವೆ.
ಧನು ರಾಶಿ (Sagitarius)
ಇಂದು ಸಾಮಾನ್ಯ ದಿನವಾಗಿರುತ್ತದೆ. ಮಾಡಿ ಮುಗಿಸಬೇಕೆಂದಿರುವ ಕೆಲಸವನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಪೂರ್ಣಗೊಳಿಸುವಿರಿ. ಅಪರಿಚಿತರೊಂದಿಗೆ ಮಾತನಾಡುವಾಗ ಸೂಕ್ತವಾದ ಭಾಷೆಯನ್ನು ಬಳಸಿ. ವಿವಾಹಿತರಿಗೆ ಈ ದಿನ ಅತ್ಯಂತ ಶುಭವಾಗಿರುವುದು. ಸಂಗಾತಿ ಮತ್ತು ಕುಟುಂಬದೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ಮಕರ ರಾಶಿ (Capricorn)
ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡುವುದರಿಂದ ಲಾಭ ದ್ವಿಗುಣಗೊಳ್ಳುವ ಸಾಧ್ಯತೆಯಿದೆ. ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳಿಂದ ಲಾಭವಾಗುವುದು. ಉದ್ಯೋಗದಲ್ಲಿರುವವರಿಗೆ ಬಡ್ತಿಯ ಸಾಧ್ಯತೆಗಳಿವೆ. ಪ್ರತಿಕೂಲ ಸಂದರ್ಭಗಳಲ್ಲಿ ಸಂಗಾತಿಯಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಋತುಮಾನದ ಬದಲಾವಣೆಗಳು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಕುಂಭ ರಾಶಿ (Aquarius)
ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಎಲ್ಲಾ ಕೆಲಸಗಳು ನಿಮ್ಮ ಇಚ್ಛೆಯಂತೆ ಪೂರ್ಣಗೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ಕುಟುಂಬ ಸಂಬಂಧಗಳು ಹದಗೆಡುವ ಸಾಧ್ಯತೆ ಇದೆ. ತಾಳ್ಮೆಯಿಂದ ಇರಿ.
ಮೀನ ರಾಶಿ (Pisces)
ಇಂದು ನಿಮಗೆ ಸ್ಮರಣೀಯ ದಿನವಾಗಿರಲಿದೆ. ಉದ್ಯೋಗದಲ್ಲಿದ್ದರೆ, ಉತ್ತಮ ಸ್ಥಳಕ್ಕೆ ವರ್ಗಾವಣೆಯಾಗಬಹುದು. ಮನೆಯ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಕುಟುಂಬದ ಎಲ್ಲಾ ಸದಸ್ಯರಿಂದ ಬೆಂಬಲ ಸಿಗುತ್ತದೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗುತ್ತದೆ.
(ಬರಹ: ರಂಜಿತಾ ಆರ್.ಕೆ)












Click it and Unblock the Notifications