Daily Horoscope June 29: ಕೆಲಸದಲ್ಲಿ ಹೊಸ ಜವಾಬ್ದಾರಿ- ಬಡ್ತಿ, ವೃತ್ತಿ ವ್ಯವಹಾರದಲ್ಲಿ ಪ್ರಗತಿ: 12 ರಾಶಿಗಳ ದಿನ ಭವಿಷ್ಯ

Daily Horoscope June 29: ಜೂನ್ 29ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ಈ ಲೇಖನದಲ್ಲಿದೆ.

ಮೇಷ ರಾಶಿ (Aries)

ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ಯಾವುದೇ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಲ್ಲಿ ನಿಮ್ಮ ಪ್ರತಿಭೆಯನ್ನು ಪ್ರಶಂಸಿಸಲಾಗುತ್ತದೆ. ಕುಟುಂಬ ಸದಸ್ಯರ ಬೆಂಬಲ ನಿಮಗಿರುತ್ತದೆ. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತಾಳ್ಮೆಯಿಂದಿರಿ.

ವೃಷಭ ರಾಶಿ (Taurus)

ಕಠಿಣ ಪರಿಶ್ರಮ ಇಂದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಮೇಲಾಧಿಕಾರಿಗಳಿಂದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗುವುದು. ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ಅಥವಾ ಹೊಸ ಯೋಜನೆಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಗುರಿಗಳತ್ತ ಗಮನಹರಿಸಿ ಮತ್ತು ಮುಂದುವರಿಯಿರಿ.

Daily Horoscope June 29

ಮಿಥುನ ರಾಶಿ (Gemini)

ಇಂದು ನಿಮ್ಮ ಆಲೋಚನೆಗಳು ಸ್ಪಷ್ಟವಾಗಿರುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿಯಾಗುವುದು. ಹೂಡಿಕೆ ಮಾಡುವ ಮೊದಲು ಎಲ್ಲಾ ವಿಷಯಗಳನ್ನು ಎಚ್ಚರಿಕೆಯಿಂದ ಪರಿಗಣಿಸಿ. ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು.

ಕಟಕ ರಾಶಿ (Cancer)

ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ. ಸ್ನೇಹಿತರೊಂದಿಗೆ ಸಮಯ ಕಳೆಯುವುದರಿಂದ ಸಂತೋಷ ಹೆಚ್ಚಾಗುವುದು. ಹೊಸ ಸೃಜನಶೀಲ ಕೆಲಸವನ್ನು ಪ್ರಾರಂಭಿಸಲು ಇದು ಒಳ್ಳೆಯ ಸಮಯ. ನಿಮ್ಮ ಪ್ರತಿಭೆಯನ್ನು ತೋರಿಸಲು ನಿಮಗೆ ಅವಕಾಶ ಸಿಗುತ್ತದೆ.

ಸಿಂಹ ರಾಶಿ (Leo)

ಕುಟುಂಬ ಸದಸ್ಯರೊಂದಿಗಿನ ನಿಮ್ಮ ಬಾಂಧವ್ಯ ಬಲಗೊಳ್ಳುತ್ತದೆ. ಖರ್ಚುಗಳ ಬಗ್ಗೆ ಜಾಗರೂಕರಾಗಿರಿ. ಆರೋಗ್ಯಕರ ಆಹಾರ ಮತ್ತು ವ್ಯಾಯಾಮವು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.

ಕನ್ಯಾರಾಶಿ (Virgo)

ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಸಿಗುತ್ತವೆ. ಕಠಿಣ ಪರಿಶ್ರಮವನ್ನು ಗುರುತಿಸಲಾಗುತ್ತದೆ. ಹೊಸ ಹೂಡಿಕೆಗಳನ್ನು ಮಾಡುವುದಕ್ಕೆ ಸರಿಯಾದ ಸಮಯವಲ್ಲ. ಹಣಕಾಸಿನ ವಹಿವಾಟಿನ ಬಗ್ಗೆ ಎಚ್ಚರ ಇರಲಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ತಾಳ್ಮೆ ನಿಮಗೆ ಯಶಸ್ಸನ್ನು ತರುತ್ತದೆ.

