Daily Horoscope: ಮೂರು ರಾಶಿಯವರಿಗೆ ಶುಭ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭವಾಗುವ ದಿನ

Horoscope July 16: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ (Aries):

ಮೇಷ ರಾಶಿಯವರಿಗೆ ಇಂದು ಅದ್ಭುತ ದಿನವಾಗಲಿದೆ. ಸಾಲ ನೀಡಿದ ಹಣ ಮರಳಿ ಬರುವುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಮನೆಯನ್ನು ಪುನರ್‌ ನಿರ್ಮಾಣ ಕಾರ್ಯಕ್ಕೆ ಕೈ ಹಾಕುವಿರಿ. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಆರೋಗ್ಯ ಸಮಸ್ಯೆಯಿಂದ ಮುಕ್ತಿ ಸಿಗುವುದು.

Horoscope July 16

ವೃಷಭ ರಾಶಿ (Taurus):

ವೃಷಭ ರಾಶಿಯವರಿಗೆ ಇಂದು ವಿಶೇಷ ದಿನವಾಗಲಿದೆ. ಬಹಳ ದಿನಗಳಿಂದ ಎದುರಿಸುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಉದ್ಯೋಗಿಗಳಿಗೆ ಲಾಭವಾಗುವುದು. ವಿದ್ಯಾರ್ಥಿಗಳಿಗೆ ದಿನ ಉತ್ತಮವಾಗಿರುವುದು. ಸಂಗಾತಿಯೊಂದಿಗೆ ಉತ್ತಮ ಕಾಲ ಕಳೆಯುವಿರಿ.

ಮಿಥುನ ರಾಶಿ (Gemini):

ಕೆಲಸ ಕಾರ್ಯದಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗುತ್ತದೆ. ಈ ದಿನ ನಿಮಗೆ ಸಕಾರಾತ್ಮಕವಾಗಿರುವುದು. ನಿಮಗೆ ವಹಿಸಿರುವ ಕೆಲಸಗಳನ್ನು ಸರಾಗವಾಗಿ ಮಾಡಿ ಮುಗಿಸುವಿರಿ. ಕೆಲಸದ ಹೊರೆ ಜಾಸ್ತಿಯಾಗುವುದು. ತಪ್ಪು ತಿಳುವಳಿಕೆಯಿಂದ ಸಂಬಂಧದಲ್ಲಿ ಮೂಡಿರುವ ಮನಸ್ತಾಪ ನಿವಾರಣೆಯಾಗುವುದು.

ಕರ್ಕಾಟಕ ರಾಶಿ (Cancer):

ಹೊಸ ಕೆಲಸ ಪ್ರಾರಂಭಿಸಲು ಇದು ಅನುಕೂಲಕರ ಸಮಯ. ನಿಮ್ಮ ಮನಸ್ಸಿನ ಗೊಂದಲಗಳಿಗೆ ಸ್ನೇಹಿತರಿಂದ ಪರಿಹಾರ ಸಿಗುವುದು. ಮನಸ್ಸು ನಿರಾಳವಾಗುವುದು. ಬೇರೆಯವರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಹೋಗಬೇಡಿ. ಹೊಸ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುವಿರಿ.

ಸಿಂಹ ರಾಶಿ (Leo):

ಸಿಂಹ ರಾಶಿಯವರಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುವುದು. ಇದರಿಂದ ಮಾನಸಿಕ ಒತ್ತಡವೂ ಹೆಚ್ಚಾಗುವುದು. ಎಲ್ಲಾ ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ. ಸ್ವಲ್ಪ ಸಮಯದಿಂದ ನಿಮ್ಮನ್ನು ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗುವುದು.

ಕನ್ಯಾ ರಾಶಿ (Virgo):

ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೆಲವು ಸಕಾರಾತ್ಮಕ ಬದಲಾವಣೆಗಳ ಮೂಲಕ ಲಾಭವಾಗುವುದು. ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗುವುದು. ಹೊಸ ಕೆಲಸಕ್ಕೆ ಸೇರಬೇಕೆಂದಿರುವವರಿಗೆ ಉತ್ತಮ ಅವಕಾಶ ಒಲಿದು ಬರುವುದು.

