Daily Horoscope: ಈ ದಿನ ನಾಲ್ಕು ರಾಶಿಯವರಿಗೆ ಧನಲಾಭ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕಠಿಣ ಪರಿಶ್ರಮಕ್ಕೆ ತಕ್ಕ ಫಲ
Horoscope June 23: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲವು ಸಾಮಾನ್ಯವಾಗಿ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ (Aries):
ಇಂದು ನಿಮಗೆ ವಿಶೇಷ ದಿನವಾಗಿರುತ್ತದೆ. ಒಂದು ನಿರ್ದಿಷ್ಟ ಕಾರ್ಯಕ್ಕೆ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ಆಸ್ತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಸರಿಯಾದ ಸಮಯ. ಉದ್ಯೋಗಿಗಳಿಗೆ ಪ್ರಮುಖ ಜವಾಬ್ದಾರಿಗಳು ಸಿಗಬಹುದು. ಕೆಲಸದ ಹೊರೆ ಸಾಮಾನ್ಯವಾಗಿರುತ್ತದೆ.

ವೃಷಭ ರಾಶಿ (Taurus):
ನಿಮ್ಮ ಪಾಲಿಗೆ ಇಂದು ಶುಭವಾಗಿರುತ್ತದೆ. ಧನಲಾಭವಾಗುವ ಸಾಧ್ಯತೆ ಇದೆ. ವ್ಯಾಪಾರ ವಹಿವಾಟುಗಳು ಸರಾಗವಾಗಿ ಮುಂದುವರಿಯುತ್ತವೆ. ಮನೆಯಲ್ಲಿ ಶಾಂತಿ ಮತ್ತು ಸಂತೋಷದ ವಾತಾವರಣ ಇರುತ್ತದೆ. ವೈವಾಹಿಕ ಸಂಬಂಧಗಳು ಉತ್ತಮವಾಗಿರುತ್ತವೆ.
ಮಿಥುನ ರಾಶಿ (Gemini):
ಸ್ವಲ್ಪ ಸಮಯದಿಂದ ಮಾಡುತ್ತಿರುವ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮವು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಮೊಬೈಲ್ ಅಥವಾ ಇಮೇಲ್ ಮೂಲಕ ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆಯಿದೆ.
ಕರ್ಕಾಟಕ ರಾಶಿ (Cancer):
ಅಗತ್ಯವಿದ್ದಾಗ ನಿಮ್ಮ ಸಹೋದರರು ಅಥವಾ ಆಪ್ತ ಸ್ನೇಹಿತರಿಂದ ನಿಮಗೆ ಬೆಂಬಲ ಸಿಗುತ್ತದೆ. ಎದುರಾಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ನಿವಾರಿಸಲು ಸಹಾಯವಾಗುವರು. ಅಪರಿಚಿತರೊಂದಿಗೆ ವಾದಕ್ಕೆ ಇಳಿಯಬೇಡಿ. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ.
ಸಿಂಹ ರಾಶಿ(Leo):
ಇಂದು ನಿಮಗೆ ಅನುಕೂಲಕರ ದಿನವಾಗಿರುತ್ತದೆ. ಆತ್ಮೀಯ ಸ್ನೇಹಿತನನ್ನು ಭೇಟಿಯಾಗಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಅನುಕೂಲಕರ ಫಲಿತಾಂಶಗಳನ್ನು ಪಡೆಯುವಿರಿ.
ಕನ್ಯಾ ರಾಶಿ(Virgo):
ಆತ್ಮವಿಶ್ವಾಸದೊಂದಿಗೆ ಇಂದಿನ ದಿನ ಆರಂಭವಾಗುವುದು. ಎಲ್ಲೋ ಸಿಲುಕಿಕೊಂಡಿದ್ದ ಹಣ ಮರಳಿ ಕೈ ಸೇರುವುದು. ಬಹು ದಿನಗಳ ಕನಸು ಈಡೇರುವುದು. ಕುಟುಂಬದ ವಾತಾವರಣವು ಆಹ್ಲಾದಕರ ಮತ್ತು ಶಾಂತಿಯುತವಾಗಿರುತ್ತದೆ.
