Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ
Horoscope April 8: ಬುಧವಾರವು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರವು ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಏಪ್ರಿಲ್ 8 ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್ಲಿದೆ.
ಮೇಷ ರಾಶಿ
ಈ ವಾರ ಮೇಷ ರಾಶಿಯವರಿಗೆ ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಪ್ರೇಮಿಗಳು ಬೇಟಿ ಮಾಡುವ ಸಾಧ್ಯತೆ, ಜೀವನ ಸುಖಮಯವಾಗಿರುತ್ತದೆ. ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರುತ್ತದೆ. ವಾರದ ಮಧ್ಯದಲ್ಲಿ ಸ್ವಲ್ಪ ಅಡಚಣೆ ಉಂಟಾಗಬಹುದು, ಅಥವಾ ತೊಂದರೆಗೆ ಸಿಲುಕುವ ಸಾಧ್ಯತೆ ಇರುತ್ತದೆ, ಆದರೆ ವಾರಾಂತ್ಯದ ವೇಳೆಗೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಸೂರ್ಯ ದೇವರಿಗೆ ನೈವೇದ್ಯ ಅರ್ಪಿಸುವುದು ಮಂಗಳಕರ.

ವೃಷಭ ರಾಶಿ
ಈ ವಾರ ವೃಷಭ ರಾಶಿಯವರಿಗೆ ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹದು, ನಿಮಗೆ ಧನ ಲಾಭದ ಸೂಚನೆಗಳಿವೆ. ಮತ್ತು ಅಸ್ಥಿತ್ವದಲ್ಲಿರುವ ಮೂಲಗಳಿಂದ ಹಣವು ಹರಿದು ಬರುತ್ತದೆ. ಮೇಲಾಧಿಕಾರಿಗಳ ಬೆಂಬಲ ನಿಮಗೆ ಸಿಗುತ್ತದೆ. ವಾರದ ಕೆಲ ಕ್ಷಣಗಳು ನಿಮ್ಮಲ್ಲಿ ದು:ಖವನ್ನು ತರಬಹುದು ಆದರೆ ನೀವು ಅದನ್ನು ಯಶಸ್ವಿಯಾಗಿ ಗೆಲ್ಲುತಿರಿ.
ಮಿಥುನ ರಾಶಿ
ವೃಷಭ ರಾಶಿಯವರಿಗೆ ಇಂದು ನಿಮಗೆ ಅನುಕೂಲಕರ ದಿನ. ನಿಮ್ಮ ಸಂಗಾತಿಯೊಂದಿಗೆ ನೀವು ಹೆಚ್ಚಿನ ಅನ್ಯೋನ್ಯತೆಯನ್ನು ಇರುತ್ತಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಮಧ್ಯದಲ್ಲಿ ಸಣ್ಣ ತೊಂದರೆಗಳು ಎದುರಾದರೂ, ನೀವು ಅದನ್ನು ಸಮರ್ಥವಾಗಿ ಎದುರಿಸುತ್ತೀರಿ. ನಿಮ್ಮ ಪ್ರಣಯ ಸಂಬಂಧವು ಮದುವೆಯತ್ತ ಸಾಗುತ್ತಿದ್ದರೆ, ಇದು ನಿಜಕ್ಕೂ ಅದಕ್ಕೆ ಶುಭ ಸಮಯ. ವಾರದ ಮಧ್ಯಭಾಗವು ಕೆಲವು ಸಣ್ಣ ತೊಂದರೆಗಳನ್ನು ತರಬಹುದು, ಆದರೆ ನೀವು ಅಂತಿಮವಾಗಿ ನಿಮ್ಮ ವಿರೋಧಿಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿ ಕಾಣಬಹುದು, ಈ ವಾರ ಅದೃಷ್ಟ ನಿಮ್ಮ ಕಡೆಗೆವಾಲಿದೆ. ಭೂಮಿ, ವಾಹನ ಅಥವಾ ಆಸ್ತಿ ಖರೀದಿಗೆ ಅವಕಾಶ ಸಿಗಬಹುದು. ಆರೋಗ್ಯದಲ್ಲಿ ಸ್ವಲ್ಪ ಏರಿಳಿತ ಕಂಡುಬರುವ ಸಾಧ್ಯತೆ ಇದೆ. ವಾರದ ಮಧ್ಯದಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ. ಶತ್ರುಗಳು ನಿಮಗೆ ಅಡೆತಡೆಗಳನ್ನು ತರಬಹುದು ಆದರೆ ಅದರಲ್ಲಿ ನೀವು ಯಶಸ್ವಿಯಾಗುತ್ತಿರಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಆರೋಗ್ಯದ ಬಗ್ಗೆ ಮತ್ತು ವೈವಾಹಿಕ ಜೀವನದ ಬಗ್ಗೆ ಹೆಚ್ಚಿನ ಗಮನವಹಿಸುವುದು ಅಗತ್ಯ. ಈ ಅವಧಿಯಲ್ಲಿ ಕೆಲವು ಅಡೆತಡೆಗಳನ್ನು ನೀವು ಎದುರಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಆರೋಗ್ಯ, ವ್ಯವಹಾರಗಳಿಗೆ ಸಂಬಂದಿಸಿದ ನಿರ್ಧಾರಗಳನ್ನುತೆಗೆದುಕೊಳ್ಳವಲ್ಲಿ ಸ್ವಲ್ಪ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳವುದು ಒಳ್ಳೆಯದು. ವೃತ್ತಿಯಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸುವುದು ಹಾಗೂ ದಾನ ಮಾಡುವುದು ಶುಭ ಫಲ ನೀಡುತ್ತದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಆರೋಗ್ಯ, ಪ್ರೇಮ ಮತ್ತು ಮಕ್ಕಳ ವಿಷಯದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಆದರೆ ವೈವಾಹಿಕ ಜೀವನದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಎದುರಾಗಬಹುದು. ನಿಮ್ಮ ವ್ಯವಹಾರದ ಪ್ರಯತ್ನಗಳು ಸಕಾರತ್ಮಕ ದಿಕ್ಕಿನಲ್ಲಿ ಸಾಗುತ್ತದೆ. ಆದಾಗ್ಯೂ ಜಾಗರೂಕತೆಯಿಂದ ನಡೆದುಕೊಳ್ಳುವುದು ಉತ್ತಮ. ಈ ವಾರದಲ್ಲಿ ನೀವು ಕೆಲವು ಏರಿಳಿತಗಳನ್ನು ಸಹ ಅನುಭವಿಸಬಹುದು.
ತುಲಾ ರಾಶಿ
ತುಲಾ ರಾಶಿಯಲ್ಲಿ ಜನಿಸಿದವರಿಗೆ ಈ ವಾರ ಬಹಳ ಅನುಕೂಲಕರವಾಗಿದೆ. ಆರೋಗ್ಯ ಸುಧಾರಣೆ ಕಂಡುಬರುತ್ತದೆ. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಸಾಧ್ಯ. ನಿಮ್ಮ ವಿರೋದಿಗಳ ಮೇಲೆ ನೀವು ಮೇಲುಗೈ ಸಾಧಿಸುವಿರಿ. ನೀವು ಬಯಸುವ ಯಾವುದೆ ಕೆಲಸವು ನಿಮಗೆ ಒಲಿಯುವುದು. ವಾರದ ಅಂತ್ಯದ ವೇಳೆಗೆ ವ್ಯವಹಾರವು ವಿಸ್ತರಿಸಬಹುದಾಗಿದೆ ಮತ್ತು ನಿಮ್ಮ ಪ್ರಯತ್ನಗಳು ಸಕಾರತ್ಮಕ ಪಲಿತಾಂಶಗಳನ್ನು ನೀಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ವೃತ್ತಿಜೀವನದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಪ್ರೇಮ ಮತ್ತು ಮಕ್ಕಳ ವಿಷಯದಲ್ಲಿ ಸಣ್ಣ ಸವಾಲುಗಳು ಎದುರಾಗಬಹುದು. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ವಾರದ ಅಂತ್ಯದ ವೇಳೆಗೆ ಪರಿಸ್ಥಿತಿ ಸುಧಾರಣೆ ಕಾಣಿಸುತ್ತದೆ. ಈ ವಾರ ನೀವು ಹೆಚ್ಚಿನ ಗೊಂದಲದಲ್ಲಿ ಇರುತ್ತಿರಿ ಮತ್ತು ಕೋಪ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು ಆದ್ದರಿಂದ ನಿಮ್ಮ ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ವಾರದ ಪ್ರಾರಂಭದಲ್ಲಿ ಅತಿಯಾದ ಖರ್ಚುಗಳಿಂದಾಗಿ ನಿಮ್ಮ ಮನಸ್ಸು ಸ್ವಲ್ಪ ಅಸ್ಥಿರತೆ ಕಾಣಬಹುದು. ವಿವರಿಸಲಾಗದಂತ ಭಯವು ನಿಮ್ಮನ್ನು ಕಾಡಬಹುದು. ವಾರದ ಅಂತ್ಯದೊಳಗೆ ಎಲ್ಲವು ಸರಿಯಾಗಬಹುದು.
