Daily Horoscope: ಈ ರಾಶಿಯವರಿಗೆ ಆರ್ಥಿಕ ನಷ್ಟ, ಆರೋಗ್ಯದಲ್ಲಿ ಏರುಪೇರು, ತಾಳ್ಮೆ ಇದ್ದರೆ ಸಮಸ್ಯೆಗೆ ಪರಿಹಾರ

Horoscope June 10: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲವು ಮಧ್ಯಾಹ್ನ 12:00 ರಿಂದ ಮಧ್ಯಾಹ್ನ 1:30 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ (Aries):

ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ಪಡೆಯಬಹುದು. ನಿಮ್ಮ ಶಕ್ತಿ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ನೀವು ಮಾಡುವ ಕೆಲಸಕ್ಕೆ ಹಿರಿಯರ ಬೆಂಬಲ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವತಾವರಣ ಇರುವುದು.

Horoscope June 10

ವೃಷಭ ರಾಶಿ (Taurus):

ವೃಷಭ ರಾಶಿಯವರಿಗೆ ಇಂದು ಆರ್ಥಿಕವಾಗಿ ಸ್ಥಿರವಾದ ದಿನವಾಗಿರುತ್ತದೆ. ಆದರೂ ಖರ್ಚುಗಳನ್ನು ನಿಯಂತ್ರಿಸುವುದು ಅವಶ್ಯಕ. ಮಕ್ಕಳ ಮೂಲಕ ಸಂತಸದ ಸುದ್ದಿ ಕೇಳುವಿರಿ.ಹಳೆಯ ಸ್ನೇಹಿತರನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಗಮನ ಇರಲಿ.

ಮಿಥುನ ರಾಶಿ (Gemini):

ಸಂವಹನ ಕೌಶಲ್ಯವು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಅವಕಾಶಗಳು ಸಿಗುವುದು. ದೂರ ಪ್ರಯಾಣದ ಸಾಧ್ಯತೆ ಇದೆ. ಮನಸ್ಸಿನ ಸಂತೋಷ ಹೆಚ್ಚಾಗುವುದು.ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸರಿಯಾಗಿ ಯೋಚಿಸಿ ತೀರ್ಮಾನಕ್ಕೆ ಬನ್ನಿ.

ಕರ್ಕಾಟಕ ರಾಶಿ (cancer):

ಕರ್ಕಾಟಕ ರಾಶಿಯವರು ಇಂದು ಭಾವನಾತ್ಮಕ ಏರಿಳಿತಗಳನ್ನು ಅನುಭವಿಸಬಹುದು. ಕೌಟುಂಬಿಕ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಕೋಪದ ಕೈಗೆ ಬುದ್ದಿ ಕೊಡಬೇಡಿ. ನಿರ್ಧಾರಗಳನ್ನು ಶಾಂತವಾಗಿ ತೆಗೆದುಕೊಳ್ಳುವುದು ಒಳ್ಳೆಯದು, ತಾಳ್ಮೆ ಇರಲಿ. ಆರೋಗ್ಯದಲ್ಲಿ ಏರುಪೇರಾಗಬಹುದು.

ಸಿಂಹ ರಾಶಿ (Leo):

ಸಿಂಹ ರಾಶಿಯವರಿಗೆ ಇಂದು ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿರುತ್ತದೆ. ಕೆಲಸದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ನಾಯಕತ್ವದ ಅವಕಾಶಗಳು ಸಿಗಬಹುದು. ಆರ್ಥಿಕ ಸ್ಥಿತಿ ಸುಧಾರಿಸುವ ಲಕ್ಷಣಗಳಿವೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗುತ್ತದೆ.

ಕನ್ಯಾ ರಾಶಿ (Virgo):

ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಗಮನ ಕೊಡಿ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ನಿಮ್ಮ ಕೆಲಸಕ್ಕೆ ಮೇಲಾಧಿಕಾರಿಗಳಿಂದ ಮೆಚ್ಚುಗೆ ಸಿಗುವುದು.

