Daily Horoscope: ಈ ರಾಶಿಯವರಿಗೆ ತೆರೆದುಕೊಳ್ಳುವುದು ಪ್ರಗತಿಯ ಹಾದಿ, ಜೀವನದಲ್ಲಿ ಹೊಸ ಬದಲಾವಣೆ
Horoscope July 10: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ (Aries):
ಇಂದು ನಿಮ್ಮ ಜೀವನದಲ್ಲಿ ಹೊಸ ಬದಲಾವಣೆ ಆಗಲಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಸಾಧ್ಯತೆಯಿದೆ. ಇಂದು ಕೆಲಸದ ಹೊರೆ ಹೆಚ್ಚಿರಬಹುದು, ಆದರೆ ನಿಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುವಿರಿ. ಇಂದು ದಿನ ಪೂರ್ತಿ ಸಂತೋಷದಿಂದ ಇರುವಿರಿ. ಕೌಟುಂಬಿಕ ಜೀವನ ಸುಖಕರವಾಗಿರುತ್ತದೆ.

ವೃಷಭ ರಾಶಿ (Taurus):
ವೃಷಭ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಉದ್ಯಮಿಗಳಿಗೆ ಇದು ಅದೃಷ್ಟದ ದಿನವಾಗಿರಲಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಿರಿ. ಭೂಮಿ ಖರೀದಿ ಬಗ್ಗೆ ಯೋಚಿಸುವಿರಿ. ವೃತ್ತಿಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಮಿಥುನ ರಾಶಿ (Gemini):
ಈ ದಿನ ಆತ್ಮವಿಶ್ವಾಸದಿಂದ ಕೂಡಿರುತ್ತದೆ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲ ಸಿಗುವುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುವುದು. ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ.
ಕರ್ಕಾಟಕ ರಾಶಿ (Cancer):
ಇಂದು ನಿಮ್ಮ ಜೀವನದಲ್ಲಿ ಹೊಸ ಸಂತೋಷ ತರಲಿದೆ. ಕೆಲಸಕ್ಕೆ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗುವುದು. ಮಾಡುವ ಕೆಲಸಗಳಲ್ಲಿ ಯಶಸ್ಸು ಸಿಗುವುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸರಿಯಾಗಿ ಯೋಚಿಸಿ. ಆತುರದ ನಿರ್ಧಾರ ಭವಿಷ್ಯದಲ್ಲಿ ಸಮಸ್ಯೆ ಉಂಟು ಮಾಡಬಹುದು.
ಸಿಂಹ ರಾಶಿ (Leo):
ಸಿಂಹ ರಾಶಿಯವರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ಪೂರ್ವ ಯೋಜಿತ ಕೆಲಸಗಳು ಇಂದು ಪೂರ್ಣಗೊಳ್ಳುತ್ತವೆ. ಹಣ ಹೂಡಿಕೆ ಮಾಡುವ ಮೊದಲು ಎಚ್ಚರವಹಿಸಿಕೊಳ್ಳಿ. ಅನಗತ್ಯವಾಗಿ ಖರ್ಚು ಮಾಡುವುದನ್ನು ತಡೆಯಿರಿ. ಖರ್ಚು ವೆಚ್ಚಗಳ ಮೇಲೆ ನಿಯಂತ್ರಣವಿರಲಿ.
ಕನ್ಯಾ ರಾಶಿ (Virgo):
ಹೊಸ ಉತ್ಸಾಹದಿಂದಲೇ ದಿನ ಆರಂಭವಾಗುವುದು. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುವುದು. ಇಂದು ಮಾಡುವ ಹೂಡಿಕೆ ದೊಡ್ಡ ಮಟ್ಟದ ಲಾಭ ತಂದುಕೊಡುವುದು. ಆರೋಗ್ಯವು ಅತ್ಯುತ್ತಮವಾಗಿರುತ್ತದೆ. ಹಣಕಾಸಿನ ಸ್ಥಿತಿ ಸುಧಾರಿಸುವುದು.
