Horoscope July 24: ಸಿದ್ದಿಯೋಗ, ರವಿಯೋಗದಿಂದ ಈ ರಾಶಿಯವರಿಗೆ ಶುಭ ಫಲ: ಲಕ್ಷ್ಮೀ ಕೃಪೆಯಿಂದ ಸಿಗುವುದು ಯಶಸ್ಸು

Horoscope July 24: ಇಂದು (ಜುಲೈ 24) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಹಲವರಿಗೆ ಹೊಸ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳು ದೊರೆಯುವ ಸಾಧ್ಯತೆಯಿದೆ. ಹಾಗಾದ್ರೆ ಈ ದಿನ ನಿಮ್ಮ ಭವಿಷ್ಯವನ್ನು ಗಮನಿಸಿ ಯೋಜನೆ ರೂಪಿಸುವುದು ಸೂಕ್ತ.

ಮೇಷ ರಾಶಿ

ವ್ಯಾಪಾರಸ್ಥರಿಗೆ ಶುಭ ದಿನ. ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಒಳ್ಳೆಯ ದಿನ. ಪಾಲುದಾರಿಕೆ ವ್ಯವಹಾರದಿಂದ ಪ್ರಯೋಜನವಾಗಲಿದೆ. ಕೆಲಸದಲ್ಲಿ ಬಡ್ತಿಯ ಬಗ್ಗೆ ಒಳ್ಳೆಯ ಸುದ್ದಿ ಸಿಗಬಹುದು. ನಿಮ್ಮ ಗೌರವ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ.

Horoscope July 24 Zodiac Predictions for All 12 Signs Aries to Pisces Know complete details

ವೃಷಭ ರಾಶಿ

ವೃಷಭ ರಾಶಿಯವರಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ಅನಿರೀಕ್ಷಿತವಾಗಿ ಆರ್ಥಿಕ ಲಾಭವಾಗುವುದು. ತೆಗೆದುಕೊಳ್ಳುವ ನಿರ್ಧಾರವು ಯಶಸ್ವಿಯಾಗುವ ಸಾಧ್ಯತೆಯಿದೆ. ವೃತ್ತಿಜೀವನಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಯಿಂದ ನಿರಾಳರಾಗುವಿರಿ. ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರ ದಿನವಾಗಿರುತ್ತದೆ. .

ಮಿಥುನ ರಾಶಿ

ಈ ದಿನ ನಿಮ್ಮ ಜೀವನದಲ್ಲಿ ಹೊಸ ಬದಲಾವಣೆ ತರಲಿದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಸೂಕ್ತ ದಿನ. ಆತ್ಮವಿಶ್ವಾಸದಿಂದ ತುಂಬಿದ ದಿನವಾಗಿರುವುದು. ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಬಾಕಿ ಇರುವ ಕೆಲಸ ಪೂರ್ಣಗೊಳ್ಳುತ್ತದೆ.

ಕರ್ಕಾಟಕ ರಾಶಿ

ಕರ್ಕಾಟಕ ರಾಶಿಯವರಿಗೆ ಒಳ್ಳೆಯ ದಿನವಾಗಿರುತ್ತದೆ. ಹಿಂದಿನ ಹೂಡಿಕೆಗಳಿಂದ ಲಾಭವಾಗುವುದು. ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಪ್ರತಿಕೂಲ ಸಂದರ್ಭಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸುವಿರಿ. ಕೈಗೆತ್ತಿಕೊಂಡ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸುವುದು ಸಾಧ್ಯವಾಗುತ್ತದೆ.

