ಬದಲಾಗುವುದು ಈ ರಾಶಿಯವರ ಅದೃಷ್ಟ: ಇಂದು ಯಾವ ರಾಶಿಯವರಿಗೆ ಶುಭ?

Horoscope May 7: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲವು ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮೇ 7 ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ಮೇಷ ರಾಶಿ:

ವೃತ್ತಿ ಮತ್ತು ಉದ್ಯೋಗಗಳಲ್ಲಿ ಪ್ರಾಮುಖ್ಯತೆ ಮತ್ತು ಪ್ರಭಾವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿರೀಕ್ಷಿತ ಶುಭ ಸುದ್ದಿ ಸಿಗುತ್ತದೆ. ಆಸ್ತಿ ವಿವಾದಗಳು ಬಗೆಹರಿಯುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವುದು.

Horoscope May 7

ವೃಷಭ ರಾಶಿ:

ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಸ್ವಲ್ಪ ಒತ್ತಡ ಇರಬಹುದು. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿಯಾಗುವುದು. ಹೆಚ್ಚುವರಿ ಆದಾಯದ ಪ್ರಯತ್ನಗಳು ಫಲ ನೀಡುವುದು. ಕುಟುಂಬದಲ್ಲಿ ಸಂತೋಷ ಮನೆ ಮಾಡುವುದು.

ಮಿಥುನ ರಾಶಿ:

ವೃತ್ತಿ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಮುಂದುವರಿಯುತ್ತವೆ. ವ್ಯವಹಾರಗಳು ಪ್ರಗತಿ ಸಾಧಿಸುತ್ತವೆ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು.

ಕರ್ಕಾಟಕ ರಾಶಿ:

ಆದಾಯದ ವಿಷಯದಲ್ಲಿ ಎಲ್ಲವೂ ಅನುಕೂಲಕರವಾಗಿರುತ್ತದೆ. ಸಾಧ್ಯವಾದಷ್ಟು ಹಣಕಾಸಿನ ವ್ಯವಹಾರಗಳಿಂದ ದೂರವಿರುವುದು ಉತ್ತಮ. ಸಣ್ಣಪುಟ್ಟ ಅನಾರೋಗ್ಯದ ಸಮಸ್ಯೆ ಕಾಡಬಹುದು.

ಸಿಂಹ ರಾಶಿ:

ವ್ಯವಹಾರದಲ್ಲಿ ಕೆಲವು ಪ್ರಮುಖ ಬದಲಾವಣೆಗಳಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವುದು. ವೈಯಕ್ತಿಕ ಸಮಸ್ಯೆಗಳು ಬಗೆಹರಿಯುತ್ತವೆ. ಪ್ರೇಮ ವ್ಯವಹಾರಗಳಲ್ಲಿ ಅನ್ಯೋನ್ಯತೆ ಹೆಚ್ಚಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿ:

ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಗಲೇರುವುದು. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಉತ್ತಮ. ಆಸ್ತಿ ವಿವಾದಗಳಿಂದ ಸಮಸ್ಯೆ ಉಂಟಾಗಬಹುದು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ.

ತುಲಾ ರಾಶಿ:

ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗುವುದು. ವಿವಾಹ ಪ್ರಯತ್ನಗಳ ಕುರಿತು ನಿರೀಕ್ಷಿತ ಶುಭ ಸುದ್ದಿ ಕೇಳುವಿರಿ. ಆರ್ಥಿಕ ಪರಿಸ್ಥಿತಿ ತುಂಬಾ ಅನುಕೂಲಕರವಾಗಿರುತ್ತದೆ. ವಾಹನ ಖರೀದಿ ಯೋಗವಿದೆ.

ವೃಶ್ಚಿಕ ರಾಶಿ:

ಆರ್ಥಿಕ ಪರಿಸ್ಥಿತಿಯಲ್ಲಿ ನಿರೀಕ್ಷಿತ ಸುಧಾರಣೆ ಕಂಡುಬರಲಿದೆ. ಹೆಚ್ಚುವರಿ ಆದಾಯ ಗಳಿಸುವ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸದಲ್ಲಿ ನಿಮ್ಮ ಮೇಲಾಧಿಕಾರಿಗಳ ವಿಶ್ವಾಸವನ್ನು ಗಳಿಸುವಿರಿ.

ಧನು ರಾಶಿ:

ಉದ್ಯೋಗದಲ್ಲಿ ಸ್ಥಾನಮಾನ ಹೆಚ್ಚಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿಯಾಗುವುದು. ವೈವಾಹಿಕ ಜೀವನವು ಸಾಮರಸ್ಯದಿಂದ ಮುಂದುವರಿಯುತ್ತದೆ.

ಮಕರ ರಾಶಿ:

ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭ ಸ್ಥಿರವಾಗಿರುತ್ತದೆ. ಪ್ರತಿಯೊಂದು ಕೆಲಸದಲ್ಲೂ ಖರ್ಚುಗಳು ಹೆಚ್ಚಾಗಬಹುದು. ಕೌಟುಂಬಿಕ ಕಲಹಗಳು ಬಗೆಹರಿಯುವುದು. ಮಕ್ಕಳ ಬಗ್ಗೆ ಶುಭ ಸುದ್ದಿ ಸಿಗುವುದು.

ಕುಂಭ ರಾಶಿ:

ವೃತ್ತಿ ಮತ್ತು ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಅಪೇಕ್ಷಿತ ಮನ್ನಣೆ ಸಿಗುತ್ತದೆ. ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ. ವೈಯಕ್ತಿಕ ಸಮಸ್ಯೆಗಳು ಬಗೆಹರಿಯುತ್ತವೆ.

ಮೀನ ರಾಶಿ:

ವೃತ್ತಿ ಮತ್ತು ವ್ಯವಹಾರ ಲಾಭದಾಯಕವಾಗಿ ಮುಂದುವರಿಯುತ್ತದೆ. ಹಣಕಾಸಿನ ವಿಷಯಗಳಲ್ಲಿ ಯಶಸ್ವಿಯಾಗುವಿರಿ. ಪ್ರಮುಖ ವೈಯಕ್ತಿಕ ಸಮಸ್ಯೆ ತಾನಾಗಿಯೇ ಬಗೆಹರಿಯುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+