ತುಲಾ ರಾಶಿ (Libra):

ಆಸ್ತಿ ಅಥವಾ ವಾಹನ ಖರೀದಿಗೆ ಸಂಬಂಧಿಸಿದಂತೆ ದಿನ ಉತ್ತಮವಾಗಿರುವುದು. ಮಕ್ಕಳ ಶಿಕ್ಷಣ ಅಥವಾ ವೃತ್ತಿಜೀವನಕ್ಕೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ಸಿಗುವುದು. ಆತ್ಮವಿಶ್ವಾಸ ಹೆಚ್ಚಾಗುವುದು. ಸಾಮಾಜಿಕ ಸ್ಥಾನಮಾನ ಹೆಚ್ಚಾಗುವುದು. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಒಳ್ಳೆಯ ದಿನ.

ವೃಶ್ಚಿಕ ರಾಶಿ (Scorpio):

ದಿನವು ಉತ್ಸಾಹಭರಿತವಾಗಿರುವುದು. ಪೋಷಕರ ಸಹಕಾರದಿಂದ ಸಮಸ್ಯೆ ಪರಿಹಾರವಾಗುವುದು. ಸಾಲ ತೀರಿಸುವುದು ಸಾಧ್ಯವಾಗುತ್ತದೆ. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದು. ವೃತ್ತಿಪರ ಪ್ರಗತಿಗೆ ದಿನ ಅನುಕೂಲಕರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ದಿನ ಅನುಕೂಲಕರವಾಗಿರುವುದು.

ಧನು ರಾಶಿ (Sagitarius):

ಮದುವೆಯ ಪ್ರಸ್ತಾಪ ಬರಬಹುದು. ಹೆಚ್ಚಿನ ಕೆಲಸದ ಹೊರೆಯಿಂದ ದಿನವಿಡೀ ಕೆಲಸ ಮಾಡಬೇಕಾಗಿ ಬರಬಹುದು. ಮಕ್ಕಳ ಮೇಲೆ ಅತಿಯಾದ ಕಾಳಜಿ ಬೇಡ. ನಿಮ್ಮ ಮಾತುಗಳಿಂದ ಬೇರೆಯವರಿಗೆ ನೋವಾಗದಂತೆ ನೋಡಿಕೊಳ್ಳಿ. ಹಣಕಾಸಿನ ಸ್ಥಿತಿ ಸ್ಥಿರವಾಗಿರುವುದು.

ಮಕರ ರಾಶಿ (Capricorn):

ಮನೆ ಖರೀದಿಸುವ ಬಗ್ಗೆ ಯೋಚಿಸುತ್ತಿರುವವರಿಗೆ ಇದು ಸೂಕ್ತ ಸಮಯ. ವ್ಯವಹಾರಕ್ಕೆ ಸಂಬಂಧಿಸಿದಂತೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಷೇರು ಮಾರುಕಟ್ಟೆಯಿಂದ ಉತ್ತಮ ಲಾಭವಾಗುವುದು. ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಬೇಡಿ.

ಕುಂಭ ರಾಶಿ (Aquarius):

ಹೂಡಿಕೆ ಮಾಸಲು ದಿನ ಉತ್ತಮವಾಗಿರುವುದು. ಉದ್ಯಮಿಗಳಿಗೆ ಉತ್ತಮ ಲಾಭವಾಗುವುದು. ಅಗತ್ಯವಿರುವವರಿಗೆ ಸಹಾಯ ಮಾಡಲು ಮುಂದಾಗುವಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ದಿನವಾಗಿರುತ್ತದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ.

ಮೀನ ರಾಶಿ (Pisces):

ಕುಟುಂಬದ ಸಂಪೂರ್ಣ ಬೆಂಬಲ ಸಿಗುತ್ತದೆ. ಹೊಸ ಕಾರ್ಯಗಳಲ್ಲಿ ಆಸಕ್ತಿ ಬೆಳೆಯುವುದು. ವ್ಯವಹಾರದಲ್ಲಿ ಉತ್ತಮ ಪ್ರಗತಿಯಾಗುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವಿರಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ತರುವುದು.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+