Daily Horoscope: ಈ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಸಿಗುವುದು ಹೊಸ ಅವಕಾಶ, ಹಣದ ಬಗ್ಗೆ ಎಚ್ಚರಿಕೆ ಅಗತ್ಯ
Horoscope July 2: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲವು ಮಧ್ಯಾಹ್ನ 01:30 ರಿಂದ 03:00 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ (Aries):
ಇಂದು ನಿಮಗೆ ಉತ್ತಮ ದಿನವಾಗಲಿದೆ. ಹೊಸ ವ್ಯವಹಾರ ಆರಂಭಿಸಲು ಸಮಯ ಸೂಕ್ತವಾಗಿದೆ. ವೃತ್ತಿ ವ್ಯವಹಾರಗಳಲ್ಲಿ ಲಾಭವಾಗುವುದು. ಕಠಿಣ ಪರಿಶ್ರಮ ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಆರೋಗ್ಯವು ಮೊದಲಿಗಿಂತ ಉತ್ತಮವಾಗಿರುತ್ತದೆ. ಪೂಜೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ವೃಷಭ ರಾಶಿ (taurus):
ವೃಷಭ ರಾಶಿಯವರಿಗೆ ಇಂದು ಸಕಾರಾತ್ಮಕ ದಿನವಾಗಿರುತ್ತದೆ. ಸಹೋದ್ಯೋಗಿಗಳೊಂದಿಗಿನ ನಿಮ್ಮ ಬಾಂಧವ್ಯ ಉತ್ತಮವಾಗಿರುತ್ತದೆ. ಒಳ್ಳೆಯ ಕಂಪನಿಯಿಂದ ಉದ್ಯೋಗದ ಆಫರ್ ಸಿಗಬಹುದು. ವ್ಯಾಪಾರದಲ್ಲಿ ಲಾಭವಾಗುತ್ತದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತದೆ.ಆರ್ಥಿಕ ಲಾಭದ ಸಾಧ್ಯತೆಯಿದೆ. ದೀರ್ಘ ಪ್ರಯಾಣಕ್ಕೆ ತೆರಳುವ ಸಾಧ್ಯತೆ ಇದೆ.
ಮಿಥುನ ರಾಶಿ (gemini):
ಹೊಸ ಅವಕಾಶಗಳು ಸಿಗಬಹುದು. ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆಯಿಂದ ಇರುವ ಅಗತ್ಯವಿದೆ. ಇಂದು ಯಾರಿಂದಲೂ ಸಹಾಯವನ್ನು ನಿರೀಕ್ಷಿಸಬೇಡಿ, ಉದ್ಯಮಿಗಳಿಗೆ ವ್ಯವಹಾರ ವಿಸ್ತರಿಸುವ ಅವಕಾಶ ಸಿಗುವುದು.ಕುಟುಂಬದೊಂದಿಗೆ ಸಮಸಯ ಕಳೆಯುವಿರಿ. ಆರೋಗ್ಯ ಉತ್ತಮವಾಗಿರುವುದು.
ಕರ್ಕಾಟಕ ರಾಶಿ (Cancer):
ಕೆಲಸ ಕಾರ್ಯಗಳಲ್ಲಿ ಸವಾಲುಗಳು ಎದುರಾಗಬಹುದು. ಇಂದು ಹೊಸ ಯೋಜನೆಯಲ್ಲಿ ಕೆಲಸ ಮಾಡುವುದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಕೆಲಸದಲ್ಲಿ ಕಾಗದಪತ್ರಗಳನ್ನು ನಿರ್ವಹಿಸುವಾಗ ಜಾಗರೂಕರಾಗಿರಬೇಕು. ಹಲವು ದಿನಗಳಿಂದ ಬಾಕಿ ಇರುವ ಕೆಲಸ ಇಂದು ಪೂರ್ಣಗೊಳ್ಳಬಹುದು. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಸಿಂಹ ರಾಶಿ (Leo):
ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಕುಟುಂಬ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಅನುಕೂಲಕರ ಸಮಯ. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಖಂಡಿತವಾಗಿಯೂ ಯಶಸ್ವಿಯಾಗುತ್ತದೆ. ಅನಗತ್ಯ ವಸ್ತುಗಳಿಗಾಗಿ ಹಣ ಖರ್ಚು ಮಾಡಬೇಡಿ.