ತುಲಾ ರಾಶಿ (Libra):
ಇಂದು ನಿಮಗೆ ಅದೃಷ್ಟದ ದಿನವಾಗಲಿದೆ. ಎಲ್ಲಾ ಗೊಂದಲಗಳಿಗೆ ಸೂಕ್ತ ಉತ್ತರ ಸಿಗುವುದು. ಅರ್ಧಕ್ಕೆ ನಿಂತಿರುವ ಕೆಲಸ ಪೂರ್ಣವಾಗುವುದು. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಉತ್ತಮ ಮನ್ನಣೆ ಸಿಗುವುದು. ಬಡ್ತಿ ಸಿಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.
ವೃಶ್ಚಿಕ ರಾಶಿ (Scorpio):
ಬುದ್ಧಿವಂತಿಕೆಯಿಂದ ವರ್ತಿಸಿದರೆ ಲಾಭವಾಗುವುದು. ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ಹಣ ಕೈ ಸೇರುವುದು. ಕಠಿಣ ಪರಿಸ್ಥಿತಿಯಲ್ಲಿ ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು. ಆರೋಗ್ಯದ ಬಗ್ಗೆ ಗಮನ ಇರಲಿ.
ಧನು ರಾಶಿ (Sagitarius):
ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ನಿಮ್ಮ ವ್ಯಕ್ತಿತ್ವದಿಂದಲೇ ಎಲ್ಲರನ್ನೂ ಆಕರ್ಷಿಸುವಿರಿ. ವೃತ್ತಿಜೀವನದ ಪರಿಸ್ಥಿತಿ ಸವಾಲಿನದ್ದಾಗಿರಬಹುದು. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು.
ಮಕರ ರಾಶಿ (Capricorn):
ಬಹಳ ದಿನಗಳಿಂದ ಮಾಡಬೇಕು ಎಂದುಕೊಂಡಿರುವ ಕೆಲಸವನ್ನು ಇಂದು ಪೂರ್ತಿ ಮಾಡುವಿರಿ. ಆರ್ಥಿಕ ಲಾಭವಾಗುವುದು. ವಿದ್ಯಾರ್ಥಿಗಳಿಗೆ ಈ ದಿನ ಅದೃಷ್ಟದಿಂದ ಕೂಡಿರುವುದು. ಆರೋಗ್ಯವು ಉತ್ತಮವಾಗಿರುತ್ತದೆ.
ಕುಂಭ ರಾಶಿ (Aquarius):
ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಪೋಷಕರ ಸಲಹೆಯು ಹೊಸ ವ್ಯವಹಾರದಲ್ಲಿ ಪ್ರಯೋಜನಕಾರಿಯಾಗಿರಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಮೇಲೆ ಗಮನ ಕೇಂದ್ರೀಕರಿಸುತ್ತಾರೆ. ಆರ್ಥಿಕ ಲಾಭದ ಅವಕಾಶಗಳು ಹೆಚ್ಚಾಗಿರುತ್ತವೆ. ಆರೋಗ್ಯವು ಸಾಮಾನ್ಯವಾಗಿರುತ್ತದೆ.
ಮೀನ ರಾಶಿ (Pisces):
ಆರೋಗ್ಯವು ಮೊದಲಿಗಿಂತ ಉತ್ತಮವಾಗಿರುತ್ತದೆ. ಮಕ್ಕಳ ಸಾಧನೆ ಖುಷಿ ತರುವುದು. ಹಣಕಾಸಿನ ಸ್ಥಿತಿ ಸ್ಥಿರವಾಗಿರುವುದು. ಹೊಸ ಉದ್ಯೋಗಕ್ಕೆ ಸೇರುವ ಬಗ್ಗೆ ಯೋಚಿಸಬಹುದು. ಆರೋಗ್ಯ ಸುಧಾರಿಸುವುದು.
(ಬರಹ: ರಂಜಿತಾ ಆರ್.ಕೆ.)












Click it and Unblock the Notifications