Daily Horoscope: ಮೂರು ರಾಶಿಯವರಿಗೆ ಈ ದಿನ ಶುಭ, ವ್ಯವಹಾರ ವಿಸ್ತರಿಸುವ ಹೊಸ ಅವಕಾಶ, ಧನಲಾಭ

Horoscope July 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲವು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ (Aries):

ನಿಮ್ಮ ಎಲ್ಲಾ ಕೆಲಸಗಳು ಯೋಜನೆಯಂತೆಯೇ ನಡೆಯುವುದು. ವ್ಯವಹಾರ ವೃದ್ಧಿಯಾಗುವ ಸಾಧ್ಯತೆಯಿದೆ. ಸಾಲ ನೀಡಿದ್ದ ಹಣ ಮತ್ತೆ ನಿಮ್ಮ ಕೈ ಸೇರುವುದು. ವ್ಯವಹಾರದಲ್ಲಿ ಲಾಭ ಹೆಚ್ಚಾಗುವುದು. ಒಡಹುಟ್ಟಿದವರಿಂದ ನಿಮಗೆ ಬೆಂಬಲ ಸಿಗುತ್ತದೆ. ಈ ಹಿಂದೆ ಪ್ರಾರಂಭಿಸಿದ ಹೆಚ್ಚಿನ ಕೆಲಸಗಳು ಇಂದು ಪೂರ್ಣಗೊಳ್ಳುತ್ತವೆ.

Horoscope July 3

ವೃಷಭ ರಾಶಿ (Taurus):

ಇಂದು ನಿಮಗೆ ಅನುಕೂಲಕರ ದಿನವಾಗಿರುತ್ತದೆ. ವ್ಯವಹಾರ ವಿಸ್ತರಿಸಲು ಹೊಸ ಮತ್ತು ಲಾಭದಾಯಕ ಅವಕಾಶ ಸಿಗುವುದು. ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ. ಮಕ್ಕಳಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಬಹುದು. ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು ಇಂದು ಉದ್ಭವಿಸುತ್ತವೆ. ಆರೋಗ್ಯವು ಸಾಮಾನ್ಯವಾಗಿರುತ್ತದೆ.

ಮಿಥುನ ರಾಶಿ (Gemini):

ನಿಕಟ ಸಂಬಂಧಿಯ ಸಮಸ್ಯೆಯನ್ನು ಪರಿಹರಿಸುವಲ್ಲಿ ನೀವು ವಿಶೇಷ ಪಾತ್ರ ವಹಿಸುವಿರಿ. ಅಧ್ಯಯನದ ಮೇಲಿನ ನಿಮ್ಮ ಏಕಾಗ್ರತೆ ಕಡಿಮೆಯಾಗಬಹುದು. ನಿಮ್ಮ ಆಸಕ್ತಿಗಳಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಿ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಸಿಗುವುದು. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.

ಕರ್ಕಾಟಕ ರಾಶಿ (Cancer):

ಹೊಸ ಭರವಸೆಗಳೊಂದಿಗೆಯೇ ಈ ದಿನದ ಆರಂಭವಾಗುವುದು. ವಿದೇಶ ಪ್ರಯಾಣದ ಯೋಗವಿದೆ. ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಯಾರಿಗೂ ಸಾಲ ನೀಡಬೇಡಿ. ಆರೋಗ್ಯ ಸಮಸ್ಯೆ ಕಾಡಬಹುದು.

ಸಿಂಹ ರಾಶಿ (Leo):

ಇಂದು ನಿಮ್ಮ ದಿನ ಸಕಾರಾತ್ಮಕವಾಗಿರುತ್ತದೆ. ಆಧ್ಯಾತ್ಮಿಕತೆಯತ್ತ ಒಲವು ಹೆಚ್ಚಾಗುತ್ತದೆ. ಸಂಕಟದ ಸಮಯದಲ್ಲಿ ಕುಟುಂಬ ಸದಸ್ಯರು ಜೊತೆ ನಿಲ್ಲುವರು. ಹೊಸ ಜನರ ಪರಿಚಯವಾಗುವುದು. ಇವರಿಂದ ನಿಮಗೆ ಲಾಭವೂ ಆಗುವುದು. ಹಣಕಾಸಿನ ಸಮಸ್ಯೆಗೆ ಪರಿಹಾರ ಸಿಗುವುದು.