ತುಲಾ ರಾಶಿ (Libra):

ಸಂಬಂಧಗಳು ಬಲಗೊಳ್ಳುತ್ತವೆ. ಪಾಲುದಾರಿಕೆಯಲ್ಲಿ ಮಾಡುವ ವ್ಯವಹಾರದಲ್ಲಿ ಲಾಭವಾಗುವುದು. ಕಲೆ, ಸೃಜನಶೀಲತೆ ಮತ್ತು ಸಂವಹನ ಕ್ಷೇತ್ರದಲ್ಲಿ ಪ್ರಗತಿಯಾಗುವುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಮತೋಲನವನ್ನು ಕಾಪಾಡಿಕೊಳ್ಳಿ.

ವೃಶ್ಚಿಕ ರಾಶಿ (Scorpio):

ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ಸಿಗುವುದು. ಕೆಲಸಕ್ಕೆ ಎದುರಾಗಿರುವ ಅಡೆತಡೆಗಳು ನಿವಾರಣೆಯಾಗಬಹುದು.ಆರ್ಥಿಕ ಲಾಭದ ಸಾಧ್ಯತೆ ಇದೆ. ಕೋಪವನ್ನು ನಿಯಂತ್ರಿಸುವುದು ಮುಖ್ಯ.ತಾಳ್ಮೆ ಬಹಳ ಮುಖ್ಯ.

ಧನು ರಾಶಿ (Sagitarius):

ಧನು ರಾಶಿಯವರಿಗೆ ಹೊಸ ಉದ್ಯೋಗ ಪ್ರಾರಂಭಿಸಲು ಇಂದು ಒಳ್ಳೆಯ ದಿನ. ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಗತಿಯಾಗುವುದು. ಪ್ರಯಾಣವು ಪ್ರಯೋಜನಕಾರಿಯಾಗಬಹುದು. ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಮಕರ ರಾಶಿ (Capricorn):

ಹೊಸ ಜವಾಬ್ದಾರಿಗಳು ಸಿಗಬಹುದು. ಅವುಗಳನ್ನು ನೀವು ಸಮರ್ಥವಾಗಿ ನಿಭಾಯಿಸುವಿರಿ. ಕೆಲಸದಲ್ಲಿ ಸ್ವಲ್ಪ ಒತ್ತಡವನ್ನು ಅನುಭವಿಸಬಹುದು. ಹಣಕಾಸಿನ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ನಿರ್ಧಾರಗಳಿಗೆ ಕುಟುಂಬದ ಬೆಂಬಲ ಸಿಗುತ್ತದೆ.

ಕುಂಭ ರಾಶಿ (Aquarius):

ಹೊಸ ಆಲೋಚನೆಗಳೊಂದಿಗೆ ಇಂದಿನ ದಿನ ಆರಂಭವಾಗುವುದು. ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಸಹಾಯ ಸಿಗುವುದು. ತಾಂತ್ರಿಕ ಅಥವಾ ಸೃಜನಶೀಲ ಕ್ಷೇತ್ರದಲ್ಲಿ ಯಶಸ್ಸು ಸಿಗವುದು.

ಮೀನ ರಾಶಿ (Pisces):

ಆರ್ಥಿಕ ಸ್ಥಿತಿ ಸುಧಾರಿಸುವುದು. ಗೊತ್ತಿಲ್ಲದ ಮೂಲದಿಂದ ಹಣ ಸಿಗುವುದು. ಮಾನಸಿಕ ಶಾಂತಿ ಹೆಚ್ಚಾಗುವುದು. ಆಧ್ಯಾತ್ಮಿಕ ವಿಷಯಗಳತ್ತ ಒಲವು ಹೆಚ್ಚಾಗುತ್ತದೆ. ಆರೋಗ್ಯ ಉತ್ತಮವಾಗಿರುವುದು.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+