ಧನು ರಾಶಿ
ಧನು ರಾಶಿಯಲ್ಲಿ ಜನಿಸಿದವರಿಗೆ ವೈವಾಹಿಕ ಮತ್ತು ವೃತ್ತಿಜೀವನದಲ್ಲಿ ಸುಧಾರಣೆ ಕಂಡುಬರುತ್ತದೆ. ವಿವಾದಗಳಿಂದ ದೂರ ಇರುವುದು ಒಳ್ಳೆಯದು. ಸಾಲ ನಿಡಿದ ಹಣವು ವಾಪಸು ಸಿಗುವ ಸಾಧ್ಯತೆ ಇದೆ. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳುವ ಸಾಧ್ಯತೆ ಹೆಚ್ಚಾಗಬಹುದು. ಮಧ್ಯದಲ್ಲಿ ಸ್ವಲ್ಪ ಒತ್ತಡ ಇದ್ದರೂ, ಅಂತ್ಯದಲ್ಲಿ ಫಲಿತಾಂಶ ಉತ್ತಮವಾಗಿರುತ್ತದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಹೆಚ್ಚಿ ಅನುಕೂಲಕರವಾಗಿದೆ. ಆರೋಗ್ಯ, ಪ್ರೇಮ ಮತ್ತು ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಕಾಣಿಸುತ್ತದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೂಡಿಕೆ ಮಾಡುವಾಗ ಎಚ್ಚರಿಕೆ ಅಗತ್ಯ. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳುತ್ತದೆ ಮತ್ತು ದೂರದ ಪ್ರಯಾಣವನ್ನು ಮಾಡಬೇಕಾಗಬಹುದು.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಜನಿಸಿದವರಿಗೆ ಹಿಂದಿನ ಸಮಸ್ಯೆಗಳು ಕಡಿಮೆಯಾಗುತ್ತವೆ. ವ್ಯವಹಾರದಲ್ಲಿ ಪ್ರಗತಿ ಕಂಡುಬರುತ್ತದೆ. ಹೊಸ ಆದಾಯದ ಮಾರ್ಗಗಳು ಸಿಗುತ್ತವೆ. ಆದಾಗ್ಯೂ ಹೂಡಿಕೆಗಳ ಬಗ್ಗೆ ಎಚ್ಚರವಹಿಸುವುದು ಒಳ್ಳೆಯದು. ವಾರದ ಪ್ರಾರಂಭದಲ್ಲಿ ನೀಮಗೆ ವಿದೇಶ ಪ್ರಯಾಣದ ಅವಕಾಶ ಬರಬಹುದು. ವಾರಾಂತ್ಯದಲ್ಲಿ ಉತ್ತಮ ಫಲಿತಾಂಶ ದೊರೆಯುತ್ತದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ಆರೋಗ್ಗದ ಬಗ್ಗೆ ಗಮನ ಕೊಡಿ. ಪ್ರೇಮ ಮತ್ತು ಕುಟುಂಬ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ವಾರದ ಮಧ್ಯದಿಂದ ಪರಿಸ್ಥಿತಿ ಕ್ರಮೇಣ ಸುಧಾರಣೆ ಕಾಣುತ್ತದೆ. ವಾರದ ಅಂತ್ಯದ ವೇಳೆಗೆ ನಿಮ್ಮ ವ್ಯಾಪಾರ ನೀರಿಕ್ಷೆಗಳು ಮತ್ತು ಆದಾಯದ ಮೂಲಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ.
-
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ












Click it and Unblock the Notifications