ಕನ್ಯಾ ರಾಶಿ (Virgo):

ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು. ಮಾಡುವ ಕೆಲಸಗಳಲ್ಲಿ ಅದೃಷ್ಟ ಜೊತೆಗಿರುವುದು. ಹೊಸ ವೃತ್ತಿ ಅವಕಾಶಗಳ ಸಾಧ್ಯತೆಗಳಿವೆ. ಕುಟುಂಬದೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ.

ತುಲಾ ರಾಶಿ (Libra):

ದೂರದ ಊರಿಗೆ ಪ್ರಯಾಣ ಬೆಳೆಸುವ ಅವಕಾಶ ಸಿಗಬಹುದು. ವ್ಯವಹಾರದಲ್ಲಿ ಗಮನಾರ್ಹವಾಗಿ ಆರ್ಥಿಕ ಲಾಭವಾಗುವುದು. ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ. ಬಾಕಿ ಇರುವ ಕೆಲಸಗಳು ಪೂರ್ಣವಾಗುವುದು. ಹಣದ ಮೂಲಗಳು ಹುಟ್ಟಿಕೊಳ್ಳುವುದು.

ವೃಶ್ಚಿಕ ರಾಶಿ (Scorpio):

ಇಂದು ನಿಮಗೆ ಅನುಕೂಲಕರ ದಿನವಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರುವುದು. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಿಗುವುದು.

ಧನು ರಾಶಿ (Sagitarius):

ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಇಂದು ತೆಗೆದುಕೊಳ್ಳುವ ನಿರ್ಧಾರ ಭವಿಷ್ಯದಲ್ಲಿ ಲಾಭ ತರುವುದು. ಹಣದ ಲಾಭವಾಗುವುದು. ಆಡಳಿತ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಬಡ್ತಿ ಸಿಗುವ ಉತ್ತಮ ಅವಕಾಶವಿದೆ.

ಮಕರ ರಾಶಿ (Capricorn):

ಕೆಲಸದ ಒತ್ತಡ ಹೆಚ್ಚಿರುತ್ತದೆ. ದೇವರ ನಾಮ ಸ್ಮರಣೆ ಮಾಡುವ ಮೂಲಕ ಮಾನಸಿಕ ಶಾಂತಿ ಹೆಚ್ಚಿಸಿಕೊಳ್ಳಬಹುದು. ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲೇರುವುದು. ಆರೋಗ್ಯವು ಸ್ಥಿರವಾಗಿರುತ್ತದೆ. ಆರೋಗ್ಯ ಇಂದು ಉತ್ತಮವಾಗಿರುತ್ತದೆ.

ಕುಂಭ ರಾಶಿ (Aquarius):

ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಸಂಗಾತಿಯೊಂದಿಗಿನ ಮನಸ್ತಾಪ ಕೊನೆಯಾಗುವುದು. ಸಂಬಂಧದಲ್ಲಿ ಮತ್ತೆ ಪ್ರೀತಿ ಹುಟ್ಟುವುದು. ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನವಾಗಿರುವುದು. ನಿರ್ದಿಷ್ಟ ಕಾರ್ಯದಲ್ಲಿ ಯಶಸ್ಸು ಸಿಗುವುದು.

ಮೀನ ರಾಶಿ (Pisces):

ಹೊಸತನದಿಂದಲೇ ದಿನ ಆರಂಭವಾಗುವುದು. ದುಬಾರಿ ವಸ್ತುಗಳಿಗಾಗಿ ಹಣ ವೆಚ್ಚ ಮಾಡಬೇಕಾಗುತ್ತದೆ. ಹೊಸ ವ್ಯವಹಾರ ಆರಂಭಿಸುವ ಬಗ್ಗೆ ಯೋಚನೆ ಮಾಡಬಹುದು. ಕುಟುಂಬದೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ. ಆರೋಗ್ಯ ಉತ್ತಮವಾಗಿರುವುದು.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+