ಕನ್ಯಾ ರಾಶಿ (Vigro):
ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವುದು. ನಿಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಿರಿ. ಹೊಸ ಜನರೊಂದಿಗೆ ಸಂಪರ್ಕ ಏರ್ಪಡುವುದು. ಸರ್ಕಾರಿ ಉದ್ಯೋಗಿಗಳಿಗೆ ಇಂದು ಬಡ್ತಿಯ ಬಗ್ಗೆ ಒಳ್ಳೆಯ ಸುದ್ದಿ ಸಿಗಬಹುದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ನೆಲೆಯಾಗುವುದು.
ತುಲಾ ರಾಶಿ (Libra):
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಸಿಗುವುದು. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿರಿ. ವೃತ್ತಿ ಜೀವನದ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಿರಿ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಸದೃಢವಾಗಿರುತ್ತದೆ.
ವೃಶ್ಚಿಕ ರಾಶಿ (Scorpio):
ಜೀವನದಲ್ಲಿ ಹೊಸ ಅವಕಾಶಗಳು ಬರಲಿವೆ. ಎದುರಾಗುವ ಎಲ್ಲಾ ಸಮಸ್ಯೆಗಳು ಬಗೆಹರಿಯುವುದು. ಸರ್ಕಾರಿ ಕೆಲಸದಲ್ಲಿ ದೊಡ್ಡ ಮಟ್ಟದ ಲಾಭವಾಗುವ ಸಾಧ್ಯತೆ ಇದೆ. ಆದಾಯ ಹೆಚ್ಚಾದರೂ ಖರ್ಚು ವೆಚ್ಚಗಳ ಬಗ್ಗೆ ಗಮನ ಇರಲಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಸರಿಯಾಗಿ ಯೋಚಿಸಿ. ಸಾಲದಿಂದ ಮುಕ್ತಿ ಸಿಗುವುದು.
ಧನು ರಾಶಿ (Sagitarius):
ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚುವುದು. ನಿಮ್ಮ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ವೈಯಕ್ತಿಕ ಕೆಲಸಗಳ ಜೊತೆಗೆ, ಇಂದು ಮನೆಯ ಜವಾಬ್ದಾರಿಗಳು ಸಹ ಹೆಚ್ಚಾಗುತ್ತವೆ. ವೃತ್ತಿಯಲ್ಲಿ ಪ್ರಗತಿಯಾಗಿ ಹೊಸ ಅವಕಾಶಗಳು ಒಲಿಯುವುದು. ಕೌಟುಂಬಿಕ ಜೀವನ ಸಂತೋಷದಿಂದ ಕೂಡಿರುವುದು.
ಮಕರ ರಾಶಿ (Capricorn):
ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಒಳ್ಳೆಯ ದಿನ. ಹೊಸ ವ್ಯವಹಾರ ಒಪ್ಪಂದ ಮಾಡಿಕೊಳ್ಳುವಿರಿ. ಹೊಸ ಉದ್ಯೋಗಾವಕಾಶಗಳು ಒಲಿದು ಬರುವುದು. ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು ಇಂದು ಬಗೆಹರಿಯುತ್ತವೆ. ಹಣಕಾಸಿನ ಯೋಜನೆಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ ಮತ್ತು ಸಂಪತ್ತು ಹೆಚ್ಚಾಗುತ್ತದೆ.
ಕುಂಭ ರಾಶಿ (Aquarius):
ಇಂದು ನಿಮಗೆ ಉತ್ತಮ ದಿನವಾಗಲಿದೆ. ಸಕಾರಾತ್ಮಕ ಶಕ್ತಿಯು ನಿಮ್ಮನ್ನು ಸುತ್ತುವರೆದಿರುತ್ತದೆ. ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯುವುದರಿಂದ ಕೆಲವು ಪ್ರಮುಖ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ. ಇಂದು ಯಾವುದೇ ಕಾರಣಕ್ಕೂ ಅಸಡ್ಡೆ ತೋರಬೇಡಿ. ಆರೋಗ್ಯದತ್ತ ಗಮನ ಇರಲಿ.
ಮೀನ ರಾಶಿ (Pisces):
ಬಾಕಿ ಇರುವ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳತ್ತ ಒಲವು ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸುವ ಸಾಧ್ಯತೆಯಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ಉದ್ಯೋಗ ಹುಡುಕುತ್ತಿದ್ದವರಿಗೆ ಶುಭ ಸುದ್ದಿ ಸಿಗುವುದು.
(ಬರಹ: ರಂಜಿತಾ ಆರ್.ಕೆ.)












Click it and Unblock the Notifications