ಈ ರಾಶಿಯವರು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ದಿನ: ವೃತ್ತಿ ಜೀವನದಲ್ಲಿ ಸಿಗುವುದು ಯಶಸ್ಸು
Horoscope April 23: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲವು ಸಾಮಾನ್ಯವಾಗಿ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಏಪ್ರಿಲ್ 23 ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ:
ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಬಹುದು. ಹಣಕಾಸಿನ ವಿಷಯಗಳು ಸಾಮಾನ್ಯವಾಗಿಯೇ ಇರುತ್ತವೆ. ಆದರೆ ಹೂಡಿಕೆಗೆ ಮಾಡಲು ಈ ದಿನ ಯೋಗ್ಯವಲ್ಲ.

ವೃಷಭ ರಾಶಿ:
ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಇಂದು ತೆಗೆದುಕೊಳ್ಳುವ ನಿರ್ಧಾರ ಭವಿಷ್ಯದ ಮೇಲೆ ಪರಿಣಾಮ ಬೀರಬಹದು. ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಮುಖ್ಯ.
ಮಿಥುನ ರಾಶಿ:
ಯಾವುದೇ ಕೆಲಸ ಇರಲಿ ಪೂರ್ಣಗೊಳಿಸಲು ತಾಳ್ಮೆ ಅತ್ಯಗತ್ಯ. ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆ ಅತ್ಯಗತ್ಯ. ಆರೋಗ್ಯವು ಸಾಮಾನ್ಯವಾಗಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಏರಿಳಿತಗಳು ಉಂಟಾಗುವ ಸಾಧ್ಯತೆ ಇದೆ.
ಕರ್ಕಾಟಕ ರಾಶಿ:
ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಸಿಗುವುದು. ವೆಚ್ಚಗಳು ಹೆಚ್ಚಾಗಬಹುದು. ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಡಬಹುದು. ಕುಟುಂಬದೊಂದಿಗೆ ಸಮಯ ಕಳೆಯಲು ಅವಕಾಶವಿರುತ್ತದೆ.
ಸಿಂಹ ರಾಶಿ:
ಆತ್ಮವಿಶ್ವಾಸ ಹೆಚ್ಚಾಗುವುದು. ತಾಳ್ಮೆಯಿಂದ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸಾಧ್ಯವಾಗುತ್ತದೆ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ಅತಿಯಾದ ಕೆಲಸವು ಆಯಾಸಕ್ಕೆ ಕಾರಣವಾಗಬಹುದು.
ಕನ್ಯಾ ರಾಶಿ:
ದೀರ್ಘಕಾಲದಿಂದ ಬಾಕಿ ಇರುವ ಕೆಲಸಗಳಲ್ಲಿ ಯಶಸ್ಸು ಸಿಗುವುದು.ಶಿಕ್ಷಣ ಮತ್ತು ಅಧ್ಯಯನಕ್ಕೆ ಸಮಯ ಅನುಕೂಲಕರವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಸಮತೋಲಿತವಾಗಿರುತ್ತದೆ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ತುಲಾ ರಾಶಿ:
ಗೊಂದಲ ಮತ್ತು ಅನಿಶ್ಚಿತತೆಯೊಂದಿಗೆ ದಿನದ ಆರಂಭವಾಗುವುದು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವುದು. ಆದರೂ ಖರ್ಚು ಮಾಡುವಾಗ ಎಚ್ಚರದಿಂದಿರಿ. ದೂರದ ಊರಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ:
ಇಂದು ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದ ಯಶಸ್ಸಿಗೆ ಕಾರಣವಾಗಬಹುದು. ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುವುದು. ಆರ್ಥಿಕ ಲಾಭವಾಗುವುದು. ಆರೋಗ್ಯ ಉತ್ತಮವಾಗಿರುತ್ತದೆ.
ಧನು ರಾಶಿ:
ಆತುರದಿಂದ ತೆಗೆದುಕೊಳ್ಳುವ ನಿರ್ಧಾರ ನಷ್ಟಕ್ಕೆ ಕಾರಣವಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ತಾಳ್ಮೆ ಅತ್ಯಗತ್ಯ.
ಮಕರ ರಾಶಿ:
ನಿಮ್ಮ ಪ್ರಯತ್ನಕ್ಕೆ ಯಶಸ್ಸು ಸಿಗುವುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ವೃತ್ತಿ ಮತ್ತು ವೈಯಕ್ತಿಕ ಜೀವನದ ಮಧ್ಯೆ ಸಮತೋಲನವನ್ನು ಕಾಪಾಡಿಕೊಳ್ಳಿ.
ಕುಂಭ ರಾಶಿ:
ಹಣಕಾಸಿನ ವಿಷಯಗಳಲ್ಲಿ ಯಶಸ್ಸು ಸಿಗುವುದು. ಆರ್ಥಿಕ ಜೀವನದಲ್ಲಿ ಸುಧಾರಣೆಯಾಗುವುದು. ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ಸಾಮರಸ್ಯ ಉಳಿಯುವುದು. ಪ್ರಯಾಣ ಮಾಡುವಾಗ ಆರೋಗ್ಯದ ಬಗ್ಗೆ ಗಮನ ಇರಲಿ.
ಮೀನ ರಾಶಿ:
ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಇಲ್ಲದಿದ್ದರೆ ನಷ್ಟವನ್ನು ಎದುರಿಸಬೇಕಾಗುತ್ತದೆ. ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು.
(ಬರಹ: ರಂಜಿತಾ ಆರ್.ಕೆ.)












Click it and Unblock the Notifications