ಸಿಂಹ ರಾಶಿ

ಈ ದಿನ ಹೊಸ ಸಂತೋಷ ತರಲಿದೆ. ಪೂರ್ವ ಯೋಜಿತ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಮನೆ, ನಿವೇಶನ, ಅಂಗಡಿ ಇತ್ಯಾದಿಗಳನ್ನು ಖರೀದಿಸುವ ಆಸೆ ಈಡೇರುತ್ತದೆ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಸಮಯನ್ನು ಕಳೆಯುವಿರಿ.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಇಂದು ಸುವರ್ಣ ದಿನವಾಗಿರಲಿದೆ. ಹಣಕಾಸಿನ ವಿಷಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಮಕ್ಕಳ ಮೂಲಕ ಒಳ್ಳೆಯ ಸುದ್ದಿ ಕೇಳುವಿರಿ. ಬಾಕಿ ಇರುವ ಕೆಲಸವು ಪೂರ್ಣಗೊಳ್ಳುವ ಸಾಧ್ಯತೆಯಿದೆ, ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ.

ತುಲಾ ರಾಶಿ

ಸಾಮಾನ್ಯಕ್ಕಿಂತ ಹೆಚ್ಚಿನ ಲಾಭವಾಗುವ ದಿನ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಗೊಂದಲಗಳು ಕೊನೆಗೊಳ್ಳುತ್ತವೆ. ವೆಚ್ಚಗಳು ಹೆಚ್ಚಾಗುತ್ತವೆ. ಸಂಗಾತಿಯು ನಿಮ್ಮ ಬೆಂಬಲಕ್ಕೆ ನಿಲ್ಲುವರು. ಸಂಬಂಧಗಳಲ್ಲಿ ಹೊಸತನ ಇರುವುದು.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಲು ಹೊಸ ಯೋಜನೆ ಶುರು ಮಾಡುವಿರಿ. ಕಠಿಣ ಪರಿಸ್ಥಿತಿಯಲ್ಲಿ ಸ್ನೇಹಿತರ ಬೆಂಬಲ ಸಿಗುವುದು. ಹೊಸ ಅತಿಥಿಯ ಆಗಮನದಿಂದ ಮನೆಯಲ್ಲಿ ಸಂತೋಷ ನೆಲೆಯಾಗುವುದು.

ಧನು ರಾಶಿ

ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಇಂದು ಸಿಗುವುದು. ನಿಮ್ಮ ವ್ಯಕ್ತಿತ್ವವು ಎಲ್ಲರನ್ನೂ ಆಕರ್ಷಿಸುತ್ತದೆ.ಮನೆಯಲ್ಲಿ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಮಕ್ಕಳಿಂದ ಶುಭ ಸುದ್ದಿ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಕರ ರಾಶಿ

ವ್ಯವಹಾರವನ್ನು ವಿಸ್ತರಿಸಲು ಶುಭ ದಿನ. ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರ್ಥಿಕ ಲಾಭವನ್ನು ಅನುಭವಿಸುವ ಸಾಧ್ಯತೆಯಿದೆ. ಇಂದು ನಿಮ್ಮ ಕೆಲಸದ ಬಗ್ಗೆ ಜಾಗರೂಕರಾಗಿರಿ.ಆರೋಗ್ಯ ಸಮಸ್ಯೆಯಿಂದ ಮುಕ್ತಿ ಸಿಗುವುದು.

ಕುಂಭ ರಾಶಿ

ಇಂದು ನಿಮಗೆ ಸಂತೋಷದ ದಿನವಾಗಿರುತ್ತದೆ. ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಉತ್ತಮ ದಿನ. ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಪರಿಹಾರ ಸಿಗುವುದು. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ ರಾಶಿ

ಮೀನ ರಾಶಿಯವರೇ, ಇಂದು ನೀವು ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರುವಿರಿ. ಶುಭ ಸಮಾರಂಭದಲ್ಲಿ ಭಾಗಿಯಾಗುವಿರಿ. ಹೊಸ ಉದ್ಯಮ ಆರಂಭಿಸಲು ಪೋಷಕರ ನೆರವು ಸಿಗುವುದು. ವಿದ್ಯಾರ್ಥಿಗಳು ಇಂದು ಉತ್ತಮ ಯಶಸ್ಸನ್ನು ಸಾಧಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+