ಈ ಎರಡು ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು: ಆರ್ಥಿಕ ನಷ್ಟ ಎದುರಾಗುವ ಸಾಧ್ಯತೆ

Horoscope May 1: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದೆ. ಮೇ 1 ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ:

ಕೆಲಸದ ಹೊರೆ ಹೆಚ್ಚಾಗುವುದು. ಹೊಸ ಜವಾಬ್ದಾರಿಗಳು ಕೂಡಾ ಹೆಗಲೇರುವುದು. ಇದು ಮಾನಸಿಕ ಒತ್ತಡವನ್ನು ಏರಿಸಬಹುದು. ಹಣಕಾಸಿನ ವಹಿವಾಟುಗಳಲ್ಲಿ ಎಚ್ಚರಿಕೆಯಿಂದಿರಿ. ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಆತುರದ ನಿರ್ಧಾರ ಬೇಡ.

Horoscope May 1

ವೃಷಭ ರಾಶಿ:

ವ್ಯವಹಾರದಲ್ಲಿ ಅಪೇಕ್ಷಿತ ಲಾಭವಾಗುವುದು. ನಿಮ್ಮ ಪ್ರಯತ್ನಗಳಿಗೆ ಯಶಸ್ಸು ಸಿಗುವುದು. ಸಾಮಾಜಿಕ ಸ್ಥಾನಮಾನ ಹೆಚ್ಚಾಗುವುದು. ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ.

ಮಿಥುನ ರಾಶಿ:

ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ಸಿಗುವುದು. ನೀವು ಮಾಡುವ ಕೆಲಸ ಸಂತೋಷ ನೀಡುವುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ವೃತ್ತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಯ ಅನುಕೂಲಕರವಾಗಿದೆ.

ಕರ್ಕಾಟಕ ರಾಶಿ:

ವೃತ್ತಿಗೆ ಸಂಬಂಧಪಟ್ಟಂತೆ ಇದು ಒಳ್ಳೆಯ ಸಮಯ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಸಿಗಬಹುದು. ಹಣಕಾಸಿನ ವಹಿವಾಟುಗಳಲ್ಲಿ ಜಾಗರೂಕರಾಗಿರಿ. ಸಂದರ್ಭಗಳನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಸಿಂಹ ರಾಶಿ:

ಮಾನಸಿಕ ಒತ್ತಡ ಮತ್ತು ಅಸ್ಥಿರತೆಗೆ ಕಾರಣವಾಗಬಹುದು. ಪ್ರಗತಿಯಲ್ಲಿರುವ ಕೆಲಸಕ್ಕೆ ಅಡ್ಡಿಯಾಗಬಹುದು. ಗಮನಾರ್ಹ ಖರ್ಚು ಉಂಟಾಗಬಹುದು. ಕೆಟ್ಟ ಸಹವಾಸದಿಂದ ದೂರವಿರುವುದು ಅತ್ಯಗತ್ಯ.

ಕನ್ಯಾ ರಾಶಿ:

ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಅದೃಷ್ಟ ನಿಮ್ಮ ಕಡೆಗೆ ಇರುವುದು. ಹೂಡಿಕೆಗಳಿಂದ ಲಾಭವಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ.

ತುಲಾ ರಾಶಿ:

ಹೊಸ ಹೊಸ ಅವಕಾಶಗಳು ಒಲಿದು ಬರುವುದು. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಾಗುವುದು. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗುತ್ತದೆ. ಮೇಲಾಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುವರು.

ವೃಶ್ಚಿಕ ರಾಶಿ:

ನ್ಯಾಯಾಲಯದ ವಿಷಯಗಳಲ್ಲಿ ಜಯ ಸಿಗುವುದು. ಅವಿವಾಹಿತರಿಗೆ ಮದುವೆಯ ಪ್ರಸ್ತಾಪ ಬರುವುದು. ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗುವುದು. ಭಯ ಮತ್ತು ಚಿಂತೆಗಳು ಮುಂದುವರಿಯಬಹುದು.

ಧನು ರಾಶಿ:

ಆದಾಯದ ಮೂಲಗಳು ತೆರೆದುಕೊಳ್ಳುವುದು. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನಲ್ಲಿ ಏರುಪೇರಾಗುವುದು. ಕುಟುಂಬದ ಹಿರಿಯರೊಂದಿಗೆ ಭಿನ್ನಾಭಿಪ್ರಾಯಗಳು ಎದುರಾಗುವುದು.

ಮಕರ ರಾಶಿ:

ವ್ಯಾಪಾರದಲ್ಲಿ ಯಶಸ್ವಿಯಾಗುವುದು. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುವುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಕಾನೂನು ಅಡೆತಡೆಗಳು ನಿವಾರಣೆಯಾಗಬಹುದು.

ಕುಂಭ ರಾಶಿ:

ಹೊಸ ಅವಕಾಶಗಳಿಗೆ ಬಾಗಿಲು ತೆರೆಯುತ್ತದೆ. ಜಮೀನು ಖರೀದಿಸುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಕೆಲಸದಲ್ಲಿ ಅಡೆತಡೆಗಳು ಎದುರಾಗುವುದು. ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು.

ಮೀನ ರಾಶಿ:

ಪ್ರವಾಸವು ಆನಂದದಾಯಕವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುವುದು. ಖರ್ಚು ಮಾಡುವಾಗ ಎಚ್ಚರಿಕೆ ಅಗತ್ಯ. ದೈಹಿಕ ಆರೋಗ್ಯ ಸಮಸ್ಯೆಗಳು ಎದುರಾಗುವುದು.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+