ತುಲಾ ರಾಶಿ (Libra)

ಹೊಸ ಆಲೋಚನೆಗಳು ಹುಟ್ಟಿಕೊಳ್ಳುತ್ತವೆ. ಹೊಸ ಜನರನ್ನು ಭೇಟಿಯಾಗುವಿರಿ. ಭವಿಷ್ಯದಲ್ಲಿ ಉಪಯುಕ್ತವಾಗುವ ಅವಕಾಶಗಳನ್ನು ಪಡೆಯುವಿರಿ. ಹಣಕಾಸಿನ ಯೋಜನೆಗಳು ಚೆನ್ನಾಗಿ ನಡೆಯುತ್ತವೆ. ಹೂಡಿಕೆ ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಸಕಾರಾತ್ಮಕ ಮನೋಭಾವದಿಂದ ಮುನ್ನಡೆದರೆ, ಯಶಸ್ಸನ್ನು ಸಾಧಿಸುವಿರಿ.

ವೃಶ್ಚಿಕ ರಾಶಿ (Scorpio)

ಜೀವನದಲ್ಲಿ ಉತ್ತಮ ಬದಲಾವಣೆಗಳ ಆರಂಭವನ್ನು ಸೂಚಿಸುತ್ತದೆ. ಮನಸ್ಸಿನ ಮಾತನ್ನು ಆಲಿಸಿ. ಕುಟುಂಬ ಸದಸ್ಯರೊಂದಿಗಿನ ಮನಸ್ತಾಪಗಳು ಕೊನೆಯಾಗುವುದು. ಯಾವುದೇ ಸಮಸ್ಯೆಯನ್ನು ಧೈರ್ಯದಿಂದ ಎದುರಿಸಿದರೆ, ಯಶಸ್ಸು ನಿಮ್ಮದಾಗುತ್ತದೆ.

ಧನು ರಾಶಿ (Sagitarius)

ಹೊಸ ಉತ್ಸಾಹದಿಂದ ಕೆಲಸವನ್ನು ಪ್ರಾರಂಭಿಸುತ್ತೀರಿ. ಕೆಲಸದಲ್ಲಿ ಬಡ್ತಿ ಅಥವಾ ಉತ್ತಮ ಅವಕಾಶಗಳು ಸಿಗುವ ಸೂಚನೆಗಳಿವೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಅನುಕೂಲಕರ ದಿನ. ಯೋಗ ಮತ್ತು ಧ್ಯಾನ ಮಾಡುವುದರಿಂದ ಮಾನಸಿಕ ಶಾಂತಿ ದೊರೆಯುತ್ತದೆ.

ಮಕರ ರಾಶಿ (Capricorn)

ಕಠಿಣ ಪರಿಶ್ರಮಕ್ಕೆ ಉತ್ತಮ ಮನ್ನಣೆ ದೊರೆಯುತ್ತದೆ. ಸಹೋದ್ಯೋಗಿಗಳ ಸಹಾಯದಿಂದ ಪ್ರಮುಖ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಭವಿಷ್ಯದ ಗುರಿಗಳಿಗಾಗಿ ಉತ್ತಮ ಯೋಜನೆಗಳನ್ನು ರೂಪಿಸುವಿರಿ.

ಕುಂಭ ರಾಶಿ (Aquarius)

ಹೊಸ ಅವಕಾಶಗಳು ಎದುರಾಗುವುದು. ನಿಮ್ಮ ಆಲೋಚನೆಗಳನ್ನು ಧೈರ್ಯದಿಂದ ವ್ಯಕ್ತಪಡಿಸಿ. ಸಣ್ಣ ಸವಾಲುಗಳು ಎದುರಾದರೂ ತಾಳ್ಮೆಯಿಂದ ನಿಭಾಯಿಸಿದರೆ ಅವುಗಳನ್ನು ಸುಲಭವಾಗಿ ಜಯಿಸುವಿರಿ. ಹೊಸ ಜನರ ಪರಿಚಯವಾಗುವುದು, ಈ ಪರಿಚಯದಿಂದ ಲಾಭವಾಗುವುದು.

ಮೀನ ರಾಶಿ (Pisces)

ಇಂದು ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆಯಿಂದ ಇರಿ. ಖರ್ಚುಗಳನ್ನು ನಿಯಂತ್ರಿಸಿ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಬಾಂಧವ್ಯ ಬಲಗೊಳ್ಳುತ್ತದೆ. ತಾಳ್ಮೆ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆದರೆ, ಯಶಸ್ಸು ನಿಮ್ಮದಾಗುತ್ತದೆ.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+