Daily Horoscope: ಈ ರಾಶಿಯವರಿಗೆ ಹಣದ ಬಗ್ಗೆ ಜಾಗೃತೆ ಅಗತ್ಯ, ಉದ್ಯೋಗದಲ್ಲಿ ಹೊಸ ಅವಕಾಶ, ಮಕ್ಕಳಿಂದ ಸಿಹಿ ಸುದ್ದಿ
Horoscope June 12: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲವು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ರಾಹುಕಾಲವಿರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ:
ನಿಮ್ಮ ಸಂವಹನ ಕೌಶಲ್ಯಗಳು ಸುಧಾರಿಸುತ್ತವೆ. ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಪರಸ್ಪರ ತಿಳುವಳಿಕೆ ಹೆಚ್ಚಾದಂತೆ ಸಂಬಂಧಗಳು ಬಲಗೊಳ್ಳುತ್ತವೆ. ಕೆಲಸದಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ಗುರುತಿಸುವ ಸಾಧ್ಯತೆಯಿದೆ.

ವೃಷಭ ರಾಶಿ:
ಕೆಲಸದಲ್ಲಿ ಕೆಲವು ಸವಾಲುಗಳನ್ನು ಎದುರಿಸಿದರೂ, ಬುದ್ಧಿವಂತಿಕೆಯಿಂದ ಅವುಗಳನ್ನು ನಿವಾರಿಸುವಿರಿ. ಕಚೇರಿ ಕೆಲಸಗಳಲ್ಲಿ ಸಹೋದ್ಯೋಗಿಗಳ ನೆರವು ಸಿಗುವುದು. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಬೇಕು. ಹಠಾತ್ ವೆಚ್ಚಗಳು ಬರಬಹುದು.
ಮಿಥುನ ರಾಶಿ:
ಏನೇ ಸಮಸ್ಯೆ ಇದ್ದರೂ ತಾಳ್ಮೆಯಿಂದ ಮಾತನಾಡಿ ಪರಿಹರಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯತ್ತ ವಿಶೇಷ ಗಮನ ನೀಡಬೇಕು. ಹಣ ಖರ್ಚು ಮಾಡುವ ಕಾರ್ಯಗಳಿದ್ದರೆ ಸದ್ಯಕ್ಕೆ ಮುಂದೂಡುವೂದೇ ಬುದ್ದಿವಂತಿಕೆ. ಆರೋಗ್ಯದತ್ತ ಗಮನ ಹರಿಸಿ
ಕರ್ಕಾಟಕ ರಾಶಿ:
ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಅವಕಾಶಗಳು ಉದ್ಭವಿಸಬಹುದು. ಆತುರದ ನಿರ್ಧಾರ ಬೇಡ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸಬೇಕು. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಸಿಂಹ ರಾಶಿ:
ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ನಿಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವುದು ಅವಶ್ಯಕ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ಸಂತೋಷ ಸಿಗುತ್ತದೆ. ಆರೋಗ್ಯವನ್ನು ಸುಧಾರಿಸಲು ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿ. ಪ್ರತಿಯೊಂದು ಅವಕಾಶವನ್ನು ಸಕಾರಾತ್ಮಕವಾಗಿ ಸ್ವೀಕರಿಸಿ.
ಕನ್ಯಾರಾಶಿ:
ಕುಟುಂಬದಲ್ಲಿ ಸಂತಸದ ವಾತಾವರಣ ಇರುವುದು. ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮಕ್ಕಳಿಂದ ಸಂತಸದ ಸುದ್ದಿ ಸಿಗುವುದು. ಆರ್ಥಿಕ ಸ್ಥಿತಿ ಸುಧಾರಿಸುವುದು.
ತುಲಾ ರಾಶಿ:
ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಸಮಯ ಕಳೆಯುವುದು ಸಂತೋಷವನ್ನು ತರುತ್ತದೆ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿದ್ದರೂ, ಖರ್ಚುಗಳನ್ನು ನಿಯಂತ್ರಿಸಬೇಕು. ಮಾನಸಿಕ ಆರೋಗ್ಯದತ್ತ ಗಮನಹರಿಸಿ. ನಿಮ್ಮ ಪ್ರತಿಭೆಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ.
ವೃಶ್ಚಿಕ ರಾಶಿ:
ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ನಿಮ್ಮ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಲು ಸಹಾಯವಾಗುವುದು. ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದರಿಂದ ಮನಸ್ಸಿಗೆ ಸಂತಸ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಲಘು ವ್ಯಾಯಾಮವನ್ನು ಪ್ರಾರಂಭಿಸಿ.
ಧನು ರಾಶಿ:
ಆರೋಗ್ಯ ವಿಷಯಗಳಲ್ಲಿ ಹೆಚ್ಚಿನ ಕಾಳಜಿ ಅಗತ್ಯ. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವ ಅಗತ್ಯವಿದೆ.ನಿಮ್ಮ ಗುರಿಗಳ ಮೇಲೆ ಗಮನಹರಿಸಿ. ತಾಳ್ಮೆಯಿಂದ ಮುನ್ನಡೆದರೆ ಯಶಸ್ಸು ನಿಮ್ಮದಾಗುತ್ತದೆ.
ಮಕರ ರಾಶಿ:
ಹೊಸ ಸ್ನೇಹಿತರನ್ನು ಮಾಡಿಕೊಳ್ಳಲು ಇದು ಒಳ್ಳೆಯ ಸಮಯ. ಹಳೆಯ ಸ್ನೇಹಿತರನ್ನು ಭೇಟಿಯಾಗುವುದು ಪ್ರಯೋಜನಕಾರಿಯಾಗಲಿದೆ. ನಿಮ್ಮ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಿ. ಸರಿಯಾದ ನಿದ್ರೆ ಮತ್ತು ಸಮತೋಲಿತ ಆಹಾರವನ್ನು ತೆಗೆದುಕೊಳ್ಳುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆತ್ಮವಿಶ್ವಾಸದಿಂದ ಮುನ್ನಡೆದರೆ, ಯಶಸ್ಸು ನಿಮ್ಮೊಂದಿಗೆ ಇರುತ್ತದೆ.
ಕುಂಭ ರಾಶಿ:
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆಗಳಿವೆ. ಹಳೆಯ ಹೂಡಿಕೆಗಳಿಂದ ಲಾಭವಾಗುವುದು. ಉದ್ಯೋಗದಲ್ಲಿ ಹೊಸ ಅವಕಾಶಗಳು ಲಭ್ಯವಾಗುತ್ತವೆ. ಆರೋಗ್ಯದ ಬಗ್ಗೆ ಗಮನ ಹರಿಸಬೇಕು.
ಮೀನ ರಾಶಿ:
ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದರಿಂದ ಸಂಬಂಧಗಳು ಬಲಗೊಳ್ಳುತ್ತವೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ.
(ಬರಹ: ರಂಜಿತಾ ಆರ್.ಕೆ.)












Click it and Unblock the Notifications