Daily Horoscope May 6: ಈ ರಾಶಿಯವರಿಗೆ ಹಣಕಾಸು ವಿಷಯದಲ್ಲಿ ಲಾಭ, ವಾಹನ ಖರೀದಿ ಯೋಗ: 12 ರಾಶಿಗಳ ದಿನ ಭವಿಷ್ಯ

Daily Horoscope May 6: ಮೇ 6ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮೇ 6ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ

ಹೂಡಿಕೆ ಮಾಡಲು ಅನುಕೂಲಕರ ದಿನವಲ್ಲ. ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ವೃತ್ತಿಜೀವನದಲ್ಲಿಯೂ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ತಾಳ್ಮೆ ಬಹಳ ಮುಖ್ಯವಾಗುತ್ತದೆ.

Daily Horoscope May 6

ವೃಷಭ ರಾಶಿ

ಉದ್ಯಮಿಗಳು ವ್ಯಾಪಾರದಲ್ಲಿ ಪ್ರಗತಿ ಸಾಧಿಸುವರು. ಉಳಿತಾಯವನ್ನು ಹೆಚ್ಚಿಸಲು ಇದು ಅತ್ಯುತ್ತಮ ಸಮಯ. ಆರೋಗ್ಯವು ಸಾಮಾನ್ಯವಾಗಿರುತ್ತದೆ.

ಮಿಥುನ ರಾಶಿ

ಆರೋಗ್ಯವು ಉತ್ತಮವಾಗಿರುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಬಹುದು. ಇದಕ್ಕಾಗಿ ಪ್ರಯಾಣ ಬೆಳೆಸಬೇಕಾಗಬಹುದು. ಕ್ರೀಡಾಪಟುಗಳಿಗೂ ತಮ್ಮ ಕ್ಷೇತ್ರದಲ್ಲಿ ಗೌರವ ಸಿಗುವುದು.

ಕಟಕ ರಾಶಿ

ಶೈಕ್ಷಣಿಕ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಇಂದು ಅತ್ಯುತ್ತಮ ದಿನ. ಆರೋಗ್ಯ ಉತ್ತಮವಾಗಿರುತ್ತದೆ. ಉದ್ಯಮಿಗಳ ಕಠಿಣ ಶ್ರಮಕ್ಕೆ ಪ್ರತಿಫಲ ಸಿಗುವುದು. ಹಣಕಾಸಿನ ವಿಷಯದಲ್ಲಿ ಲಾಭವಾಗುವುದು.

ಸಿಂಹ ರಾಶಿ

ಒತ್ತಡ ಮತ್ತು ಸಮಸ್ಯೆಗಳಿಂದ ಪರಿಹಾರ ಸಿಗುವುದು. ಹೊಸ ವಾಹನವನ್ನು ಖರೀದಿಸುವ ಯೋಗವಿದೆ. ನೀವು ಮಾಡುವ ಕೆಲಸಕ್ಕೆ ಪೋಷಕರಿಂದ ಆರ್ಥಿಕ ಬೆಂಬಲ ಸಿಗುವುದು. ಆರ್ಥಿಕ ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತದೆ.

ಕನ್ಯಾರಾಶಿ

ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುವುದು. ಕಠಿಣ ಪರಿಶ್ರಮದಿಂದ ಆರ್ಥಿಕ ಲಾಭ ಸಾಧ್ಯವಾಗುವುದು. ಮಕ್ಕಳಿಂದ ಒಳ್ಳೆಯ ಸುದ್ದಿ ಸಿಗಬಹುದು. ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸುವಲ್ಲಿ ಯಶಸ್ವಿಯಾಗುವರು.

ತುಲಾ ರಾಶಿ

ಹೊಸ ಕೆಲಸಕ್ಕೆ ಕೈ ಹಾಕುವಿರಿ. ಆ ಕೆಲಸದಲ್ಲಿ ಯಶಸ್ಸು ಕೂಡಾ ಸಾಧಿಸುವಿರಿ. ಆರ್ಥಿಕ ಪರಿಸ್ಥಿತಿಗಳು ಸಾಮಾನ್ಯವಾಗಿಯೇ ಇರುತ್ತವೆ. ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ವೃಶ್ಚಿಕ ರಾಶಿ

ಸಮಾಜದಲ್ಲಿ ನಿಮಗೆ ಗೌರವ ಸಿಗುತ್ತದೆ. ಉದ್ಯಮಿಗಳಿಗೆ ಲಾಭಕ್ಕಾಗಿ ಉತ್ತಮ ಅವಕಾಶಗಳು ದೊರೆಯುತ್ತವೆ. ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ.

ಧನು ರಾಶಿ

ಖರ್ಚುಗಳಲ್ಲಿ ಹೆಚ್ಚಳವಾಗುವುದು. ಖರ್ಚುಗಳು ನಿಮ್ಮ ಆದಾಯವನ್ನು ಮೀರಬಹುದು. ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಒಳ್ಳೆಯದು. ಹಣಕಾಸಿನ ಒತ್ತಡ ಹೆಚ್ಚಾಗಬಹುದು. ಹೂಡಿಕೆ ಮಾಡಲು ದಿನ ಸಮಂಜಸವಲ್ಲ.

ಮಕರ ರಾಶಿ

ಆದಾಯಕ್ಕೆ ಹೊಸ ಮಾರ್ಗಗಳು ಹುಟ್ಟಿಕೊಳ್ಳುವುದು. ಲಾಭಕ್ಕೆ ಅವಕಾಶಗಳು ಸಿಗುವುದು. ವೃತ್ತಿಜೀವನ ಮತ್ತು ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವುದು. ಆಸ್ತಿಗೆ ಸಂಬಂಧಿಸಿದಂತೆ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.

ಕುಂಭ ರಾಶಿ

ಮಾನಸಿಕ ಚಿಂತೆಗಳಿಂದ ಮುಕ್ತಿ ಸಿಗುವುದು. ಪ್ರಭಾವಿ ಜನರಿಂದ ಬೆಂಬಲ ಸಿಗುವುದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಸೌಹಾರ್ದಯುತವಾಗಿರುತ್ತದೆ.

ಮೀನ ರಾಶಿ

ಈ ದಿನ ನಿಮಗೆ ಶುಭಕರವಾಗಿರುತ್ತದೆ. ನಿರೀಕ್ಷೆಗಿಂತ ಹೆಚ್ಚಿನ ಹಣ ಸಿಗುವುದು. ಸಂಗಾತಿಯೊಂದಿಗಿನ ಸಂಬಂಧ ಸುಧಾರಿಸುವುದು. ಹಣಕಾಸಿನ ಸ್ಥಿತಿ ಸಾಮಾನ್ಯವಾಗಿರುತ್ತದೆ.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+