Daily Horoscope: ಈ ರಾಶಿಯವರಿಗೆ ಹೊಸ ಅವಕಾಶ, ನಿಮ್ಮ ಮಾತಿಗೆ ವಿಶೇಷ ಮನ್ನಣೆ, ವೃತ್ತಿ ಜೀವನದಲ್ಲಿ ಪ್ರಗತಿ

Horoscope May 29: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲವು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ:

ಹೊಸ ಉತ್ಸಾಹ ಮತ್ತು ಹೊಸ ಶಕ್ತಿಯಿಂದ ತುಂಬಿರುವಿರಿ. ಆತ್ಮವಿಶ್ವಾಸ ಹೆಚ್ಚುವುದು. ಗುರಿಗಳತ್ತ ದಿಟ್ಟ ಹೆಜ್ಜೆಗಳನ್ನು ಇಡುವಿರಿ. ವ್ಯವಹಾರದಲ್ಲಿ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಅನುಕೂಲಕರ ಸಮಯ. ಆರೋಗ್ಯದತ್ತ ಹೆಚ್ಚು ಗಮನ ಹರಿಸಿ.

Horoscope May 29

ವೃಷಭ ರಾಶಿ:

ಇಂದು ನಿಮಗೆ ಹೊಸ ಅವಕಾಶಗಳು ಸಿಗುವ ಸೂಚನೆಗಳಿವೆ. ಕೆಲಸದಲ್ಲಿ ಉತ್ತಮ ಫಲಿತಾಂಶ ಸಿಗುವುದು. ಪರಿಶ್ರಮದಿಂದ ಗುರಿ ತಲುಪುವುದು ಸಾಧ್ಯವಾಗುವುದು. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದರಿಂದ ನಿಮ್ಮ ಬಂಧಗಳು ಬಲಗೊಳ್ಳುತ್ತವೆ. ಆರೋಗ್ಯವು ಸಾಮಾನ್ಯವಾಗಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ.

ಮಿಥುನ ರಾಶಿ:

ಇಂದು ಪ್ರಮುಖ ಅವಕಾಶಗಳು ಸಿಗಬಹುದು. ಮಾತು ಮತ್ತು ಸಂವಹನ ಕೌಶಲ್ಯವು ಇತರರ ಮೆಚ್ಚುಗೆಗೆ ಪಾತ್ರವಾಗುವುದು. ವೃತ್ತಿ ಅಥವಾ ವ್ಯವಹಾರ ಅಭಿವೃದ್ಧಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಸಂಬಂಧಗಳಲ್ಲಿ ತಾಳ್ಮೆ ಅಗತ್ಯ.

ಕರ್ಕಾಟಕ ರಾಶಿ:

ಸಕಾರಾತ್ಮಕ ಅನುಭವಗಳಾಗುವುದು. ಕುಟುಂಬ ಸದಸ್ಯರೊಂದಿಗಿನ ಬಾಂಧವ್ಯ ಬಲಗೊಳ್ಳುತ್ತದೆ. ಕೆಲಸದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಮನ್ನಣೆ ಸಿಗುವ ಸಾಧ್ಯತೆಯಿದೆ. ಆತುರದ ನಿರ್ಧಾರ ಬೇಡ. ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಶ್ರಾಂತಿ ತೆಗೆದುಕೊಳ್ಳಿ.

ಸಿಂಹ ರಾಶಿ:

ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಾಗುವುದು. ಆತ್ಮವಿಶ್ವಾಸದಿಂದ ಮುಂದುವರೆದರೆ ಯಶಸ್ಸು ಸಿಗುವುದು. ಹೆಚ್ಚಿನ ಜವಾಬ್ದಾರಿಗಳನ್ನು ತೆಗೆದುಕೊಳ್ಳದೆ ಸಮತೋಲನ ಕಾಯ್ದುಕೊಳ್ಳಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ವಿಶ್ರಾಂತಿ ಅಗತ್ಯ.