ತುಲಾ ರಾಶಿ (Libra):
ಇಂದು ಹೊಸ ಉತ್ಸಾಹ ತುಂಬಿದ ದಿನವಾಗಿರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯ ಕಳೆಯುವುದರಿಂದ ಮಾನಸಿಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಯಾರಿಗೂ ಯಾವ ರೀತಿಯಲ್ಲಿಯೂ ಸಹಾಯವಾಗುವ ಭರವಸೆ ನೀಡಬೇಡಿ. ವ್ಯವಹಾರ ದೃಷ್ಟಿಯಲ್ಲಿ ನೋಡುವುದಾದರೆ ಉತ್ತಮ ದಿನವಾಗಿರುತ್ತದೆ.
ವೃಶ್ಚಿಕ ರಾಶಿ (Scorpio):
ದಿನದ ಆರಂಭದಲ್ಲಿ ಒಳ್ಳೆಯ ಸುದ್ದಿ ಸಿಗುವುದು. ಇಡೀ ದಿನ ಸಂತೋಷದಿಂದ ಕಳೆಯುವಿರಿ. ಪ್ರಭಾವಿ ಮತ್ತು ಅನುಭವಿ ವ್ಯಕ್ತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಕೆಲಸದಲ್ಲಿನ ಸಮಸ್ಯೆಗಳು ಬಗೆಹರಿಯುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ. ನಿಮ್ಮ ಸ್ವಂತ ಕೆಲಸದ ಮೇಲೆ ಗಮನಹರಿಸುವುದು ಉತ್ತಮ.
ಧನು ರಾಶಿ (Sagitarius):
ಇಂದು ನಿಮಗೆ ಅದ್ಭುತವಾದ ದಿನವಾಗಲಿದೆ. ನಿಮ್ಮ ಮನೆಯಲ್ಲಿ ಯಾವುದೇ ಬದಲಾವಣೆಗಳು ಅಥವಾ ಸುಧಾರಣೆಗಳನ್ನು ಯೋಜಿಸುತ್ತಿದ್ದರೆ, ಅವುಗಳ ಮೇಲೆ ಕೆಲಸ ಮಾಡಲು ಈಗ ಉತ್ತಮ ಸಮಯ. ಅಂದುಕೊಂಡ ಕೆಲಸವನ್ನು ಸಾಧಿಸಬಹುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ಆತುರದ ನಿರ್ಧಾರ ಬೇಡ.
ಮಕರ ರಾಶಿ (Capricorn):
ಕಚೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಹೆಚ್ಚಾಗುತ್ತದೆ. ವೈವಾಹಿಕ ಜೀವನದಲ್ಲಿ ನೆಮ್ಮದಿ ಇರುವುದು. ಇಂದು ಹೊಸ ಕೆಲಸ ಆರಂಭಿಸಬಹುದು. ದೂರದ ಊರಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕುಂಭ ರಾಶಿ (Sagitarius):
ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ಪ್ರಯತ್ನಗಳು ಮತ್ತು ಕಠಿಣ ಪರಿಶ್ರಮವು ಸಕಾರಾತ್ಮಕ ಫಲಿತಾಂಶಗಳನ್ನು ನೀಡುವ ಸಾಧ್ಯತೆಯಿದೆ. ನಿಮ್ಮ ತಾಳ್ಮೆಗೆ ಎದುರಿನವರು ಶರಣಾಗುತ್ತಾರೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ಸಿಗುವುದು. ವೈವಾಹಿಕ ಜೀವನ ಅದ್ಭುತವಾಗಿರುತ್ತದೆ.
ಮೀನ ರಾಶಿ (Pisces):
ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ಎಲ್ಲಾ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಹೂಡಿಕೆ ಮಾಡುವ ಮೊದಲು, ಅನುಭವಿ ವ್ಯಕ್ತಿಯಿಂದ ಸಲಹೆ ಪಡೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ದಿನವಾಗಿರುತ್ತದೆ.
(ಬರಹ: ರಂಜಿತಾ ಆರ್.ಕೆ.)












Click it and Unblock the Notifications