ಕನ್ಯಾ ರಾಶಿ:

ಗುರಿಗಳನ್ನು ಸಾಧಿಸಲು ಅನುಕೂಲಕರ ದಿನ. ಕೆಲಸದಲ್ಲಿನ ಸಣ್ಣ ಬದಲಾವಣೆಗಳು ದೊಡ್ಡ ಪ್ರಯೋಜನಗಳನ್ನು ನೀಡಬಹುದು. ಸಹೋದ್ಯೋಗಿಗಳೊಂದಿಗಿನ ಸಂಬಂಧಗಳು ಸುಧಾರಿಸುತ್ತವೆ. ಆರೋಗ್ಯ ಮತ್ತು ಮಾನಸಿಕ ಶಾಂತಿ ಸುಧಾರಿಸುತ್ತದೆ.

ತುಲಾ ರಾಶಿ:

ಇಂದು ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು. ನಿಮ್ಮ ಸೃಜನಶೀಲತೆ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಪ್ರಗತಿಯನ್ನು ತರುತ್ತದೆ. ಆರ್ಥಿಕ ವಿಷಯಗಳಲ್ಲಿ ಜಾಗರೂಕರಾಗಿರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ.

ವೃಶ್ಚಿಕ ರಾಶಿ:

ಹೊಸ ಅವಕಾಶಗಳು ಹುಟ್ಟಿಕೊಳ್ಳಬಹುದು. ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಕೆಲಸದಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳು ಸಿಗುತ್ತವೆ. ಸಹೋದ್ಯೋಗಿಗಳಿಂದ ಸಹಕಾರ ಸಿಗುತ್ತವೆ. ಖರ್ಚುಗಳ ಬಗ್ಗೆ ಜಾಗರೂಕರಾಗಿರಿ. ಆರೋಗ್ಯದತ್ತ ಕಾಳಜಿ ವಹಿಸಿ.

ಧನು ರಾಶಿ:

ಇಂದು ಆಶಾವಾದ ಮತ್ತು ಹೊಸ ಅವಕಾಶಗಳಿಂದ ತುಂಬಿರುತ್ತದೆ. ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗಿನ ಸಂಬಂಧಗಳು ಸುಧಾರಿಸುತ್ತವೆ. ನೀವಾಡುವ ಮಾತು ಭವಿಷ್ಯದಲ್ಲಿ ಅವಕಾಶಗಳನ್ನು ತರಬಹುದು. ಹಣಕಾಸಿನ ಯೋಜನೆಗಳ ಮೇಲೆ ಗಮನಹರಿಸಿ.

ಮಕರ ರಾಶಿ:

ಸಂಬಂಧಗಳ ಅಭಿವೃದ್ಧಿ ಮತ್ತು ಬಲವರ್ಧನೆಗೆ ಇಂದು ಅನುಕೂಲಕರವಾಗಿದೆ. ಮಹತ್ವಾಕಾಂಕ್ಷೆಗಳಿಗೆ ಸರಿಹೊಂದುವ ಅವಕಾಶಗಳು ಒದಗಿ ಬರಬಹುದು. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವಿಷಯಗಳಲ್ಲಿ ಮುಂಗಡ ಯೋಜನೆ ಅಗತ್ಯ. ದೀರ್ಘಾವಧಿಯ ಗುರಿಗಳತ್ತ ಗಮನಹರಿಸಿ.

ಕುಂಭ ರಾಶಿ:

ಹೊಸ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಇದು ಒಳ್ಳೆಯ ಸಮಯ. ಹೊಸ ಜನರನ್ನು ಭೇಟಿಯಾಗುವುದು ಪ್ರಯೋಜನಕಾರಿಯಾಗಬಹುದು. ಮಾನಸಿಕ ಆರೋಗ್ಯದ ಮೇಲೆ ಗಮನಹರಿಸಿ. ಅಭಿವೃದ್ಯತ್ತ ಗಮನ ಹರಿಸಿ.

ಮೀನ ರಾಶಿ:

ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ನಿಮ್ಮ ಬಾಂಧವ್ಯ ಬಲಗೊಳ್ಳುತ್ತದೆ. ತಂಡವಾಗಿ ಕೆಲಸ ಮಾಡುವ ಮೂಲಕ ಯಶಸ್ಸನ್ನು ಸಾಧಿಸುವಿರಿ. ಸೃಜನಶೀಲತೆ ಹೆಚ್ಚಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ವಿಶ್ರಾಂತಿ ಪಡೆಯುವುದು ಒಳ್ಳೆಯದು.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+